ಪುತ್ತೂರು: ರಾಕೇಶ್‌ಕೃಷ್ಣ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಆಯ್ಕೆ

ಪುತ್ತೂರು, ಜ. 28: ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ರಾಕೇಶ್ ಕೃಷ್ಣ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸುತ್ತನ್ನು ಆಯೋಜಿಸಿತ್ತು. ಇವರು ನೆಕ್ಕಿಲ ರವಿಶಂಕರ್ ಹಾಗೂ ವಿವೇಕಾನಂದ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥೆ ಡಾ.ದುರ್ಗಾರತ್ನ ದಂಪತಿ ಪುತ್ರನಾಗಿದ್ದಾನೆ.
Next Story





