ಪೊಲೀಸ್ ಕಾನ್‌ಸ್ಟೇಬಲ್ ನಿಧನ
.jpg)
ಕೊಣಾಜೆ,ಜ.28: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಗ್ಗಪ್ಪ(24) ಅವರು ಶನಿವಾರ ಅಸೌಖ್ಯದಿಂದ ನಿಧನರಾದರು.
ಹಾವೇರಿ ಮೂಲದ ಹೆಗ್ಗಪ್ಪ ಅವರು ಕಳೆದ ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಆರು ತಿಂಗಳ ಹಿಂದೆಯಷ್ಟೇ ಕೊಣಾಜೆ ಪೊಲೀಸ್ ಠಾಣೆಗೆ ಕಾನ್‌ಸ್ಟೇಬಲ್ ಆಗಿ ಸೇರಿ ಸೇವೆ ಸಲ್ಲಿಸುತ್ತಿದ್ದರು.
Next Story





