ಮಂಗಳೂರು : ಗೂಡ್ಸ್ ರೈಲು ಬಡಿದು ವ್ಯಕ್ತಿ ಮೃತ್ಯು

ಮಂಗಳೂರು, ಜ. 28: ಗೂಡ್ಸ್ ರೈಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ ಅಂಗರಗುಂಡಿ ಬಳಿಯ ರೈಲ್ವೆ ಹಳಿಯಲ್ಲಿ ನಡೆದಿದೆ.
ಮೃತನ ಬಗ್ಗೆ ವಿವರ ಲಭ್ಯವಾಗಿಲ್ಲ. ಮೃತದೇಹವನ್ನು ನಗರದ ವೆನ್‌ಲಾಕಂ ಆಸ್ಪತ್ರೆಯಲ್ಲಿಡಲಾಗಿದೆ.
ಇಂದು ಸಂಜೆಯ ಹೊತ್ತಿಗೆ ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯ ದೇಹ ಎರಡು ಭಾಗವಾಗಿ ಹಳಿಯಲ್ಲಿ ಬಿದ್ದುಕೊಂಡಿದ್ದು, ರಾತ್ರಿ ಹೊತ್ತಿನಲ್ಲಿ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವೆನ್‌ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆತನ ಬಳಿಯಲ್ಲಿದ್ದ ಮೊಬೈಲ್ ಪತ್ತೆಯಾಗಿದ್ದರೂ ಅದು ಸಂಪೂರ್ಣ ಜಜ್ಜಿಹೋಗಿದ್ದು, ಸಿಮ್ ಕೂಡ ಹಾನಿಗೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





