ಎಸ್.ಎಂ.ಕೃಷ್ಣ ಮನವೊಲಿಕೆಗೆ ಹೈಕಮಾಂಡ್ ಯತ್ನ

ಬೆಂಗಳೂರು, ಜ.29:ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿರುವ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮನವೊಲಿಕೆಗೆ ಕಾಂಗ್ರೆಸ್ ನ ಹೈಕಮಾಂಡ್ ಯತ್ನ ನಡೆಸಿದೆ.
ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಅಝಾದ್ ಮತ್ತು ಎ.ಕೆ ಆಂಟೆನಿ ಅವರಲ್ಲಿ ಕೃಷ್ಣ ಮನವೊಲಿಕೆಗೆ ಸೂಚನೆ ನೀಡಿದ್ದಾರೆ.
ಎಸ್.ಎಂ.ಕೃಷ್ಣ ಅವರು ಎಸ್.ಎಂ.ಕೃಷ್ಣ ಅವರು ಶನಿವಾರ ಸಕ್ರೀಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಾವು ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ಮತ್ತು ಇನ್ನುಮುಂದೆ ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡುವುದಿಲ್ಲ ಎಂದು ತಿಳಿಸಿದ್ದರು.
Next Story





