Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರುಣಾಜನಕ ಸ್ಥಿತಿಯಲ್ಲಿ ಬರ ಪೀಡಿತ...

ಕರುಣಾಜನಕ ಸ್ಥಿತಿಯಲ್ಲಿ ಬರ ಪೀಡಿತ ಪ್ರದೇಶ

ಮೇವಿಲ್ಲದೆ ರಾಸುಗಳ ಸಾವು

ಅಝೀಝ್ ಕಿರುಗುಂದಅಝೀಝ್ ಕಿರುಗುಂದ29 Jan 2017 11:05 PM IST
share
ಕರುಣಾಜನಕ ಸ್ಥಿತಿಯಲ್ಲಿ ಬರ ಪೀಡಿತ ಪ್ರದೇಶ

ಚಿಕ್ಕಮಗಳೂರು, ಜ.29: ಬರಗಾಲಪೀಡಿತ ತರೀಕೆರೆ ತಾಲೂಕಿನ ಅಜ್ಜಂಪುರ ಹೋಬಳಿ ಭಾಗದಲ್ಲಿರುವ ಅಮೃತ್ ಮಹಲ್ ಕಾವಲ್‌ನಲ್ಲಿ ಕಳೆದ 3 ತಿಂಗಳಲ್ಲಿ ತಿನ್ನಲು ಮೇವಿಲ್ಲದೆ 10 ರಾಸುಗಳು ಜೀವ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.


ಅಜ್ಜಂಪುರದ ಅಮೃತ್ ಮಹಲ್ ತಳಿಯ ರಾಸುಗಳು ರಾಜ್ಯದ ಮೊದಲ ತಳಿ. ವಿಜಯನಗರದ ಅರಸ ಕೃಷ್ಣದೇವರಾಯ ಮತ್ತು ಟಿಪ್ಪುಸುಲ್ತಾನ್ ಕಾಲದಲ್ಲೂ ವಿಶ್ವವಿಖ್ಯಾತವಾಗಿದ್ದ ಅಮೃತ ಮಹಲ್ ತಳಿಯ ರಾಸುಗಳ ಅಭಿವೃದ್ಧಿಗೆ ರಾಜ್ಯದಲ್ಲಿ ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶವಿತ್ತು ಎನ್ನುವ ದಾಖಲೆಗಳಿವೆ. ಆದರೆ ಇಂದು ಉಳಿದಿರುವುದು ಕೇವಲ 50 ರಿಂದ 60 ಸಾವಿರ ಎಕರೆ ಭೂಮಿ ಮಾತ್ರ. ಈ ಪೈಕಿ, ಅಜ್ಜಂಪುರದಲ್ಲಿ 651 ಎಕರೆ ಪ್ರದೇಶದಲ್ಲಿ ಗೋ ತಳಿ ಸಂವರ್ಧನಾ ಕಾರ್ಯ ನಡೆಯುತ್ತಿದೆ. ಸರಕಾರದ ನಿರ್ಲಕ್ಷ್ಯದಿಂದ ಈ ಮೂಕ ಪ್ರಾಣಿಗಳು ಸಂತತಿ ವಿನಾಶದ ಅಂಚಿನಲ್ಲಿವೆೆ. ರಾಸುಗಳು ತಿನ್ನಲು ಮೇವಿಲ್ಲದೆ ಸರಣಿ ಸಾವನ್ನಪ್ಪುತ್ತಿರುವ ಘಟನೆಗಳು ಜನರ ಮೈಮನಗಳನ್ನು ಕಲಕುತ್ತಿವೆ.


  ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಪ್ರತೀವರ್ಷ ಕೋಟ್ಯಂತರ ರೂ. ಅನುದಾನ ಬರುತ್ತದೆ. ಮಳೆಗಾಲದಲ್ಲಿ ಮೇವಿಗೆ ಅಗತ್ಯವಿರುವ ಮೆಕ್ಕೆಜೋಳ, ಹುಲ್ಲನ್ನು ಬೆಳೆಯಬೇಕು. ರಾಸುಗಳ ಸಾವನ್ನು ಗಮನಿಸಿದರೆ ಬಂದ ಹಣ ಗುಳುಂ ಆಗುತ್ತಿರುವ ಅನುಮಾನ ವ್ಯಕ್ತವಾಗುತ್ತಿದೆ.

ರಾಜ್ಯದ 6 ಜಿಲ್ಲೆಗಳಲ್ಲಿ ಅಮೃತ್ ಮಹಲ್ ಕಾವಲ್‌ಗಳಲ್ಲಿ ಅಜ್ಜಂಪುರ ಕೂಡ ಒಂದು. 2.50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ರಾಸುಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಬಡಕಲಾಗಿವೆ.
ರಾಸುಗಳ ಸಾವಿನ ಬಗ್ಗೆ ತಿಳಿದ ರಾಜ್ಯ ಪಶುಪಾಲನಾ ಇಲಾಖೆ ನಿರ್ದೇಶಕ ಡಾ. ಜಪ್ಪುಲ್ಲಾಖಾನ್ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದಾರೆ. 2 ತಿಂಗಳಿಗೆ ಬೇಕಾದಷ್ಟು ಒಂದು ರಾಸುವಿಗೆ ಪ್ರತೀ ನಿತ್ಯ 7 ಕೆ.ಜಿಯಂತೆ 475 ರಾಸುಗಳಿಗೆ 3.50 ಟನ್ ಮೇವಿನ ಅಗತ್ಯವಿದೆ. ತಕ್ಷಣ ಅಗತ್ಯವಾಗಿರುವ 50 ಟನ್ ಒಣ ಹುಲ್ಲು ಖರೀದಿಸಿ ಸಂಗ್ರಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.


 ಐತಿಹಾಸಿಕ ಹಿನ್ನೆಲೆಯುಳ್ಳ ಅಮೃತ್ ಮಹಲ್ ತಳಿಯ ರಾಸುಗಳನ್ನು ರಕ್ಷಿಸಬೇಕಾದ ಸರಕಾರ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಅಳಿವಿನಂಚಿನಲ್ಲಿರುವ ಈ ಮೂಕಪ್ರಾಣಿಗಳು ಹಸಿನಿಂದ ಸಾಯದಂತೆ ನೋಡಿಕೊಂಡರೆ ಸಾಕು ಎನ್ನುವುದು ಸ್ಥಳೀಯರ ಅಭಿಲಾಷೆಯಾಗಿದೆ.

ಅಮೃತ ಮಹಲ್ ಕೇಂದ್ರದಲ್ಲಿ ಸಿಬ್ಬಂದಿಯ ಕೊರತೆಯಿಂದ ಮೇವು ಬೆಳೆಯುತ್ತಿಲ್ಲ. ಮೇವು ತಯಾರಿಕೆಗೆ ವಿದೇಶಗಳಿಂದ ತರಿಸಿಕೊಂಡಿದ್ದ ಯಂತ್ರಗಳು ತುಕ್ಕು ಹಿಡಿಯುತ್ತಿವೆ. ಮೇವು ತಯಾರಿಕಾ ತೊಟ್ಟಿಗಳು ಪಾಳು ಬಿದ್ದಿವೆ. ಬರಗಾಲಪೀಡಿತ ತರೀಕೆರೆ ಭಾಗದಲ್ಲಿ ಇಂತಹ ಅಪರೂಪದ ತಳಿಗಳು ಮೇವಿಲ್ಲದೆ ಹಸಿವಿನಿಂದ ಬಳಲಿ ಪ್ರಾಣ ಬಿಡುತ್ತಿವೆ. ಬದುಕಿ ಉಳಿದ ರಾಸುಗಳು ಮೇವಿನ ಕೊರತೆಯಿಂದ ಸಾಯುವ ಸ್ಥಿತಿಯಲ್ಲಿವೆೆ. ಅಧಿಕಾರಿಗಳ ನಿರ್ಲಕ್ಷ್ಯ ಹೀಗೆ ಮುಂದುವರಿದರೆ ಈ ತಳಿ ವಿನಾಶವಾದರೂ ಆಶ್ಚರ್ಯವಿಲ್ಲ.
 ಮಹೇಶ್, ಸ್ಥಳೀಯರು

ಕಾವಲ್‌ನಲ್ಲಿ ಸಾಕಷ್ಟು ಮೇವಿನ ಸಂಗ್ರಹವಿದೆ. ಮೇವಿಲ್ಲದೆ ರಾಸುಗಳು ಸಾಯುತ್ತಿಲ್ಲ. ವಯೋ ಸಹಜವಾಗಿ ಸಾಯುತ್ತಿವೆ. ಅಲ್ಲದೇ ಕಡೂರು ತಾಲೂಕಿನ ಬಾಸೂರು ಕಾವಲ್‌ನಿಂದ ಹೆಚ್ಚಿನ ರಾಸುಗಳು ಮೇವಿಲ್ಲದೆ ಇಲ್ಲಿಗೆ ಬಂದಿರುವ ಹಿನ್ನೆಲೆಯಲ್ಲಿ ಮೇವಿಗೆ ಕೊಂಚ ಸಮಸ್ಯೆ ಎದುರಾಗಿದೆ ಡಾ.ವೀರಭದ್ರಪ್ಪ, ಪ್ರಭಾರಿ ನಿರ್ದೇಶಕ, ಅಮೃತ ಮಹಲ್ ಕಾವಲ್, ಅಜ್ಜಂಪುರ.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X