ಕೃಷ್ಣ ಬಂಡಾಯಕ್ಕೆ ರಾಹುಲ್ ಗಾಂಧಿ ಕಾರಣ ?

ಬೆಂಗಳೂರು, ಜ.30: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತು ಎಸ್ ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕೃಷ್ಣ ಆಪ್ತರಲ್ಲಿ ಹೇಳಿಕೊಂಡಿದ್ದಾರೆ.
ವಿದೇಶಾಂಗ ಸಚಿವ ಸ್ಥಾನದಿಂದಲೂ ಕೆಳಗಿಳಿಸಲಾಗಿತ್ತು. ರಾಜ್ಯಸಭೆಯ ಸದಸ್ಯರಾಗಲು ಅವಕಾಶ ಕೇಳಿದಾಗ ರಾಹುಲ್ ಗಾಂಧಿ ವಯಸ್ಸಿನ ಕಾರಣ ನೀಡಿ ಕೃಷ್ಣ ಅವರ ಮನವಿಯನ್ನು ತಿರಸ್ಕರಿಸಿದ್ದರು ಎಂದು ತಿಳಿದು ಬಂದಿದೆ.
ಕೃಷ್ಣ ಅವರು ರಾಹುಲ್ ಗಾಂಧಿ ವಿರುದ್ಧ ಗರಂ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ತಟಸ್ಥರಾಗಿ ಉಳಿದಿದ್ದಾರೆ ಎಂದು ತಿಳಿದು ಬಂದಿದೆ.
Next Story





