ಕಂಬಳದ ಮೇಲಿನ ನಿಷೇಧ ತೆರವಿಗೆ ಹೈಕೋರ್ಟ್ ನಕಾರ

ಬೆಂಗಳೂರು, ಜ. 30: ದಕ್ಷಿಣ ಕನ್ನಡ ಮತ್ತು ಉಡುಪಿಯ ಕ್ರೀಡೆ ಕಂಬಳದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಇಂದು ನಿರಾಕರಿಸಿದ್ದು, ಈ ಸಂಬಂಧ ವಿಚಾರಣೆಯನ್ನು 2 ವಾರ ಮುಂದೂಡಿದೆ.
ಕಂಬಳ ಕ್ರೀಡೆ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಕಂಬಳದ ಮೇಲಿನ ನಿಷೇಧವನ್ನು ತೆರವುಗೊಳಿಸಲು ನಿರಾಕರಿಸಿದರು ಎಂದು ತಿಳಿದುಬಂದಿದೆ.
Next Story





