ಸಿದ್ದಾಪುರ ಗ್ರಾ.ಪಂ ಅಧ್ಯಕ್ಷ ದಿಢೀರ್ ರಾಜಿನಾಮೆ

ಸಿದ್ದಾಪುರ, ಜ.30: ಸ್ಥಳೀಯ ಗ್ರಾ.ಪಂ ಅಧ್ಯಕ್ಷ ದಿಢೀರ್ ಬೆಳವಣಿಗೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಸಂಗ ಸಿದ್ದಾಪುರ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಡೆದಿದೆ.
ಸೋಮವಾರ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ ಅಧ್ಯಕ್ಷ ಎಂ.ಕೆ ಮಣಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಅಚ್ಚುಕಟ್ಟಾಗಿ ನಡೆಯುತ್ತಿದ್ದಂತೆ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದ ಸಂದರ್ಭ ಆಡಳಿತ ಪಕ್ಷದ ಕೆಲವು ಸದಸ್ಯರು ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದರಲ್ಲಿ ಅಧ್ಯಕ್ಷರು ವಿಫಲರಾಗಿದ್ದಾರೆ . ಸಮಸ್ಯೆ ಬಗೆಹರಿಸದೆ ಅಧ್ಯಕ್ಷ ಕುರ್ಚಿಯಲ್ಲಿ ಕುಳಿತುಕೊಳ್ಳದೆ ರಾಜೀನಾಮೆ ಕೊಡಿ ಎಂದು ಹೇಳಿದರು.
ಇದಕ್ಕೆ ಬಹುತೇಕ ಸದಸ್ಯರು ದ್ವನಿ ಕೂಡಿಸಿದ ಹಿನ್ನಲೆಯಲ್ಲಿ ಅಧ್ಯಕ್ಷ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರಿಗೆ ಬರವಣಿಗೆ ಮೂಲಕ ರಾಜೀನಾಮೆ ಪತ್ರ ನೀಡಿ ಸಭೆಯಿಂದ ಹೊರ ನಡೆದರು.
Next Story





