ಫೆ.3: ಅಂಗನವಾಡಿ ಕೇಂದ್ರ ಬಂದ್
ಉಡುಪಿ, ಜ.30: ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘವು ಅಂಗನ ವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.3ರಂದು ಬೆಂಗಳೂರಿನಲ್ಲಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಲ್ಲಿ ಉಡುಪಿ ತಾಲೂಕಿನ ಅಂಗನವಾಡಿ ನೌಕರರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆ ದಿನ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು ಮುಚ್ಚಿರುತ್ತವೆ ಎಂದು ಸಂಘದ ಅಧ್ಯಕ್ಷೆ ಯಮುನಾ ಆರ್.ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





