Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್.ಆರ್.ಪುರ ಭಾಗದಲ್ಲಿ ತುಂಗಾ ತಿರುವು...

ಎನ್.ಆರ್.ಪುರ ಭಾಗದಲ್ಲಿ ತುಂಗಾ ತಿರುವು ಯೋಜನೆ

ಬದಲಿ ಮಾರ್ಗ ಅನುಸರಿಸಲು ಸ್ಥಳೀಯರ ಒತ್ತಾಯ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ31 Jan 2017 10:47 PM IST
share
ಎನ್.ಆರ್.ಪುರ ಭಾಗದಲ್ಲಿ ತುಂಗಾ ತಿರುವು ಯೋಜನೆ

ಹಲವು ಹಳ್ಳಿವಾಸಿಗರಿಗೆ ಎತ್ತಂಗಡಿ ಭೀತಿ
ಚಿಕ್ಕಮಗಳೂರು, ಜ.31: ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಲು ತುಂಗಾ ತಿರುವು ಯೋಜನೆ ಕೈಗೆತ್ತಿಕೊಂಡಿರುವ ಸರಕಾರ ಕಾಮಗಾರಿ ಆರಂಭಿಸಿದೆ.

ಕಾಮಗಾರಿ ಹಿನ್ನೆಲೆಯಲ್ಲಿ ಎನ್‌ಆರ್‌ಪುರ ತಾಲೂಕಿನ ಸಾತ್ಕೋಳಿ ಅರಣ್ಯ ಪ್ರದೇಶದಲ್ಲಿ ಸರಕಾರ ಮರಗಳನ್ನು ಕಡಿದು ಉರುಳಿಸುತ್ತಿರುವುದಕ್ಕೆ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ.
ಬಯಲು ಸೀಮೆಯ ಜನರ ನೀರಿನ ದಾಹ ನೀಗಿಸಲು ಈ ಭಾಗದ ಜನರು ಹಿಂದೆ ತಮ್ಮ ಮನೆ, ಮಠ, ಆಸ್ತಿ, ಪಾಸ್ತಿಗಳ ಸಹಿತ ಹಳ್ಳಿಗಳನ್ನು ಭದ್ರಾ ಜಲಾಶಯಕ್ಕೆ ಬಲಿಕೊಟ್ಟು ನಿರಾಶ್ರಿತರ ಹಣೆಪಟ್ಟಿ ಕಟ್ಟಿಕೊಂಡಿದ್ದರು.

ಈಗ ಸರಕಾರ ಅದೇ ಜನರನ್ನು ಇನ್ನೊಂದು ಯೋಜನೆಗೆ ಬಲಿ ಕೊಡಲು ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡಿರುವ ಆರೋಪ ಸ್ಥಳೀಯರಿಂದ ಕೇಳಿ ಬರತೊಡಗಿದೆ. ಸಾತ್ಕೋಳಿ ಪರಿಸರದಲ್ಲಿ ನೂರಾರು ವರ್ಷಗಳಿಂದ ಎದ್ದು ನಿಂತಿರುವ ಬೃಹತ್ ಗಾತ್ರದ ಬೆಲೆಬಾಳುವ ಮರಗಳನ್ನು ನೆಲಕ್ಕುರುಳಿಸಲಾಗುತ್ತಿದೆ. ಇದನ್ನು ವಿರೋಧಿಸಿರುವ ಜನರು ಮತ್ತೊಂದೆಡೆ ಉಳಿದಿರುವ ಮರಗಳನ್ನು ಅಪ್ಪಿಕೊಂಡು ‘ಅಪ್ಪಿಕೋ, ಅಪ್ಪಿಕೋ’ ಚಳವಳಿ ನಡೆಸುವ ಮೂಲಕ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಾತ್ಕೋಳಿ ಅರಣ್ಯ ವ್ಯಾಪ್ತಿಯಲ್ಲಿ ಸರಕಾರ ಭದ್ರಾ ಡ್ಯಾಂಗೆ ನೀರು ತುಂಬಿಸಲು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ತುಂಗಾ ತಿರುವು ಯೋಜನೆ ಕೈಗೆತ್ತಿಕೊಂಡು ಕಾಮಗಾರಿ ಆರಂಭಿಸಿದೆ. ಎನ್‌ಆರ್‌ಪುರ ತಾಲೂಕಿನ ಕುಸುಬೂರು ಗ್ರಾಮದ ಸ.ನಂ.58ರಲ್ಲಿರುವ ತೂಬಿನಕೆರೆ ಬಲಭಾಗದಲ್ಲಿ ಪೂರ್ವ ದಿಕ್ಕಿನ ಕಡೆಗೆ ಯೋಜನೆಯು ಹಾದು ಹೋಗುವಂತೆ ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಬರುವ ಸಾತ್ಕೋಳಿ, ಮಾರಿದಿಬ್ಬ, ಕುಸುಬೂರು ಸೇರಿದಂತೆ ಅನೇಕ ಹಳ್ಳಿಗಳ ಮನೆಗಳು ಹಾಗೂ ರೈತರ ಜಮೀನುಗಳು ಬಲಿಯಾಗುತ್ತಿದೆ ಎಂದು ಹಳ್ಳಿವಾಸಿಗರು ಆರೋಪಿಸಿದ್ದಾರೆ.
  ಜೊತೆಗೆ ಈ ವ್ಯಾಪ್ತಿಯಲ್ಲಿ ಬರುವ ಸಮೃದ್ಧವಾದ ಅರಣ್ಯ ಪ್ರದೇಶವೂ ನಾಶವಾಗುವ ಅಪಾಯಕ್ಕೆ ಸಿಲುಕಿದೆ. ಈ ಯೋಜನೆಯ ಜಾರಿಯಿಂದ ಸುಮಾರು 22 ಸಾವಿರಕ್ಕೂ ಹೆಚ್ಚು ಮರಗಳು ನೆಲಕಚ್ಚಲಿರುವ ಆತಂಕ ಸ್ಥಳೀಯರನ್ನು ಕಂಗಾಲಾಗುವಂತೆ ಮಾಡಿದೆ.

ಈಗಾಗಲೇ ನೀರಾವರಿ ಇಲಾಖೆಗೆ ಸ್ಥಳೀಯ ಗ್ರಾಮಸ್ಥರು ಬದಲಿ ಮಾರ್ಗವನ್ನು ಸೂಚಿಸಿದ್ದು, ಅರಣ್ಯ ಸಂಪತ್ತು ನಾಶಪಡಿಸದಂತೆ ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
ಸರಕಾರ ಇಲ್ಲಿನ ಜನರನ್ನು ನಿರಾಶ್ರಿತರನ್ನಾಗಿ ಮಾಡುವ ಬದಲು ಗ್ರಾಮಸ್ಥರ ಅಭಿಪ್ರಾಯದಂತೆ ನಡೆದರೆ ಯಾವ ಹಾನಿಯೂ ಆಗುವುದಿಲ್ಲ.

ಸರಕಾರಿ ಅಧಿಕಾರಿಗಳು ಗುರುತಿಸಿರುವ ತೂಬಿನಕೆರೆ ಬಲಭಾಗದಲ್ಲಿ ಪೂರ್ವ ದಿಕ್ಕಿಗೆ ಕಾಲುವೆ ಹಾದು ಹೋಗುವ ಬದಲು, ಕಾಲುವೆಯನ್ನು ತೂಬಿನಕೆರೆಯ ಎಡಭಾಗದಲ್ಲಿ ಪೂರ್ವ ದಿಕ್ಕಿನ ಮಾರ್ಗವಾಗಿ ತೆಗೆದುಕೊಂಡು ಹೋದಲ್ಲಿ ಗ್ರಾಮಗಳಿಗೆ ತೊಂದರೆಯಾಗದು.

ಅಲ್ಲದೆ ಆ ಪ್ರದೇಶ ಬಯಲು ಪ್ರದೇಶವಾಗಿರುವುದರಿಂದ ಕಾಡನ್ನು ಕಡಿಯುವುದು ಉಳಿಯುತ್ತದೆ. ಜೊತೆಗೆ 4 ಕಿ.ಮೀ ಅಂತರ ಕಡಿಮೆಯಾಗುತ್ತದೆ.
ಪ್ರಕಾಶ್, ಯುವ ಮುಖಂಡ

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X