ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಆಯ್ಕೆ

ಉಡುಪಿ, ಜ.31: ರಾಜ್ಯ ಸರಕಾರದ ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಅಕ್ಬರಲಿ ಮುಕ್ಕ ಆಯ್ಕೆಯಾಗಿದ್ದಾರೆ.
ಶಾಸಕ ಮೊಯ್ದಿನ್ ಬಾವಾ ಶಿಫಾರಸಿನ ಮೇರೆಗೆ ಸರಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅಕ್ಬರಲಿ ಸುರತ್ಕಲ್ ಪುರಸಭೆ ಕೌನ್ಸಿಲರ್ ಆಗಿ, ಮುಕ್ಕ ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಮುಕ್ಕ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಮುಕ್ಕ ನಸ್ರತುಲ್ ಮಸಾಕಿನ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ, ಮುಕ್ಕ ಜುಮಾ ಮಸೀದಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
Next Story





