ರಸ್ತೆ ಅಪಘಾತ: ಪಾದಚಾರಿ ಮೃತ್ಯು
ಕಾಪು, ಜ.31: ಮೂಳೂರು ಸುನಿ ್ನಸೆಂಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ 8ಗಂಟೆ ಸುಮಾರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮುಳೂರಿನ ಪಮ್ಮಿ ಶಿವಣ್ಣ ಶೆಡ್ತಿ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಮ್ಮಿ ಎಂಬವರಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
Next Story





