Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬನ್ನೇರುಘಟ್ಟದಲ್ಲಿ ಪ್ರವಾಸಿಗರ ಕಾರಿನ...

ಬನ್ನೇರುಘಟ್ಟದಲ್ಲಿ ಪ್ರವಾಸಿಗರ ಕಾರಿನ ಮೇಲೆರಗಿದ ಸಿಂಹಗಳು!

ವಾರ್ತಾಭಾರತಿವಾರ್ತಾಭಾರತಿ1 Feb 2017 8:58 AM IST
share
ಬನ್ನೇರುಘಟ್ಟದಲ್ಲಿ ಪ್ರವಾಸಿಗರ ಕಾರಿನ ಮೇಲೆರಗಿದ ಸಿಂಹಗಳು!

ಬೆಂಗಳೂರು, ಫೆ.1: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗಳನ್ನು ಕರೆದೊಯ್ಯುತ್ತಿದ್ದ ಐಷಾರಾಮಿ ವಾಹನದ ಮೇಲೆ ಸಿಂಹಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಅಧಿಕ ಮೊತ್ತದ ಟಿಕೆಟ್ ಖರೀದಿಸುವ ವಿಲಾಸಿ ಪ್ರವಾಸಿಗರಿಗಾಗಿ ವಿಶೇಷವಾಗಿ ವ್ಯವಸ್ಥೆ ಮಾಡಿರುವ ಟೊಯಾಟೊ ಇನ್ನೋವಾ ವಾಹನದ ಮೇಲೆ ಸಿಂಹಗಳು ದಾಳಿ ಮಾಡುತ್ತಿರುವುದು ಇದು ಎರಡನೆ ಬಾರಿ.

ಸಿಂಹಗಳು ದಾಳಿ ಮಾಡುತ್ತಿರುವ ವೀಡಿಯೋವನ್ನು ಕೆಲ ಸ್ಥಳೀಯ ಟಿವಿ ಚಾನಲ್‌ಗಳು ಮಂಗಳವಾರ ಪ್ರಸಾರ ಮಾಡಿವೆ. ಇನ್ನೋವಾ ವಾಹನದ ಹಿಂದಿದ್ದ ಸಫಾರಿಯ ಚಾಲಕ ಈ ವಿಡಿಯೊ ಚಿತ್ರೀಕರಣ ಮಾಡಿದ್ದಾನೆ. ಈ ದೃಶ್ಯಾವಳಿಯ ಪ್ರಕಾರ, ಇನ್ನೋವಾ ವಾಹನದ ತೀರಾ ಸಮೀಪಕ್ಕೆ ಬಂದ ಎರಡು ಸಿಂಹಗಳ ಪೈಕಿ ಒಂದು ಸಿಂಹವನ್ನು ಮನವೊಲಿಸಿದ ಬಳಿಕ ವಾಹನಕ್ಕೆ ಮೊದಲು ರಸ್ತೆ ದಾಟಿ ಹೋಗಲು ಮುಂದಾಯಿತು. ಆದರೆ ಮತ್ತೊಂದು ಸಿಂಹ, ವಾಹನದ ಮೇಲಕ್ಕೆ ಹತ್ತಿ ಹಿಂದಿನ ಬದಿಯ ಗಾಜಿನ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತು. ಪ್ರವಾಸಿಗರು ಭೀತಿಯಿಂದ ಕಿರುಚಿಕೊಳ್ಳುತ್ತಿರುವ ಧ್ವನಿ ಸ್ಪಷ್ಟವಾಗಿ ಕೇಳಿಸುತ್ತಿದೆ. ವಾಹನ ಮುಂದಕ್ಕೆ ಹೋಗುತ್ತಿದ್ದಂತೆ ಸಿಂಹ ಹೊರಟುಹೋಗಿರುವುದು ವೀಡಿಯೊದಲ್ಲಿ ದಾಖಲಾಗಿದೆ.

ಬನ್ನೇರುಘಟ್ಟ ಉದ್ಯಾನವನದ ಆಡಳಿತ ನಿರ್ದೇಶಕ ಸಂತೋಷ್ ಕುಮಾರ್ ಅವರು, ಸುರಕ್ಷತೆ ಬಗ್ಗೆ ಗಮನ ಹರಿಸದ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಜನವರಿ 28 ಅಥವಾ 29ರಂದು ಈ ದಾಳಿ ನಡೆದಿದೆ. ಇದು ಚಾಲಕನ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ. ಆತ ಯಾವುದೇ ಕಾರಣಕ್ಕೆ ವಾಹನ ನಿಲ್ಲಿಸಬಾರದಿತ್ತು. ಪ್ರವಾಸಿಗರನ್ನು ಓಲೈಸುವ ಸಲುವಾಗಿ ಇಂಥ ಸಾಹಸ ಮಾಡಲಾಗಿದೆ. ಆತನನ್ನು ಸಫಾರಿ ಕರ್ತವ್ಯದಿಂದ ಕಿತ್ತುಹಾಕಲಾಗಿದೆ" ಎಂದು ಅವರು ಹೇಳಿದ್ದಾರೆ.

"ಸಾರ್ವಜನಿಕರನ್ನು ಹೊತ್ತೊಯ್ಯುವ ದೊಡ್ಡ ವಾಹನಗಳ ಗಾಜುಗಳಿಗೆ ಮೆಷ್ ಅಳವಡಿಸಲಾಗಿದೆ. ಆದರೆ ಚಿಕ್ಕ ವಾಹನಗಳಿಗೆ ಎಲ್ಲ ಬದಿಯಿಂದಲೂ ಮೆಷ್ ಅಳವಡಿಸುವುದು ಅಸಾಧ್ಯ. ಇನ್ನೊವಾ ವಾಹನದ ಎರಡೂ ಬದಿಗಳಿಗೆ ಮೆಷ್ ಅಳವಡಿಸಲಾಗಿದೆ. ಆದರೆ ಎದುರು ಹಾಗೂ ಹಿಂದಿನ ಗಾಜಿಗೆ ಅಳವಡಿಸಿಲ್ಲ. ಸಣ್ಣ ವಾಹನಗಳನ್ನು ಸೇವೆಯಿಂದ ತೆಗೆದು ಸಫಾರಿ ಬಸ್ಸುಗಳನ್ನಷ್ಟೇ ಉಳಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ" ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X