Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. "ಜಾತಿವಾದಿಗಳಿಗೆ ತಕ್ಕ ಪಾಠ ಕಲಿಸಿ"

"ಜಾತಿವಾದಿಗಳಿಗೆ ತಕ್ಕ ಪಾಠ ಕಲಿಸಿ"

ಕೃಷ್ಣ ನಿರ್ಗಮನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಗಮನಕ್ಕೆ ಕೆಲವು ಪ್ರಮುಖ ಅಂಶಗಳು

ಶಶಿಧರ್ ತಿಪ್ಪಣ್ಣಶಶಿಧರ್ ತಿಪ್ಪಣ್ಣ1 Feb 2017 12:17 PM IST
share
ಜಾತಿವಾದಿಗಳಿಗೆ ತಕ್ಕ ಪಾಠ ಕಲಿಸಿ

ತೀರ್ಮಾನ ನಿಮ್ಮದು ; ನಿರೀಕ್ಷೆ ನಮ್ಮದು : 

ಸರಿ ಸುಮಾರು ನಲವತ್ತಾರು ವರ್ಷಗಳಿಂದ  ಕಾಂಗ್ರೆಸ್ ಪಕ್ಷ  ಎಲ್ಲ ಸ್ತರದ ಅಧಿಕಾರ ಕೊಟ್ಟರೂ ಸಹ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನ ಇದೆ ಎನ್ನುವುದಾದರೆ, ದಲಿತ ಸಮುದಾಯದ ನಾಯಕನೊಬ್ಬ ಸಂಸದೀಯ ಪಕ್ಷದ ನಾಯಕನಾಗಿರುವುದು ಹಾಗೂ ಹಿಂದುಳಿದ ವರ್ಗದ ನಾಯಕನೊಬ್ಬ ಮುಖ್ಯಮಂತ್ರಿಯಾಗಿರುವುದು ಎಸ್ಎಮ್ ಕೃಷ್ಣ ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದೇ ಅರ್ಥ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯದ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರ ಆಡಳಿತ ನೀಡುವುದನ್ನು ಸಹಿಸಿಕೊಳ್ಳಲಾಗದೇ ಪಕ್ಷದಲ್ಲಿರುವ ಮತ್ತು ವಿರೋಧ ಪಕ್ಷದಲ್ಲಿರುವ ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳು ಸಿದ್ದರಾಮಯ್ಯನವರ ವಿರುದ್ಧ ಇನ್ನಿಲ್ಲದ ಷಡ್ಯಂತ್ರ ಹೆಣೆಯುವದರ ಭಾಗವಾಗಿ ಎಸ್.ಎಂ.ಕೃಷ್ಣರವರು ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ  ಕಾಂಗ್ರೆಸ್ಸಿನ ಹೈಕಮಾಂಡ್ ಮತ್ತು ಸಿದ್ದರಾಮಯ್ಯನವರ ಮೇಲೆ ವಿನಾಕಾರಣ ಗೂಬೆ ಕೂರಿಸುವ ಯತ್ನ ಮಾಡುತ್ತಿರುವುದು ಮಾತ್ರ ದುರದೃಷ್ಟಕರ ಬೆಳವಣಿಗೆ ಎಂದರೆ ತಪ್ಪಾಗಲಾರದು.

ಆದರೆ  ಕಾಂಗ್ರೆಸ್ಸಿನ ಹೈಕಮಾಂಡ್ ಆಗಲಿ ಅಥವಾ ಸಿದ್ದರಾಮಯ್ಯನವರಾಗಲಿ ಇಂತಹ ವ್ಯವಸ್ಥಿತ ಕುತಂತ್ರ ರಾಜಕಾರಣದ ಪಿತೂರಿಗೆ ಎದೆಗುಂದದೆ ಹಾಗೂ ವಿಚಲಿತರಾಗದೆ ರಾಜ್ಯದ ಜನತೆಯ ಹಿತದೃಷ್ಟಿಯಿಂದ  ಉತ್ತಮ  ಆಡಳಿತ ನೀಡುವ ಬಗ್ಗೆ ಗಮನ ಹರಿಸುವುದು ಒಳ್ಳೆಯದು.

ಕೆಲವು ಪ್ರಮುಖ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರಲು ಪ್ರಯತ್ನಿಸುತ್ತೇನೆ.

"ಉರಿಯುವವರು ಉರಿಯಲಿ,ಕುದಿಯುವವರು ಕುದಿಯಲಿ

ಉರಿಯುವವರು ಉರಿದು ಬೂದಿಯಾಗುತ್ತಾರೆ, ಕುದಿಯುವವರು ಕುದಿದು ಆವಿಯಾಗುತ್ತಾರೆ".

ಅಂತಹವರ ಬಗ್ಗೆ ತಲೆ ಕೆಡಿಸಿಕೊಳ್ಳದೆ ,

''ಹರಿಯುವ ಹಾವಿಗಂಜಿ ಸುರೆಯ ಮೊನೆಗಂಜೆ 

ಅನಿ ಬಿಜ್ಜಳಗಂಜುವನೆ ?" ಎಂಬಂತೆ

ನೀವು ಮಾತ್ರ ಧೈರ್ಯದಿಂದ ಮುನ್ನುಗ್ಗುವ ಮೂಲಕ ಜಾತಿವಾದಿಗಳಿಗೆ ತಕ್ಕ ಪಾಠ ಕಲಿಸುವ ಆವಶ್ಯಕತೆ ಇದೆ.

1. ಕಾಂಗ್ರೆಸ್ಸಿನಿಂದ ಹೊರ ನಡೆಯುವವರ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳಬೇಡಿರಿ. ಹೋಗುವವರು ಹೋಗಲಿ ; ಬರುವವರು ಬರಲಿ.

2.  ಹನ್ನೆರಡನೆಯ ಐತಿಹಾಸಿಕ ಜನಪರ ಅಯವ್ಯಯ ಮಂಡಿಸುವತ್ತ ಗಮನ ಕೇಂದ್ರೀಕೃತವಾಗಬೇಕಿದೆ.

3. ಕಳೆದ ನಾಲ್ಕು ವರ್ಷಗಳ ಆಡಳಿತದಲ್ಲಿ ಸರಕಾರ ಕೈಗೊಂಡ ಅಭಿವೃದ್ಧಿಯ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ತಲುಪುವಂತೆ ಮಾಡಬೇಕಿದೆ.

ಯಾಕೆಂದರೆ ಸರಕಾರದ ಸಾಧನೆಗಳ ಬಗ್ಗೆ ಪ್ರಚಾರದ ಕೊರತೆ ಎದ್ದು ಕಾಣುತ್ತಿದೆ.

ಪ್ರತಿ ಜಿಲ್ಲೆಯ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದಾಗಲಿ ಅಥವ ಪಕ್ಷದ ವತಿಯಿಂದಾಗಲಿ ಅಥವ ಮಂತ್ರಿಗಳಿಂದಾಗಲಿ ಪ್ರಚಾರ ಕಾರ್ಯ ಭರದಿಂದ ಸಾಗಬೇಕಾಗಿದೆ.

A. ಪ್ರಥಮ ಹಂತದಲ್ಲಿ ಜಿಲ್ಲೆಯ ಇಲಾಖಾವಾರು ಅಧಿಕಾರಿಗಳು ತಮ್ಮ ಇಲಾಖೆಯಿಂದ ಕೈಗೊಂಡಿರುವ ಮತ್ತು ಮುಂದೆ ಕೈಗೊಳ್ಳಬೇಕಾಗಿರುವ ಅಭಿವೃದ್ಧಿಯ ಬಗ್ಗೆ ಮಾದ್ಯಮಗಳಲ್ಲಿ ಪತ್ರಿಕಗೋಷ್ಠಿಯ ಮೂಲಕ  ಪ್ರಚಾರ ಮಾಡಬೇಕಿದೆ.

B. ಎರಡನೇಯ ಹಂತವಾಗಿ, ಪ್ರತಿ ಇಲಾಖೆಯ ಸಚಿವರುಗಳ ಸಂಸದೀಯ ಕಾರ್ಯದರ್ಶಿಗಳು ಜಿಲ್ಲಾವಾರು ಪ್ರವಾಸ ಮಾಡಿ , ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಭಿವೃದ್ಧಿಯ ಬಗ್ಗೆ ಆಯಾ ಜಿಲ್ಲೆಯ ಮತದಾರರಿಗೆ ಮನವರಿಕೆಯಾಗುವಂತೆ ಮಾಧ್ಯಮಗಳ ಮೂಲಕ ಹಾಗೂ ಸಾರ್ವಜನಿಕ ಸಭೆಗಳ ಮೂಲಕ  ಸಮರ್ಪಕ ಪ್ರಚಾರ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಹಾಗೆಯೇ  ಸಂಸದೀಯ  ಕಾರ್ಯದರ್ಶಿಗಳಿಂದ ತಿಂಗಳಿಗೊಮ್ಮೆ ಅಥವಾ ಎರಡು ತಿಂಗಳಿಗೊಮ್ಮೆ  ತಾಲೂಕಾ ಕೇಂದ್ರಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಆಲಿಸಲು ಸಭೆಗಳನ್ನು ನಡೆಸುವಂತೆ ಕ್ರಮ ಕೈಗೊಳ್ಳಬೇಕಿದೆ.

C. ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ತಿಂಗಳಿಗೊಮ್ಮೆ ಪ್ರತಿ ಇಲಾಖೆಯ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವದರ ಜೊತೆಗೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಿ ಮತದಾರರಿಗೆ ಸರಕಾರದ ಸಾಧನೆಯ ಬಗ್ಗೆ ಮನವರಿಕೆ ಮಾಡಿ,  ಮೆಚ್ಚುಗೆ ವ್ಯಕ್ತ ಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪರ ನಿಲ್ಲುವಂತೆ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ.

D. ಅಂತಿಮವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಗಳು ಮತ್ತು ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಗಳು ರಾಜ್ಯದಾದ್ಯಂತ ಪ್ರವಾಸ ಮಾಡಿ ಸರಕಾರದ ಸಾಧನೆಗಳ ಪಟ್ಟಿಯನ್ನು ಕಿರು ಹೊತ್ತಿಗೆಯ(ಪುಸ್ತಕ ರೂಪದಲ್ಲಿ) ಮೂಲಕ ಪ್ರತಿ ಹಳ್ಳಿ ಹಳ್ಳಿಗೆ ತಲುಪಿಸುವ ಕಾರ್ಯವಾಗಬೇಕಿದೆ.

ಅತ್ಯಂತ ಪ್ರಮುಖವಾಗಿ ಕೈಗೊಳ್ಳಬೇಕಾಗಿರುವ  ಕಾರ್ಯಕ್ರಮಗಳು : 

1. ಆದಷ್ಟು ಬೇಗ ಭೂರಹಿತ ಪಜಾ/ಪಪಂ, ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಭೂಮಿ ಹಂಚಿಕೆಯಾಗಬೇಕು.

2. ಪಜಾ/ಪಪಂ , ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

3. ತಾವು ಈಗಾಗಲೇ ಪ್ರತಿಪಾದಿಸಿದಂತೆ ಒಟ್ಟಾರೆ ಈಗಿರುವ ಮೀಸಲಾತಿಯ ಪ್ರಮಾಣ ಶೇ.50 ದಿಂದ 70ಕ್ಕೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು.

4. ಖಾಸಗಿ ವಲಯದಲ್ಲಿ 'ಅಹಿಂದ' ಸಮುದಾಯದವರಿಗೆ ಉದ್ಯೋಗ ಮತ್ತು ತರಬೇತಿಯಲ್ಲಿ ಮೀಸಲಾತಿ ಜಾರಿಗೊಳಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

5. ಸತತ ಬರಗಾಲದಿಂದ ಕಂಗೆಟ್ಟಿರುವ ರೈತರ ಬದುಕಿಗೆ ಆರ್ಥಿಕ  ಭದ್ರತೆಯ ಇನ್ನಷ್ಟು ಕಾರ್ಯಕ್ರಮಗಳು ಜಾರಿಯಾಗಬೇಕು.

ಎಲ್ಲಕ್ಕಿಂತ ಬಹು ಮುಖ್ಯವಾಗಿ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿದ ಜಾತಿವಾರು ಸಮೀಕ್ಷೆಯ ವರದಿ ಸರಕಾರಕ್ಕೆ ಸಲ್ಲಿಕೆಯಾಗುವಂತೆ ಕ್ರಮ ವಹಿಸಬೇಕು. 

ಜಾತಿವಾರು ಜನಗಣತಿಯ ವರದಿಯನ್ನು  ಸರಕಾರ ಯಥಾವತ್ತಾಗಿ ಒಪ್ಪಿಕೊಂಡ ನಂತರ ವರದಿಯಲ್ಲಿ ಉಲ್ಲೇಖಿಸಿದ ಸಿಫಾರಸ್ಸಿನ ಅನ್ವಯ ಸಾಮಾಜಿಕ , ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುವ  ನಿರ್ಣಯಗಳನ್ನು ತೆಗೆದುಕೊಳ್ಳುವ ಮೂಲಕ ತಾವೊಬ್ಬ ಜನಪರ ಮತ್ತು ಸಾಮಾಜಿಕ ನ್ಯಾಯದ ಪರವಾಗಿರುವ ಜನಪ್ರಿಯ  ಮುಖ್ಯಮಂತ್ರಿ ಎಂದು ಸಾಬೀತುಪಡಿಸಿಕೊಳ್ಳುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಿದೆ.

ರಾಜಕೀಯ ಕ್ರಾಂತಿ : 

2018 ರಲ್ಲಿ ಎದುರಿಸಬೇಕಾಗಿರುವ ವಿಧಾನಸಭಾ ಚನಾವಣೆಯಲ್ಲಿ ಟಿಕೆಟ್ ಹಂಚಿಕೆಯ ವಿಷಯದಲ್ಲಿ ಮಹತ್ತರವಾದ ನಿರ್ಣಯ ಕೈಗೊಳ್ಳಬೇಕಿದೆ.

ಈಗಾಗಲೇ ತಮ ಜನಪ್ರಿಯತೆ ಸಹಿಸಿಕೊಳ್ಳಲಾಗದ ಜಾತಿವಾದಿ ಮನಸ್ಥಿತಿಯವರು ಪಕ್ಷದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಅನವಶ್ಯಕ ಗೊಂದಲ ಉಂಟು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಂತಹ ಅತೃಪ್ತ ಆತ್ಮಗಳನ್ನು ಮುಲಾಜಿಲ್ಲದೆ ಪಕ್ಷದಿಂದ ಹೊರ ನೂಕುವ ಕಾರ್ಯವಾಗಬೇಕಿದೆ.

ಹಾಗೆಯೇ ಜಾತಿವಾರು ಜನಗಣತಿಯ ಆಧಾರದಲ್ಲಿ ದಲಿತ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರಿಗೆ ಅವರವರ ಜನಸಂಖ್ಯೆಗನುಗುಣವಾಗಿ ಕ್ಷೇತ್ರವಾರು, ಜಾತಿವಾರು, ಜಿಲ್ಲಾವಾರು ಟಿಕೆಟ್ ಹಂಚಿಕೆ ಮಾಡುವ ಮೂಲಕ ನೈಜ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕಿದೆ.

ಯಾವ ಜಿಲ್ಲೆಯಲ್ಲಿ ಯಾವ ಸಮುದಾಯವರಿಗೆ ರಾಜಕೀಯವಾಗಿ ಅನ್ಯಾಯವಾಗಿದೆಯೋ ? ಅಂತಹ ಕ್ಷೇತ್ರಗಳಲ್ಲಿ ಅವಕಾಶ ವಂಚಿತ ಸಮುದಾಯಗಳ ಯುವಕರನ್ನು ಗುರುತಿಸಿ  ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ತಮ್ಮ ಸಾಮಾಜಿಕ ಬದ್ಧತೆಯನ್ನು ಪಣಕ್ಕಿಡಬೇಕಿದೆ.

ಕೆಲ ಸಾಮಾನ್ಯ  ಕ್ಷೇತ್ರಗಳಲ್ಲಿಯೂ ಸಹ ಪಜಾ/ಪಪಂ , ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಯುವಕರಿಗೆ ಹೆಚ್ಚಿನ  ಆದ್ಯತೆ ನೀಡಿದಲ್ಲಿ ನಿಮ್ಮ ಹೆಸರು ರಾಜಕೀಯ  ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯುವದರಲ್ಲಿ ಅನುಮಾನವೇ ಬೇಡ.

ಈ ಮೇಲೆ ತಿಳಿಸಿದಂತೆ ಸೂಕ್ತ ಕ್ರಮ ಕೈಗೊಂಡಲ್ಲಿ , 2018 ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವದರಲ್ಲಿ ಅನುಮಾನವೇ ಇಲ್ಲ. 

ಕಾಂಗ್ರೆಸ್ ಪಕ್ಷದ ವತಿಯಿಂದ ಎಲ್ಲ ರೀತಿಯ ಅಧಿಕಾರ ಅನುಭವಿಸಿಯೂ ಪಕ್ಷಕ್ಕೆ ದ್ರೋಹ ಬಗೆಯುತ್ತಿರುವ ಹಾಗೂ ಪಕ್ಷದ ನಾಯಕತ್ವಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಗುಜರಿ ರಾಜಕಾರಣಿಗಳನ್ನು ಹೊರಹಾಕಿ ಸಮರ್ಥ ಯುವಕರಿಗೆ ರಾಜಕೀಯ  ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾದ ಅನಿವಾರ್ಯತೆ ಇದೆ. 

ಆದ್ದರಿಂದ ತಾವು ಪಕ್ಷದ ನಿಷ್ಠಾವಂತ ನಾಯಕರನ್ನು ಮತ್ತು ಯುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿ ಸಮುದಾಯದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಫಲರಾದರೆ ನಿಮ್ಮಂಥ ಬಹು ದೊಡ್ಡ ಸಾಮಾಜಿಕ ಕಾಳಜಿ ಹೊಂದಿರುವ ನಾಯಕ ಬೇರೆ ಯಾರೂ ಇರಲಾರರು.

ಕ್ರಾಂತಿಕಾರಕ ಇತಿಹಾಸ ನಿರ್ಮಿಸುವ ಅವಕಾಶ ಮತ್ತು ಅಹಿಂದ ಸಮುದಾಯದ ಸ್ವಾಭಿಮಾನದ ರಾಜಕೀಯ ಭವಿಷ್ಯ ನಿಮ್ಮ ಕೈಯಲ್ಲಿದೆ.

ತೀರ್ಮಾನ ನಿಮ್ಮದು - ನಿರೀಕ್ಷೆ ನಮ್ಮದು .

share
ಶಶಿಧರ್ ತಿಪ್ಪಣ್ಣ
ಶಶಿಧರ್ ತಿಪ್ಪಣ್ಣ
Next Story
X