Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಫೆ.3ರಂದು ಮೋಟರ್ ಕಾಯ್ದೆ ವಿರೋಧಿಸಿ...

​ಫೆ.3ರಂದು ಮೋಟರ್ ಕಾಯ್ದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Feb 2017 1:53 PM IST
share
​ಫೆ.3ರಂದು ಮೋಟರ್ ಕಾಯ್ದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು, ಫೆ.1: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮೋಟರ್ ಕಾಯ್ದೆ ಹಾಗೂ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಫೆ.3ರಂದು ಬೆಳಗ್ಗೆ 10 ಗಂಟೆಗೆ ನಗರದ ಆರ್‌ಟಿಒ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಮ್ ಕೋಡಿಜಾಲ್ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಟರ್ ಕಾಯ್ದೆ, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಕುರಿತು ಎಐಸಿಸಿ ಆದೇಶ ಮತ್ತು ಕೆಪಿಸಿಸಿ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯ ನೇತೃತ್ವದಲ್ಲಿ ಸುಳ್ಯ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಬೆಳ್ತಂಗಡಿಯ ಸಹಿತ ಎಲ್ಲ ಬ್ಲಾಕ್ ಕಾಂಗ್ರೆಸ್ ಘಟಕಗಳು ಪ್ರತಿಭಟನೆ ನಡೆಸಲಿದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೀಸೆಲ್, ಪೆಟ್ರೋಲ್‌ಗಳ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರಕಾರ ತಿಂಗಳಿಗೆ ಎರಡು ಬಾರಿ ಇಂಧನ ಬೆಲೆ ಏರಿಸಿರುವುದು ಖಂಡನೀಯ. ಬೆಲೆ ಏರಿಕೆ ತಡೆಗಟ್ಟಲು ಇಂಧನ ಬೆಲೆಯನ್ನು ಇಳಿಸುವುದು ಅಗತ್ಯವಿದ್ದು, ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದನ್ನು ಜನಸಾಮಾನ್ಯರು ವಿರೋಧಿಸುತ್ತಿದ್ದಾರೆ ಎಂದು ಇಬ್ರಾಹೀಮ್ ಕೋಡಿಜಾಲ್ ಹೇಳಿದರು.

ಮೋಟರ್ ಕಾಯ್ದೆಯಿಂದ ಚಾಲಕರ ಲೈಸೆನ್ಸ್ ರದ್ದಾದಲ್ಲಿ 5 ವರ್ಷಗಳವರೆಗೆ ಪರವಾನಿಗೆ ರದ್ದಾಗುತ್ತದೆ. ಇದರಿಂದ ಅವರ ಕುಟುಂಬದ ನಿರ್ವಹಣೆ ಹೇಗೆ? ದೇಶದಲ್ಲಿ ಹೆಚ್ಚು ಬಡವರಿದ್ದಾರೆ. ಅವರು ದಂಡ ಕಟ್ಟುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಮೋದಿಯ ಕ್ರಮ ಅನ್ಯಾಯದ ಪರಮಾವಧಿಯಾಗಿದೆ ಎಂದು ಹೇಳಿದರು.

ಚಾಲಕರು ಸೀಟ್ ಬೆಲ್ಟ್, ಬೈಕ್ ಸವಾರರು ಹೆಲ್ಮೆಟ್ ಧರಿಸದಿದ್ದಲ್ಲಿ 1,000 ರೂ. ದಂಡ ಹಾಗೂ ಸಿಗ್ನಲ್ ದಾಟಿದರೆ 5,000 ರೂ. ದಂಡವನ್ನು ಹೇರುವ ಕಾಯ್ದೆಯನ್ನು ತರಲಾಗುತ್ತಿದೆ. ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಡವರು, ಕಾರ್ಮಿಕರು, ಜನಸಾಮಾನ್ಯರಿದ್ದಾರೆ. ಬಡವರು ದಂಡ ಕಟ್ಟಲು ಹಣವನ್ನು ಯಾವ ಮೂಲದಿಂದ ತರಬೇಕು ಎಂದು ಪ್ರಶ್ನಿಸಿದರು.

ದೇಶದ ಎಲ್ಲ ಪ್ರಧಾನಿಗಳು ಯಾವುದೇ ನೂತನ ಯೋಜನೆಗಳನ್ನು ಜಾರಿಗೆ ತರಲು ಸಂಪುಟದ ಸಹೋದ್ಯೋಗಿಗಳು, ಸಂಸದರ, ವಿರೋಧ ಪಕ್ಷಗಳ ಸಲಹೆ ಪಡೆದುಕೊಳ್ಳುತ್ತಿದ್ದರು.ನೆಹರೂ ಅವರಿಂದ ಹಿಡಿದು ಡಾ.ಮನಮೋಹನ್ ಸಿಂಗ್‌ವರೆಗೆ ಎಲ್ಲರೂ ಸಲಹೆ ಪಡೆದು ಯೋಜನೆ ರೂಪಿಸುತ್ತಿದ್ದರು. ಆದರೆ ಮೋದಿ ತಮಗೆ ಬೇಕಾದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.

‘ಮೋದಿ ದೇಶದ ಜನರಿಗೆ ಅಚ್ಛೇ ದಿನ್ ತರುತ್ತೇನೆ, ವಿದೇಶದಲ್ಲಿರುವ ಕಪ್ಪುಹಣ ತರುತ್ತೇನೆ, ಆ ಹಣವನ್ನು ದೇಶದ ಜನರ ಖಾತೆಗೆ ಹಾಕುತ್ತೇನೆ ಎಂದು ಹೇಳಿ ಜನರಿಗೆ ವಂಚನೆ ಮಾಡಿರುವುದು ಖಂಡನೀಯ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬಲರಾಜ್ ರೈ , ಹರ್ಷರಾಜ್ ಮುದ್ಯ, ವಿಶ್ವಾಸ್ ಕುಮಾರ್ ದಾಸ್, ಶಬ್ಬೀರ್ ಸಿದ್ದಕಟ್ಟೆ, ಅಶ್ರಫ್ ಕೆ., ಸುಬೋದ್ ಆಳ್ವ, ಜಯಶೀಲ ಅಡ್ಯಂತಯ, ನಝೀರ್ ಬಜಾಲ್, ಸಂತೋಷ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X