ಪಿ. ಎ. ಪಾಲಿಟೆಕ್ನಿಕ್‌ನಲ್ಲಿ ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯಗಳ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ

ಕೊಣಾಜೆ , ಫೆ.1 : ಫೆ .1 ಪಿ ಎ ಪಾಲಿಟೆಕ್ನಿಕ್‌ನಲ್ಲಿ ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯಗಳ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿ ಆಗಮಿಸಿದ ಅಡ್ವೊಕೇಟ್ ದಯಾನಂದ .ಎ. ರ‍್ಯಾಗಿಂಗ್ ಹಾಗೂ ಅದರಲ್ಲಿ ತೊಡಗಿಸಿಕೊಳ್ಳುವುದರಿಂದಾಗುವ ಕಾನೂನಾತ್ಮಕ ಅಡಚಣೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಇನ್ನೋರ್ವ ಅತಿಥಿ ಕೊಣಾಜೆ ಠಾಣೆಯ ವೃತ್ತ ನಿರೀಕ್ಷಕರಾದ ಅಶೋಕ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ , ವಿದ್ಯಾರ್ಥಿಗಳು ರ‍್ಯಾಗಿಂಗ್ ಹಾಗೂ ಮಾದಕ ದ್ರವ್ಯಗಳ ವ್ಯಸನದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಹೇಳಿದರು.
ದ.ಕ ಜಿಲ್ಲಾ ಹಿರಿಯ ಮಲೇರಿಯಾ ನಿರೀಕ್ಷಕರಾದ ಶ್ರೀ ಜಯರಾಮ ಪೂಜಾರಿ ಯವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಕೆ. ಪಿ ಸೂಫಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲರಾದ ಪ್ರೊ. ಕೆ. ಪಿ ಸೂಫಿ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿದರು. ಪಿ ಎ ಪಾಲಿಟೆಕ್ನಿಕ್‌ನ ಉಪನ್ಯಾಸಕರಾದ ವಿಶ್ವೇಶ ಎಂ.ಜಿ ಯವರು ಸ್ವಾಗತಿಸಿದರು.
ಪ್ರಾಧ್ಯಾಪಕರಾದ ಅಜಿತ್ ಕುಮಾರ್ ವಾಸು ಕಾರ್ಯಕ್ರಮವನ್ನು ನಿರೂಪಿಸಿದರು . ಮರ್ಝೂಕ್ ಅಹಮದ್ ಧನ್ಯವಾದ ಸಮರ್ಪಿಸಿದರು.







