ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಗಾನಾಮೃತ

ಮೂಡುಬಿದಿರೆ , ಫೆ.1 : ಸಂಗೀತದಿಂದ ಮಾನಸಿಕ ನೆಮ್ಮದಿ ಪಡೆಯಬಹುದು. ಇದು ಮನಸ್ಸಿಗೆ ಮುದ ನೀಡುವುದಲ್ಲದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಮ್ಯೂಸಿಕ್ ಥೆರಪಿಯನ್ನು ಹಲವು ರೋಗಗಳ ನಿವಾರಣೆಗೆ ಬಳಕೆಯಾಗುತ್ತಿದೆ. ಇದು ಸಂಗೀತದ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಮೂಡುಬಿದಿರೆ ಐಸಿಐಸಿಐ ಬ್ಯಾಂಕ್ ಉಪಶಾಖಾ ಪ್ರಬಂಧಕರಾದ ಅಪರ್ಣಾ ರಾವ್ ಅವರು ಹೇಳಿದರು.
ಕಲ್ಲಬೆಟ್ಟು ಎಕ್ಸಲೆಂಟ್ ಪ.ಪೂ. ಕಾಲೇಜಿನಲ್ಲಿ ಜನನಿ ಮ್ಯೂಸಿಕ್ ಸಂಸ್ಥೆ (ರಿ) ಶಿರಸಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂಪನ್ನಗೊಂಡ ಗಾನಾಮೃತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ವಿದುಷಿ ರೇಖಾ ದಿನೇಶ್ ಅವರನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್, ಜನನಿ ಮ್ಯೂಸಿಕ್ ಸಂಸ್ಥೆಯ ದಿನೇಶ್ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಪದ್ಮಪ್ರಿಯಾ ಕಾರ್ಯಕ್ರಮ ನಿರೂಪಿಸಿದರು, ಉಷಾ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮೂರುಗಂಟೆಗಳ ಕಾಲ ವಿದುಷಿ ರೇಖಾ ದಿನೇಶ್ ಅವರ ಸಂಗೀತ ಕಾರ್ಯಕ್ರಮ ನಡೆಯಿತು,







