ಗಾಂಜಾ ಸೇವನೆ : ಇಬ್ಬರು ಯುವಕರ ಬಂಧನ
ಮಂಗಳೂರು, ಫೆ. 1: ನಗರದ ಕೂಳೂರು ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತರನ್ನು ಕೋಡಿಕಲ್ ನಿವಾಸಿಗಳಾದ ಬಿ.ಸಿ.ರೋಡ್ ಟೋಲ್‌ಗೇಟ್‌ನಲ್ಲಿ ಕೆಲಸ ಮಾಡುವ ಕಾರ್ತಿಕ್‌ರಾಜ್ (21) ಹಾಗೂ ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಪೃಥ್ವಿ (20) ಎಂದು ಗುರುತಿಸಲಾಗಿದೆ.
ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾವೂರು ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





