ನಾಳೆ ಗಲ್ಫ್ ಇಶಾರ ವಾರ್ಷಿಕೋತ್ಸವ
ದುಬೈ, ಫೆ.1: ಗಲ್ಫ್ ಇಶಾರ ಮಾಸಿಕದ ಯುಎಇ ಆವೃತ್ತಿಯ ಪ್ರಥಮ ವಾರ್ಷಿಕೋತ್ಸವ ಮತ್ತು ಭಾರತದ 68ನೆ ಗಣರಾಜ್ಯೋತ್ಸವ ಸಂಭ್ರಮಾಚರಣೆಯು ಫೆ.3ರಂದು ಸಂಜೆ 6 ಗಂಟೆಗೆ ದುಬೈ ದೇರಾ ಸಿಟಿ ಸೆಂಟರ್ ಹತ್ತಿರದ ಪರ್ಲ್ ಸಿಟಿ ಸೂಟ್ಸ್ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎನ್.ಕೆ.ಎಂ. ಶಾಫಿ ಸಅದಿ ಬೆಂಗಳೂರು, ಕರ್ನಾಟಕ ರಾಜ್ಯ ಎಸ್‌ವೈಎಸ್ ಕಾರ್ಯದರ್ಶಿ ಯಾಕೂಬ್ ಹೊಸನಗರ, ಬಿ.ಎಂ.ಫಾರೂಕ್, ಫಿಝಾ ಡೆವಲಪರ್ಸ್ ಬೆಂಗಳೂರು, ಮುಹಮ್ಮದ್ ಇಕ್ಬಾಲ್ ನಾವುಂದ, ಫ್ರೀಲಾನ್ಸ್ ಕತಾರ್, ಸಂಸದ ಸಿ.ಎಸ್. ಪುಟ್ಟರಾಜು ಮಂಡ್ಯ, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಜಿ ಶೈಖ್ ಬಾವ ಮಂಗಳೂರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





