ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸೆಭೆ

ಉಡುಪಿ, ಫೆ.1: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯು ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಬಿಜೆಪಿಯನ್ನು ಕಟ್ಟಿದ ಪಂ.ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಾಬ್ದಿಯನ್ನು ವರ್ಷಪೂರ್ತಿ ಆಚರಿಸಲಾಗುತ್ತಿದ್ದು, ೆ.11ರಂದು ಅರ್ಪಣಾ ದಿನವನ್ನಾಗಿ ಆಚರಿಸಲಾಗುವುದು ಎಂದರು.
ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜನ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರ ಕೆ. ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ, ಕಾರ್ಕಳ, ಕುಂದಾಪುರ ತಾಲೂಕು ಎಪಿಎಂಸಿ ಚುನಾವಣೆಯಲ್ಲಿ ಚುನಾಯಿತರಾದ ಬಿಜೆಪಿ ಸದಸ್ಯರನ್ನು ಅಭಿನಂದಿಸಲಾಯಿತು. ಇತ್ತೀಚೆಗೆ ನಿಧನರಾದ ಬಿಜೆಪಿ ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಪರಿಚಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಯಶ್ಪಾಲ್ ಸುವರ್ಣ, ಸಂಧ್ಯಾ ರಮೇಶ್ ವೇದಿಕೆಯಲ್ಲಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಸುರೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಮೆಂಡನ್ ಸ್ವಾಗತಿಸಿದರು. ಹಿಂದುಳಿದ ವರ್ಗ ರಾಜ್ಯ ಉಪಾಧ್ಯಕ್ಷ ಕಿರಣ್ ಕುಮಾರ್ ವಂದಿಸಿದರು.







