ಎನ್ನೆಸ್ಸೆಸ್ ಘಟಕದ ಸಮಾರೋಪ

ಮೂಡುಬಿದಿರೆ, ಫೆ.2: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2016-17ನೆ ಸಾಲಿನ ಎನ್ನೆಸ್ಸೆಸ್ ಘಟಕದ ಸಮಾರೋಪವು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಗೌಡ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ವಹಿಸಿದ್ದರು. ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ, ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ, ಮಹಿಳಾ ಕಲ್ಯಾಣ ಸಮಿತಿ ಸಂಯೋಜಕಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಅರುಣ್ ಕುಮಾರ್ ವಾರ್ಷಿಕ ಕಾರ್ಯಕ್ರಮಗಳ ವರದಿ ವಾಚಿಸಿದರು.
Next Story





