Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯ ಮೂಗಿನಿಂದ ಜೀವಂತ ಜಿರಳೆ...

ಮಹಿಳೆಯ ಮೂಗಿನಿಂದ ಜೀವಂತ ಜಿರಳೆ ಹೊರತೆಗೆದ ವೈದ್ಯರು!

ವಾರ್ತಾಭಾರತಿವಾರ್ತಾಭಾರತಿ3 Feb 2017 10:48 AM IST
share
ಮಹಿಳೆಯ ಮೂಗಿನಿಂದ ಜೀವಂತ ಜಿರಳೆ ಹೊರತೆಗೆದ ವೈದ್ಯರು!

ಚೆನ್ನೈ, ಫೆ.3: ಮಹಿಳೆಯೊಬ್ಬರ ಮೂಗಿನ ಆಳದಲ್ಲಿ ಸೇರಿಕೊಂಡಿದ್ದ ಜೀವಂತ ಜಿರಳೆಯೊಂದನ್ನು ಸ್ಟಾನ್ಲಿ ಮೆಡಿಕಲ್ ಕಾಲೇಜ್‌ನ ವೈದ್ಯರು ಯಶಸ್ವಿಯಾಗಿ ಹೊರ ತೆಗೆದ ಘಟನೆ ಗುರುವಾರ ನಡೆದಿದೆ. ನನ್ನ 30 ವರ್ಷಗಳ ವೃತ್ತಿಬದುಕಿನಲ್ಲಿ ನಾನು ನೋಡಿದ ಮೊದಲ ಕೇಸ್ ಇದಾಗಿದೆ. ಜಿರಳೆಯನ್ನು ಹೊರ ತೆಗೆಯುವ ಅತ್ಯಂತ ಸೂಕ್ಷ್ಮ ಪ್ರಕ್ರಿಯೆಗೆ 45 ನಿಮಿಷಬೇಕಾಯಿತು. ಮೂಗಿನ ಎಂಡೊಸ್ಕೊಪ್ ಹಾಗೂ ಸೋಂಕುನಿರೋಧಕ ತಂತ್ರದಿಂದ ಜಿರಳೆಯನ್ನು ಹೊರ ತೆಗೆಯಲಾಯಿತು ಎಂದು ಆಸ್ಪತ್ರೆಯ ಎನ್ ಆ್ಯಂಡ್ ಟಿ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಎನ್. ಶಂಕರ್ ಹೇಳಿದ್ದಾರೆ.

42ರ ಪ್ರಾಯದ ಮನೆ ಕೆಲಸದಾಕೆ ಸೆಲ್ವಿ ಮಂಗಳವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮೂಗಿನೊಳಗೆ ಜಿರಳೆಯೊಂದು ಪ್ರವೇಶಿಸಿತ್ತು. ಮೂಗಿನ ಒಳಗೆ ಹೋಗಿದ್ದ ಜಿರಳೆ ಹಿಂದಕ್ಕೆ ಬರಲಾಗದೆ ಎರಡು ಕಣ್ಣು ಹಾಗೂ ಮೆದುಳಿನ ಸಮೀಪ ಸಿಕ್ಕಿಹಾಕಿಕೊಂಡಿತ್ತು. ಮಧ್ಯರಾತ್ರಿ ಸುಮಾರಿಗೆ ಸೆಲ್ವಿ ಅವರಿಗೆ ಮೂಗಿನಲ್ಲಿ ತೊಂದರೆ ಕಾಣಿಸಿಕೊಳ್ಳಲಾರಂಭಿಸಿತು. ನೋವು ಜೋರಾಗಿತ್ತು. ಸೆಲ್ವಿ ಅವರ ಅಳಿಯ ತಕ್ಷಣವೇ ಸ್ಥಳೀಯ ಕ್ಲಿನಿಕ್‌ಗೆ ತೆರಳಿದ್ದರು. ಆ ಕ್ಲಿನಿಕ್‌ನವರು ಮತ್ತೊಂದು ಕ್ಲಿನಿಕ್‌ಗೆ ತೆರಳುವಂತೆ ಸೂಚಿಸಿದ್ದರು. ಅಂತಿಮವಾಗಿ ಬುಧವಾರ ಬೆಳಗ್ಗೆ ಸ್ಟಾನ್ಲಿ ಆಸ್ಪತ್ತೆಗೆ ದಾಖಲಿಸಲಾಗಿತ್ತು.

ಕ್ಲಿನಿಕ್ ಡಾಕ್ಟರ್‌ವೊಬ್ಬರು ಮೂಗಿನೊಳಗೆ ಚರ್ಮ ಬೆಳೆದಿರುವ ಕಾರಣ ನೋವು ಕಾಣಿಸಿಕೊಂಡಿದೆ ಎಂದು ಹೇಳಿದ್ದರು. ಆದರೆ, ನಾನು ವೈದ್ಯರ ಬಳಿ ಮೂಗಿನೊಳಗೆ ಏನೋ ಇದ್ದ ಭಾಸವಾಗುತ್ತಿದೆ ಎಂದು ಹೇಳಿದ್ದೆ. ಇದೀಗ ನಾನು ನಿರಾಳವಾಗಿದ್ದೇನೆ’’ ಎಂದು ಸೆಲ್ವಿ ಹೇಳಿದ್ದಾರೆ. ಸ್ಟಾನ್ಲಿ ಆಸ್ಪತ್ರೆಯ ಸರ್ಜನ್‌ಗಳು ಈ ಮೊದಲು ರೋಗಿಯ ಮೂಗು ಹಾಗೂ ಕಿವಿಯೊಳಗೆ ಸೇರಿಕೊಂಡಿದ್ದ ಕೀಟಗಳನ್ನು ಹೊರ ತೆಗೆದಿದ್ದರು. ಸೆಲ್ವಿ ಮೂಗಿನೊಳಗೆ ಸೇರಿಕೊಂಡಿದ್ದ ಜಿರಳೆ ಜೀವಂತವಾಗಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದರು.

‘‘ಮೂಗಿನ ಎಂಡೋಸ್ಕೊಪ್ ಮೂಲಕ ಪರೀಕ್ಷೆ ಮಾಡಿದಾಗ ಜೀವಂತ ಜಿರಳೆಯೊಂದು ಮಹಿಳೆಯ ಕಣ್ಣುಗಳ ಮಧ್ಯೆ ಹಾಗೂ ಮೆದುಳಿನ ಸನಿಹ ಸಿಲುಕಿಹಾಕಿಕೊಂಡಿರುವುದು ಪತ್ತೆಯಾಗಿದೆ. ಮೂಗಿನಲ್ಲಿ ಏನಾದರೂ ಸಿಲುಕಿಕೊಂಡರೆ ಪತ್ತೆಯಾಗುವುದು ತುಂಬಾ ಕಡಿಮೆ. ಮಹಿಳೆಯೊಬ್ಬರ ಮೂಗಿನಲ್ಲಿ ಜೀವಂತ ಜಿರಳೆ ಇರುವುದು ತುಂಬಾ ಅಚ್ಚರಿಯ ವಿಷಯವಾಗಿತ್ತು. ಒಂದು ವೇಳೆ ಜಿರಳೆಯನ್ನು ಹೊರ ತೆಗೆಯದೇ ಇದ್ದರೆ ಅದು ಅಲ್ಲಿ ಸತ್ತುಹೋಗಿ ಸೆಲ್ವಿಯ ಮೆದುಳಿಗೆ ಇನ್‌ಫೆಕ್ಷನ್ ಆಗುವ ಸಾಧ್ಯತೆಯಿತ್ತು’’ಎಂದು ಡಾ. ಶಂಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X