ರುಬೆಲ್ಲಾ ಲಸಿಕೆ ಹಾಕಿಸಲು ಉಡುಪಿ ಖಾಝಿ ಮನವಿ

ಮಂಗಳೂರು, ಫೆ.3: ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಫೆ.7ರಿಂದ ಮಾ.1ರವರೆಗೆ ನಡೆಯುವ ದಡಾರ-ರುಬೆಲ್ಲಾ ಲಸಿಕಾ ಹಾಕಿಸಿಕೊಳ್ಳಲು ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಖಾಝಿ ಅಲ್‌ಹಾಜ್ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.
ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವಂತಹ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ 9 ತಿಂಗಳಿನಿಂದ 15 ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಹಾಕಿಸಿಕೊಳ್ಳುವಂತೆ ಹಾಗೂ ಈ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ರೀತಿಯ ತೊಂದರೆಗಳಿರುವುದಿಲ್ಲ ಎಂದು ನುರಿತ ಮಕ್ಕಳ ತಜ್ಞರು ಲಿಖಿತವಾಗಿ ಶಿಫಾರಸು ಮಾಡಿರುತ್ತಾರೆ. ಹಾಗಾಗಿ ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಜುಮಾ ನಮಾಝಿನ ಬಳಿಕ ಈ ವಿಷಯದ ಬಗ್ಗೆ ಮಸೀದಿಯ ಇಮಾಮರ ಮೂಲಕ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದಾರೆ.
Next Story





