ಭದ್ರತಾ ಪ್ರಕ್ರಿಯೆ ಪುನರ್‌ಪರಿಶೀಲನೆ: ಇನ್‌ಫೋಸಿಸ್

ಪುಣೆ, ಫೆ.3: ಇನ್‌ಫೋಸಿಸ್ ಸಂಸ್ಥೆಯ ಆವರಣದಲ್ಲಿ ಮಹಿಳಾ ಸಿಬ್ಬಂದಿಯೋರ್ವರು ಕೊಲೆಯಾದ ಘಟನೆಯ ಹಿನ್ನೆಲೆಯಲ್ಲಿ ಸಂಸ್ಥೆಯ ಭದ್ರತಾ ಪ್ರಕ್ರಿಯೆಯನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಶಿಫ್ಟ್‌ನಲ್ಲಿ ಕಾರ್ಯ ನಿರ್ವಹಿಸುವ ಯಾವುದೇ ಸಿಬ್ಬಂದಿ ಒಂಟಿಯಾಗಿ ಕಾರ್ಯ ನಿರ್ವಹಿಸದಂತೆ ಕ್ರಮ ಕೈಗೊಳ್ಳಲಾಗುವುದು. ಅನಿವಾರ್ಯ ಸಂದರ್ಭ ಒದಗಿ ಬಂದರೆ ಆಗ ಆ ಕಚೇರಿಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿ(ಮಹಿಳಾ ಸಿಬ್ಬಂದಿ ಸೇರಿದಂತೆ) ಒದಗಿಸಲಾಗುವುದು. ಅಲ್ಲದೆ ಭದ್ರತಾ ಸಿಬ್ಬಂದಿಗಳು ಕಚೇರಿಯ ಮಹಡಿಯಲ್ಲಿ ನಿಯಮಿತವಾಗಿ ಗಸ್ತು ತಿರುಗಲು ಸೂಚಿಸಲಾಗುವುದು. ಅಲ್ಲದೆ ಸ್ಥಳೀಯ ಪೊಲೀಸರ ಸಹಯೋಗದಲ್ಲಿ ಮತ್ತು ಅವರ ಸಲಹೆ ಪಡೆದು ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಲಾಗುವುದು ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
Next Story





