Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಧ್ಯಕ್ಷರೂ ಕಾನೂನಿಗಿಂತ ದೊಡ್ಡವರಲ್ಲ:...

ಅಧ್ಯಕ್ಷರೂ ಕಾನೂನಿಗಿಂತ ದೊಡ್ಡವರಲ್ಲ: ವಾಷಿಂಗ್ಟನ್ ಅಟಾರ್ನಿ ಜನರಲ್

ವಾರ್ತಾಭಾರತಿವಾರ್ತಾಭಾರತಿ4 Feb 2017 9:15 AM IST
share
ಅಧ್ಯಕ್ಷರೂ ಕಾನೂನಿಗಿಂತ ದೊಡ್ಡವರಲ್ಲ: ವಾಷಿಂಗ್ಟನ್ ಅಟಾರ್ನಿ ಜನರಲ್

ಸಿಯಾಟಲ್/ಬಾಸ್ಟನ್, ಫೆ. 4: ಮುಸ್ಲಿಮ್ ಬಾಹುಳ್ಯದ ಏಳು ದೇಶಗಳ ನಾಗರಿಕರು ಅಮೆರಿಕ ಪ್ರವೇಶಿಸುವುದನ್ನು ನಿಷೇಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಆದೇಶಕ್ಕೆ ಸಿಯಾಟಲ್‌ನ ಫೆಡರಲ್ ನ್ಯಾಯಾಲಯವೊಂದು ಶುಕ್ರವಾರ ರಾಷ್ಟ್ರವ್ಯಾಪಿ ತಡೆಯಾಜ್ಞೆ ವಿಧಿಸಿದೆ.

ಸಿಯಾಟಲ್ ನ್ಯಾಯಾಧೀಶ ಜೇಮ್ಸ್ ರೋಬರ್ಟ್ ನೀಡಿರುವ ತಡೆಯಾಜ್ಞೆ ಟ್ರಂಪ್ ಆದೇಶಕ್ಕೆ ಎದುರಾಗಿರುವ ಪ್ರಮುಖ ಸವಾಲಾಗಿದೆ. ಆದಾಗ್ಯೂ, ಟ್ರಂಪ್ ಆಡಳಿತ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಅದೇ ವೇಳೆ, ತನ್ನ ಆದೇಶ ಶುಕ್ರವಾರ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂಬುದಾಗಿ ನ್ಯಾಯಾಧೀಶರು ಹೇಳಿದ್ದಾರೆ. ಹಾಗಾಗಿ ಇರಾನ್, ಇರಾಕ್, ಯಮನ್, ಸುಡಾನ್, ಲಿಬಿಯ, ಸಿರಿಯ ಮತ್ತು ಸೊಮಾಲಿಯಗಳ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ವಿಧಿಸಲಾಗಿರುವ ನಿರ್ಬಂಧ ತಕ್ಷಣ ತೆರವುಗೊಳ್ಳಲಿದೆ.

‘‘ದೇಶದ ಕಾನೂನು ಆಡಳಿತದ ಪಾಲಿಗೆ ಇದು ಸಂಭ್ರಮದ ದಿನ’’ ಎಂಬುದಾಗಿ ವಾಶಿಂಗ್ಟನ್ ರಾಜ್ಯದ ಸಾಲಿಸಿಟರ್ ಜನರಲ್ ನೋ ಪರ್ಸೆಲ್ ಹೇಳಿದರು.

‘‘ಈ ತೀರ್ಪು ಟ್ರಂಪ್‌ರ ಆದೇಶವನ್ನು ತಕ್ಷಣದಿಂದ ರದ್ದುಪಡಿಸುತ್ತದೆ’’ ಎಂದು ವಾಶಿಂಗ್ಟನ್ ರಾಜ್ಯದ ಅಟಾರ್ನಿ ಜನರಲ್ ಬಾಬ್ ಫರ್ಗ್ಯೂಸನ್ ತಿಳಿಸಿದರು.

ಈ ತೀರ್ಪನ್ನು ಫೆಡರಲ್ ಸರಕಾರ (ಕೇಂದ್ರ ಸರಕಾರ) ಗೌರವಿಸುತ್ತದೆ ಎಂದು ತಾನು ಭಾವಿಸುವುದಾಗಿ ಅವರು ಹೇಳಿದರು.

ಜನವರಿ 27ರಂದು ಟ್ರಂಪ್ ಸಹಿ ಹಾಕಿರುವ ವಲಸೆ ನಿಷೇಧ ಆದೇಶ ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ವಿದೇಶಗಳಿಗೆ ಹೋಗಿದ್ದ ವಲಸಿಗರು ಅಮೆರಿಕಕ್ಕೆ ವಾಪಸ್ ಹೋಗುವ ವಿಮಾನಗಳನ್ನು ಏರುವುದನ್ನು ನಿಷೇಧಿಸಲಾಗಿತ್ತು. ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಬಂದು ಸೇರಿದ್ದ ನೂರಾರು ವಲಸಿಗರು ಪ್ರತಿಭಟನೆ ನಡೆಸಿದ್ದರು.

ಟ್ರಂಪ್ ಆದೇಶವನ್ನು ಪ್ರಶ್ನಿಸಿ ನಾಲ್ಕು ರಾಜ್ಯಗಳ ಅಟಾರ್ನಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಸಲ್ಲಿಸಿದ್ದರು.

ಟ್ರಂಪ್ ಆಡಳಿತವು ವಲಸೆ ನಿಷೇಧ ಆದೇಶವನ್ನು ಸಮರ್ಥಿಸಿದ್ದು, ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಆದರೆ, ಇದು ಧಾರ್ಮಿಕ ನಂಬಿಕೆಗಳ ಆಧಾರದಲ್ಲಿ ಜನರನ್ನು ತಾರತಮ್ಯಕ್ಕೆ ಗುರಿಪಡಿಸುವ ಕ್ರಮವಾಗಿದೆ ಎಂಬುದಾಗಿ ವಲಸೆ ನಿಷೇಧದ ವಿರೋಧಿಗಳು ಹೇಳುತ್ತಾರೆ.

ಇದಕ್ಕೂ ಮೊದಲು, ಬಾಸ್ಟನ್‌ನ ಫೆಡರಲ್ ನ್ಯಾಯಾಧೀಶರೊಬ್ಬರು, ನಿಷೇಧದ ಪರಿಣಾಮಕ್ಕೆ ಒಳಗಾಗಿರುವ ದೇಶಗಳಿಂದ ಬರುವವರಿಗೆ ಅಮೆರಿಕ ಪ್ರವೇಶಿಸಲು ಸಾಧ್ಯವಾಗುವಂತೆ ವಿಧಿಸಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ವಿಸ್ತರಿಸಲು ನಿರಾಕರಿಸಿದ್ದರು.

ತೀರ್ಪು ಹಾಸ್ಯಾಸ್ಪದ: ಟ್ರಂಪ್

ತನ್ನ ವಲಸೆ ನಿಷೇಧ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಫೆಡರಲ್ ನ್ಯಾಯಾಲಯವೊಂದರ ತೀರ್ಪಿನ ವಿರುದ್ಧ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಂಡ ಕಾರಿದ್ದಾರೆ.

ತೀರ್ಪನ್ನು ‘ಹಾಸ್ಯಾಸ್ಪದ’ ಎಂಬುದಾಗಿ ಬಣ್ಣಿಸಿರುವ ಅವರು, ಅದನ್ನು ತೆರವುಗೊಳಿಸುವುದಾಗಿ ಪ್ರತಿಜ್ಞೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X