ಎಟಿಎಂನಲ್ಲಿ ಮಹಿಳೆಗೆ ಗಂಭೀರ ಹಲ್ಲೆ ಪ್ರಕರಣ: ಓರ್ವ ವ್ಯಕ್ತಿಯ ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು, ಫೆ.4: ಕಾರ್ಪೋರೇಶನ್ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯುತ್ತಿದ್ದಾಗ ಅಕ್ರಮವಾಗಿ ಎಟಿಎಂನೊಳಗೆ ಪ್ರವೇಶಿಸಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್‌ರಿಗೆ ಮಚ್ಚಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಕೊನೆಗೂ ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಈ ಘಟನೆ 2013ರ ನವೆಂಬರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದಿತ್ತು. ಜ್ಯೋತಿ ಅವರ ಮೇಲೆ ಎಟಿಎಂನೊಳಗೆ ಆರೋಪಿ ಮಾರಣಾಂತಿಕ ಹಲ್ಲೆ ನಡೆಸಿ ಪರಾಗಿಯಾಗಿದ್ದ. ಹಲ್ಲೆ ನಡೆಸುವಂತಹ ಭೀಭತ್ಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.
ಶಂಕಿತ ಆರೋಪಿಯನ್ನು ಸುಮಾರು 4 ವರ್ಷಗಳ ಬಳಿಕ ಆಂಧ್ರಪ್ರದೇಶದಲ್ಲಿ ಸೆರೆ ಹಿಡಿಯಲಾಗಿದ್ದು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಉನ್ನತ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
Next Story





