Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬುರ್ಖಾ ವಿವಾದವೆಬ್ಬಿಸಿ ವಿದ್ಯಾರ್ಥಿನಿಯರ...

ಬುರ್ಖಾ ವಿವಾದವೆಬ್ಬಿಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಎಬಿವಿಪಿ

ಹಲ್ಲೆಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Feb 2017 7:55 PM IST
share
ಬುರ್ಖಾ ವಿವಾದವೆಬ್ಬಿಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಎಬಿವಿಪಿ

ಶಿವಮೊಗ್ಗ, ಫೆ. 4 : ಬುರ್ಖಾ ಧರಿಸುವಿಕೆಗೆ ಸಂಬಂಧಿಸಿದಂತೆ ನಗರದ ಸಹ್ಯಾದ್ರಿ ಕಾಲೇಜ್ ನಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹೊರಗಿನ ಶಕ್ತಿಗಳು ವಿದ್ಯಾರ್ಥಿನಿಯರ ಮೇಲೆ ದೈಹಿಕ ಹಲ್ಲೆ ನಡೆಸಿದ್ದು , ಹಲ್ಲೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಜಿಲ್ಲಾಡಳಿತವನ್ನು ಆಗ್ರಹಿಸಿದೆ. 

ಈ ಸಂಬಂಧ ಸಂಘಟನೆಯ ಕಾರ್ಯಕರ್ತರು ಶನಿವಾರ ಸಂಜೆ ನಗರದ ಡಿ.ಸಿ. ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು.

ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಸ್ಪಷ್ಟ ನೀತಿ ನಿಯಮ ರಚಿಸಿಲ್ಲ. ವಸ್ತ್ರಧಾರಣೆ ಓರ್ವ ನಾಗರಿಕನಿಗೆ ಸಂವಿಧಾನ ನೀಡಿದ ಮೂಲಭೂತ ಹಕ್ಕಾಗಿದೆ. ಹಾಗೆಯೇ ವಿಶ್ವವಿದ್ಯಾಲಯಯಗಳಲ್ಲಿ ವಸ್ತ್ರಧಾರಣೆಯ ನೀತಿ-ನಿಯಮ ರೂಪಿಸುವುದು ಸಂವಿಧಾನಕ್ಕೆ ವಿರುದ್ದವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್‌ನಲ್ಲಿ ಈ ಹಿಂದೆ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ತಗಾದೆಯಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಕಾಲೇಜ್ ನ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಹಾಗೂ ಹೊರಗಿನ ಶಕ್ತಿಗಳು ಕ್ಯಾಂಪಸ್ ಒಳಗೆ ನುಗ್ಗಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದು ವಿದ್ಯಾರ್ಥಿನಿಯರು ಹಾಗೂ ಪೋಷಕರಲ್ಲಿ ಆತಂಕ ಉಂಟು ಮಾಡಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವಸ್ತ್ರ ಸಂಹಿತೆ ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿರುವುದು ಇದೇ ಮೊದಲಲ್ಲವಾಗಿದೆ. ಮಡಿಕೇರಿ, ಹಾವೇರಿ, ಮಂಗಳೂರು ಮೊದಲಾದೆಡೆಯು ಎಬಿವಿಪಿ ಹಾಗೂ ಹೊರಗಿನ ಶಕ್ತಿಗಳು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿವೆ. ಇದೆಲ್ಲವನ್ನೂ ಗಮನಿಸಿದರೆ ಈ ಎಲ್ಲ ಕೃತ್ಯಗಳು ಪೂರ್ವಯೋಜಿತ ಎಂಬುವುದು ಗೊತ್ತಾಗುತ್ತದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ‌.

ಈಗಾಗಲೇ ಉನ್ನತ ಶಿಕ್ಷಣ ಸಚಿವರು ವಸ್ತ್ರ ಸಂಹಿತೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುವೆಂಪು ವಿಶ್ವವಿದ್ಯಾಲಯ ಕುಲ ಸಚಿವರು ಕೂಡ ವಿವಿ ವ್ಯಾಪ್ತಿಯ ಕಾಲೇಜ್‌ಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ವಸ್ತ್ರ ಸಂಹಿತೆ ನೆಪ ಮಾಡಿಕೊಂಡು ಸಹ್ಯಾದ್ರಿ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ ಎಬಿವಿಪಿ ಹಾಗೂ ಹೊರಗಿನ ಶಕ್ತಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಆರೋಪಿಗಳನ್ನು ಬಂಧಿಸಬೇಕು. ಶಾಲಾ-ಕಾಲೇಜ್ ಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿದ್ಯಾರ್ಥಿಗಳಲ್ಲಿ ಸಂಘರ್ಷ ಉಂಟು ಮಾಡುತ್ತಿರುವ ಬಾಹ್ಯ ಶಕ್ತಿಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಮಹಮ್ಮದ್ ಆರೀಫ್ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X