‘ಮರೆಯಲಾಗದ ಮುಂಬೈ’ ಪುಸ್ತಕ ಬಿಡುಗಡೆ
ಮಂಗಳೂರು, ಫೆ.4: ಪತ್ರಕರ್ತ ಚಿದಂಬರ ಬೈಕಂಪಾಡಿ ರಚಿಸಿದ ‘ಮರೆಯಲಾಗದ ಮುಂಬೈ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಫೆ.5ರಂದು ಸಂಜೆ 5ಕ್ಕೆ ಪಣಂಬೂರು ಬೀಚ್‌ನಲ್ಲಿ ನಡೆಯಲಿದೆ.
ಅಕ್ಷರ ಸಂತ ಹರೇಕಳ ಹಾಜಬ್ಬ ಕೃತಿ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪ್ರೆಸ್‌ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಸಾಧನಾ ಪ್ರಕಾಶನದ ಕೆ.ರವಿಚಂದ್ರ ರಾವ್, ಬೀಚ್ ಅಭಿವೃದ್ಧಿ ಸಮಿತಿಯ ಸಿಇಒ ಯತೀಶ್ ಬೈಕಂಪಾಡಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





