Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಿಜೆಪಿ ಜೊತೆಗಿನ ಮೈತ್ರಿಗೆ ಕುಮಾರಸ್ವಾಮಿ...

ಬಿಜೆಪಿ ಜೊತೆಗಿನ ಮೈತ್ರಿಗೆ ಕುಮಾರಸ್ವಾಮಿ ವಿಷಾದ

ಗಲ್ಫ್ ಇಶಾರ ಮಾಸಿಕದ ಯುಎಇ ಆವೃತ್ತಿಯ ಪ್ರಥಮ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Feb 2017 3:57 PM IST
share
ಬಿಜೆಪಿ ಜೊತೆಗಿನ ಮೈತ್ರಿಗೆ ಕುಮಾರಸ್ವಾಮಿ ವಿಷಾದ

ದುಬೈ, ಫೆ.5: ಜಾತ್ಯಾತೀತ ನಿಲುವಿನಲ್ಲಿ ಕಾರ್ಯಾಚರಿಸುವ ನಮ್ಮ ಪಕ್ಷವು ಹಿಂದೊಮ್ಮೆ ಬಿಜೆಪಿಯೊಂದಿಗೆ ಆಡಳಿತ ನಡೆಸಿದ್ದು ತಪ್ಪಾಗಿತ್ತು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ರಾಷ್ಟ್ರೀಯ ಸಮಿತಿಯು ದುಬೈನಲ್ಲಿ ಆಯೋಜಿಸಿದ್ದ ಗಲ್ಫ್ ಇಶಾರ ಮಾಸಿಕದ ಯುಎಇ ಆವೃತ್ತಿಯ ಪ್ರಥಮ ವಾರ್ಷಿಕೋತ್ಸವ ಹಾಗೂ ಭಾರತದ 68ನೆ ಗಣರಾಜ್ಯೋತ್ಸವ ಸಂಭ್ರಮಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಾತ್ಯಾತೀತ ಪಕ್ಷಗಳು ಅಧಿಕಾರದಲ್ಲಿ ಇರಲಿ ಎಂಬ ಉದ್ದೇಶದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕಾಂಗ್ರೆಸ್‌ನೊಂದಿಗೆ ಯಾವುದೇ ಶರತ್ತಿಲ್ಲದೆ ಬೆಂಬಲ ಮೈತ್ರಿ ಮಾಡಿಕೊಳ್ಳಲಾಗಿತ್ತು. ದುರಾದೃಷ್ಟವೆಂಬಂತೆ ಜೆಡಿಎಸ್ ಪಕ್ಷವನ್ನೇ ನಿರ್ನಾಮ ಮಾಡಲು ಕೆಲವರು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿಗೆ ಬೆಂಬಲ ನೀಡಬೇಕಾಯಿತು ಎಂದು ಅವರು ಹೇಳಿದರು.

 ದೇವೇಗೌಡರ ಅಧಿಕಾರಾವಧಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಸರಕಾರಿ ಸೇವೆಗಳಲ್ಲಿ ಮೀಸಲಾತಿ ಜಾರಿಗೆ ತರಲಾಗಿದೆ. ದೇಶದಲ್ಲಿ ಇನ್ನಾವುದೇ ರಾಜ್ಯಗಳು ತರಲಿಲ್ಲ ಎಂದು ಅವರು ನೆನಪಿಸಿದರು.

  ಹುಬ್ಬಳ್ಳಿ ಈದ್ಗಾ ಮೈದಾನದ ವಿಷಯದಲ್ಲಿ ನಡೆಯುತ್ತಿದ್ದ ಗಲಾಟೆಯನ್ನು ಮುಖ್ಯಮಂತ್ರಿಯಾದ ಒಂದೇ ತಿಂಗಳಲ್ಲಿ ಇತ್ಯರ್ಥ ಮಾಡಿದ್ದು ಅದರ ನಂತರ ಇಂದಿನವರೆಗೆ ಅಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಹೇಳಿದರು.

ಗಲ್ಫ್ ರಾಷ್ಟ್ರಗಳಲ್ಲೂ ಕನ್ನಡ ಪ್ರೇಮವನ್ನು ಮೆರೆಯುತ್ತಿರುವ ಗಲ್ಫ್ ಇಶಾರ ಮತ್ತು ಕೆಸಿಎಫ್ ಕಾರ್ಯಕರ್ತರು ನಿಜಕ್ಕೂ ಶ್ಲಾಘನೀಯ ಎಂದ ಕುಮಾರಸ್ವಾಮಿ, ರಾಜ್ಯ ಎಸ್ಸೆಸ್ಸೆಫ್ ಅಧೀನದಲ್ಲಿ ಹತ್ತು ಕೇಂದ್ರಗಳಲ್ಲಿ ಕಾರ್ಯರೂಪಕ್ಕೆ ಬರಲಿರುವ ನಾಲೆಡ್ಜ್ ವಿಲೇಜ್ ಕೇಂದ್ರಗಳಿಗೆ ಆರ್ಥಿಕವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಿಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಸಿ.ಎಸ್.ಪುಟ್ಟರಾಜು ಮಂಡ್ಯ ಉದ್ಘಾಟಿಸಿ ಶುಭ ಹಾರೈಸಿದರು.

ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಉದ್ಯಮಿ, ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್, ಭಾರತದಲ್ಲಿ ಅಲ್ಪಸಂಖ್ಯಾತರ ಹೀನಾಯ ಪರಿಸ್ಥಿತಿಯ ಬಗ್ಗೆ ಸಾಚಾರ್ ಮತ್ತು ರಾಜೇಂದರ್ ಪ್ರಸಾದ್ ವರದಿಗಳು ಬಂದು ದಶಕಗಳು ಕಳೆದರೂ ಸಮುದಾಯದ ಅಭಿವೃದ್ಧಿಗೆ ನಂತರ ಬಂದ ಸರಕಾರಗಳು ಈ ನಿಟ್ಟಿನಲ್ಲಿ ಯಾವುದೇ ರೀತಿಯ ಚರ್ಚೆ ಅಥವಾ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದರು.

ಭಾರತದ ಗಣರಾಜ್ಯೋತ್ಸವ ಅಂಗವಾಗಿ ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣ ಮಾಡಿದ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎನ್.ಕೆ.ಎಂ.ಶಾಫಿ ಸಅದಿ, ರಾಜಕೀಯವಾಗಿ ಯಾವುದೇ ಪಕ್ಷವಿರಲಿ, ಜನಪರ ಕಾರ್ಯಗಳನ್ನು ಮಾಡುವ ಯಾವುದೇ ನಾಯಕರಾಗಲಿ ಅವರಿಗೆ ಸುನ್ನಿ ಕಾರ್ಯಕರ್ತರ ಬೆಂಬಲವಿದೆ ಎಂದರು.

ರಾಜಕೀಯ ಪಕ್ಷಗಳು ಕೇವಲ ರಾಜಕಾರಣಕ್ಕೆ ಮಾತ್ರ ಮುಸ್ಲಿಮ್ ಸಮುದಾಯವನ್ನು ಬಳಸಿ ಮೂಲೆಗುಂಪು ಮಾಡುತ್ತಿದೆ. ಸಮುದಾಯದ ಉನ್ನತಿಗೆ ಅಡ್ಡಗಾಲು ಹಾಕುವವರಿಗೆ ಮತದಾನದ ಮೂಲಕ ಪ್ರತ್ಯುತ್ತರ ನೀಡುವಂತೆ ಅವರು ಕರೆ ನೀಡಿದರು.

ಸಮಾರಂಭದಲ್ಲಿ ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿ ಗೌಡ, ಬಿ.ಎಂ.ಎಲ್.ಕಾಂತರಾಜು, ಮಂಜುನಾಥ ಕೋಲಾರ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ರವಿಕುಮಾರ್, ಮೈಸೂರು ವಿಶ್ವವಿದ್ಯಾನಿಲಯ ನಿವೃತ ಕುಲಪತಿ ರಂಗಪ್ಪ, ಆರ್‌ಜೆಡಿ ರಾಜ್ಯಾಧ್ಯಕ್ಷ ಯಾಕೂಬ್ ಯೂಸುಫ್ ಹೊಸನಗರ, ಉದ್ಯಮಿಗಳಾದ ಇಕ್ಬಾಲ್ ನಾವುಂದ, ಡಾ ಚಿಕ್ಕಸ್ವಾಮಿ, ಲತೀಫ್ ಮುಲ್ಕಿ, ಡಾ.ಮುಹಮ್ಮದ್ ಕಾಪು, ಎಂ.ಇ.ಮೂಳೂರು, ಫಕ್ರುದ್ದೀನ್ ಅಜ್ಮಲ್ ಗ್ರೂಪ್ ಮತ್ತಿತರರು ಉಪಸ್ಥಿತರಿದ್ದರು.

ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಜಿ ಉಸ್ಮಾನ್ ನಾಪೋಕ್ಲು ಸ್ವಾಗತಿಸಿದರು. ಗಲ್ಫ್ ಇಶಾರ ಪ್ರಥಮ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಝೈನುದ್ದೀನ್ ಹಾಜಿ ಬೆಳ್ಳಾರೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ರಿಯಾಝ್ ಕೊಂಡಂಗೇರಿ ಮತ್ತು ಆರ್.ಕೆ.ಮದನಿ ಅಮ್ಮೆಂಬಳ ಕಾರ್ಯಕ್ರಮ ನಿರೂಪಿಸಿದರು. ಕರೀಂ ಮುಸ್ಲಿಯಾರ್ ಶಾರ್ಜಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X