Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಕೌಟ್ಸ್ ಮತ್ತು ಗೈಡ್ಸ್‌ನ ತೃತೀಯ ಸೋಪಾನ...

ಸ್ಕೌಟ್ಸ್ ಮತ್ತು ಗೈಡ್ಸ್‌ನ ತೃತೀಯ ಸೋಪಾನ ಪ್ರಶಸ್ತಿ ಪತ್ರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ5 Feb 2017 6:48 PM IST
share
ಸ್ಕೌಟ್ಸ್ ಮತ್ತು ಗೈಡ್ಸ್‌ನ ತೃತೀಯ ಸೋಪಾನ ಪ್ರಶಸ್ತಿ ಪತ್ರ ಪ್ರದಾನ

ಮಂಗಳೂರು, ಫೆ. 5: ‘ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ’ ಇದರ ದ.ಕ.ಜಿಲ್ಲಾ ಘಟಕದ ವತಿಯಿಂದ ತೃತೀಯ ಸೋಪಾನ ಪ್ರಶಸ್ತಿ ಪತ್ರ ಪ್ರದಾನ ಸಮಾರಂಭ ನಗರದ ಪುರಭವನದಲ್ಲಿ ರವಿವಾರ ನಡೆಯಿತು.

 ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಹಾಗು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಭಾರತೀಯ ಸ್ಕೌಟ್-ಗೈಡ್ಸ್ 2017-18ನೆ ಸಾಲಿನ ರಾಜ್ಯಮಟ್ಟದ ಜಾಂಬೋರೇಟ್ ದ.ಕ. ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ರೋವರ್ಸ್‌ ಹಾಗೂ ರೇಂಜರ್ಸ್‌ಗಳಿಗೆ ಜಲ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ರಾಷ್ಟ್ರಮಟ್ಟದ ಕೇಂದ್ರವನ್ನು ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸೂಕ್ತ ಸ್ಥಳಾವಕಾಶವನ್ನು ಜಿಲ್ಲಾಡಳಿತ ನೀಡಬೇಕಾಗಿದೆ ಎಂದರು.

ಸ್ಕೌಟ್-ಗೈಡ್ಸ್‌ನಲ್ಲಿ ಸುಮಾರು 80 ರೀತಿಯ ತರಬೇತಿಗಳಿದೆ. ಅದರಲ್ಲಿ ಸಾಹಸ ಚಟುವಟಿಕೆಗಳೂ ಸೇರಿವೆ. ಮಕ್ಕಳಿಗೆ ಈ ತರಬೇತಿಗಳನ್ನು ನೀಡುವುದರಿಂದ ಸೇನೆ, ಪೊಲೀಸ್ ಇಲಾಖೆಗೆ ಅವರು ಸೇರಲು ಸಾಧ್ಯವಿದೆ. ಇತರ ಜಿಲ್ಲೆಗಳಿಗೆ ಹೋಲಿಸಿದರೆ ರಾಷ್ಟ್ರಪತಿ, ರಾಜ್ಯಪಾಲರಿಂದ ಪುರಸ್ಕಾರ ಪಡೆಯುವವರಲ್ಲಿ ದ.ಕ.ಜಿಲ್ಲೆಯವರು ಹೆಚ್ಚಿದ್ದಾರೆ. ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ದ.ಕ.ಜಿಲ್ಲೆ ಮೊದಲನೇ ಸ್ಥಾನವನ್ನು ಗಳಿಸಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ಮಾತನಾಡಿ, ಪಾಶ್ಚಿಮಾತ್ಯ ದೇಶಗಳು ಭಾರತಕ್ಕಿಂತ ಎಲ್ಲ ರೀತಿಯಲ್ಲೂ ಮುಂದುವರಿದಿವೆ. ನಮ್ಮಲ್ಲಿ ನೈಸರ್ಗಿಕ ಸಂಪತ್ತು ಅಧಿಕವಾಗಿದ್ದರೂ ಶಿಸ್ತು ಹಾಗೂ ನೈರ್ಮಲ್ಯದ ಕೊರತೆ ಇದೆ. ಹೊರರಾಷ್ಟ್ರಗಳು ಸ್ವಚ್ಛತೆಯಿಂದಿರಲು ಅಲ್ಲಿನ ಜನರಲ್ಲಿರುವ ಶಿಸ್ತು ಕಾರಣವಾಗಿದೆ. ಅಲ್ಲಿ ಕಾಯಿಲೆಗಳ ಪ್ರಮಾಣವೂ ಕಡಿಮೆ. ಕಾಯ್ದೆಗಳು ಜನರ ಒಳಿತಾಗಿ ಇದೆಯೇ ಹೊರತು ಪೊಲೀಸರಿಗಾಗಿ ಅಲ್ಲ. ನಮ್ಮಲ್ಲಿ ಬುದ್ಧಿವಂತಿಕೆ, ನೈಸರ್ಗಿಕ ಸಂಪನ್ಮೂಲಕ್ಕೆ ಯಾವುದೇ ಕೊರತೆಯಿಲ್ಲ. ಆದರೆ, ಶಿಸ್ತಿನ ಕೊರತೆ ಇದೆ. ಹಾಗಾಗಿ ಎಳೆಯ ಪ್ರಾಯದಲ್ಲಿ ಶಿಸ್ತು ಬೆಳೆಸಲು ಉತ್ತೇಜನ ನೀಡುವ ಅಗತ್ಯವಿದೆ ಎಂದರು.

ಸ್ಕೌಟ್ಸ್- ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಎನ್.ಜಿ. ಮೋಹನ್, ಸ್ಕೌಟ್‌ನ ಜಿಲ್ಲಾ ಆಯುಕ್ತ ರಾಮಶೇಷ ಶೆಟ್ಟಿ, ಗೈಡ್‌ನ ಜಿಲ್ಲಾ ಆಯುಕ್ತ ಐರಿನ್ ಡಿಕುನ್ಹ, ಜಿಲ್ಲಾ ಕೋಶಾಧಿಕಾರಿ ವಾಸುದೇವ ಬೋಳೂರು, ಮಂಗಳೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಸಂತ ರಾವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X