Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸ್ಕಾಮ್ ’ ವ್ಯಂಗ್ಯ : ಮೋದಿಗೆ ರಾಹುಲ್...

‘ಸ್ಕಾಮ್ ’ ವ್ಯಂಗ್ಯ : ಮೋದಿಗೆ ರಾಹುಲ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ5 Feb 2017 9:45 PM IST
share
‘ಸ್ಕಾಮ್ ’ ವ್ಯಂಗ್ಯ : ಮೋದಿಗೆ ರಾಹುಲ್ ತಿರುಗೇಟು

ಕಾನ್ಪುರ,ಫೆ.5: ಪ್ರಧಾನಿ ನರೇಂದ್ರ ಮೋದಿಯವರ ‘ಸ್ಕಾಮ್’(ಹಗರಣ) ವ್ಯಂಗ್ಯಕ್ಕಾಗಿ ಅವರನ್ನು ಇಂದು ತರಾಟೆಗೆತ್ತಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ತಪ್ಪು ಮಾಡಿದವರಿಗೆ ಎಲ್ಲಿ ನೋಡಿದರೂ ಹಗರಣಗಳೇ ಕಾಣುತ್ತವೆ ಎಂದು ಹೇಳಿದರೆ ಅವರ ಮಿತ್ರಪಕ್ಷ ಎಸ್‌ಪಿಯ ಮುಖ್ಯಸ್ಥ ಅಖಿಲೇಶ್ ಯಾದವ ಅವರು,ಮೋದಿಯವರು ಹೇಳಿರುವ ‘ಸ್ಕಾಮ್’ನ ಅರ್ಥ ‘ಸೇವ್ ಕಂಟ್ರಿ ಫ್ರಮ್ ಅಮಿತ್ ಶಾ ಆ್ಯಂಡ್ ಮೋದಿ(ಅಮಿತ್ ಶಾ ಮತ್ತು ಮೋದಿಯವರಿಂದ ದೇಶವನ್ನು ರಕ್ಷಿಸಿ) ’ಎಂದಾಗುತ್ತದೆ ಎಂದು ಕುಟುಕಿದರು.

ಶನಿವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಮೋದಿ,ರಾಜ್ಯವನ್ನು ‘ಸ್ಕಾಮ್’ನಿಂದ ಮುಕ್ತಗೊಳಿಸಿ ಎಂದು ಜನತೆಯನ್ನು ಕೇಳಿಕೊಂಡಿದ್ದರು. ಎಸ್(ಸಮಾಜವಾದಿ ಪಾರ್ಟಿ),ಸಿ(ಕಾಂಗ್ರೆಸ್),ಎ(ಅಖಿಲೇಶ್) ಮತ್ತು ಎಂ(ಮಾಯಾವತಿ) ಎಂದು ಅವರು ಈ ಸ್ಕಾಮ್ ಅನ್ನು ವಿವರಿಸಿದ್ದರು.

ಕಾನ್ಪುರದಲ್ಲಿ ಅಖಿಲೇಶ್ ಜೊತೆ ಜಂಟಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್,ಮೋದಿ ಅಂಜಿಕೆಗೊಳಗಾದಾಗೆಲ್ಲ ಪಿಪಿಇ,ಎಬಿಸಿ,ಎಸ್‌ಸಿಎಎಂ...ಹೀಗೆಲ್ಲ ಲೇಬಲ್‌ಗಳನ್ನು ಹಚ್ಚುತ್ತಲೇ ಇರುತ್ತಾರೆ. ಸ್ವತಃ ತಪ್ಪು ಮಾಡಿದವರಿಗೆ ಎಲ್ಲ ಕಡೆಯೂ ಸ್ಕಾಮ್(ಹಗರಣ)ಗಳೇ ಕಾಣುತ್ತಿರುತ್ತವೆ ಎಂದರು.

ಮೋದಿಯವರು ಯುವಜನರಿಗೆ ಹೆದರಿಕೊಂಡಿದ್ದಾರೆ. ಉದ್ಯೋಗದ ಭರವಸೆಯನ್ನಷ್ಟೇ ನೀಡಿ ವಂಚಿಸಿರುವ ಮೋದಿಗೆ ಯುವಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಬಳಿಕ ಮೋದಿ ಆ ರಾಜ್ಯದ ಹೆಸರನ್ನೇ ಮರೆತಿರುವಂತೆ ಇಲ್ಲಿಯ ಯುವಜನರು ಅವರು ಉತ್ತರ ಪ್ರದೇಶದ ಹೆಸರನ್ನೂ ಮರೆಯುವಂತೆ ಮಾಡಲಿದ್ದಾರೆ ಎಂದರು.

ಮೋದಿ ಸರಕಾರವು ಜನರಿಗೆ ಸುಳ್ಳು ಭರವಸೆಗಳ ಹೊರತು ಬೇರೇನನ್ನೂ ನೀಡಿಲ್ಲ ಎಂದು ಅಖಿಲೇಶ್ ಅರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X