Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೆಡ್‌ಹಿಲ್ ಮುಲ್ಕಿ ತಂಡಕ್ಕೆ‘ಯುನೈಟೆಡ್...

ರೆಡ್‌ಹಿಲ್ ಮುಲ್ಕಿ ತಂಡಕ್ಕೆ‘ಯುನೈಟೆಡ್ ಟ್ರೋಫಿ-2017’

ವಾರ್ತಾಭಾರತಿವಾರ್ತಾಭಾರತಿ5 Feb 2017 10:51 PM IST
share
ರೆಡ್‌ಹಿಲ್ ಮುಲ್ಕಿ ತಂಡಕ್ಕೆ‘ಯುನೈಟೆಡ್ ಟ್ರೋಫಿ-2017’

ಮುಲ್ಕಿ,ಫೆ.5:ಇಲ್ಲಿನ ಕಾರ್ನಾಡು ಗಾಂಧೀ ಮೈದಾನಿನಲ್ಲಿ ನಡೆದ ನಿಗದಿತ ಓವರ್‌ಗಳ ಕ್ರಿಕೆಟ್ ಪಂದ್ಯಾಟದಲ್ಲಿ ರೆಡ್‌ಹಿಲ್ ಮುಲ್ಕಿ ತಂಡವು ನವಭಾರತ್ ಕೋಲ್ನಾಡು ತಂಡವನ್ನು ರೋಮಾಂಚಕಾರಿ ಅಂತಿಮ ಹಣಾಹಣಿಯಲ್ಲಿ ಸೊಲಿಸಿ ತಂಡಕ್ಕೆ‘ಯುನೈಟೆಡ್ ಟ್ರೋಫಿ-2017’ ಹಾಗೂ 15,111ರೂ ಪಡೆದರೆ,ದ್ವಿತೀಯ ಸ್ಥಾನಿಯಾದ ನವಭಾರತ್ ಕೋಲ್ನಾಡು ಟ್ರೋಪಿ ಹಾಗೂ 8,222ರೂ ಪಡೆಯಿತು.

ಅಂತಿಮ ಪಂದ್ಯದಲ್ಲಿ ನಾಣ್ಯ ಚಿಮ್ಮುಗೆಯಲ್ಲಿ ಜಯಗಳಿಸಿದ ನವಭಾರತ ಕೋಲ್ನಾಡು ತಂಡ ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ರೆಡ್‌ಹಿಲ್ ಮೂಲ್ಕಿ ತಂಡ ನಿಗದಿತ ಮೂರು ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 30 ರನ್ ಗಳಿಸಿದರೆ ನಂತರ ಬ್ಯಾಟ್ ಮಾಡಿದ ನವಭಾರತ್ ತಂಡ ನಿಗದಿತ ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 23 ರನ್ ಗಳಿಸಿ 7 ರನ್ನುಗಳಿಂದ ಸೋಲನ್ನು ಕಂಡಿತು.

ಉತ್ತಮ ದಾಂಡಿಗ,ಎಸೆತಗಾರನಾಗಿ ನವಭಾರತ ಕೋಲ್ನಾಡು ತಂಡದ ಪ್ರಕಾಶ್ ಹಾಗೂ ಅಜ್ಮಲ್ ಪ್ರಶಸ್ತಿ ಗಳಿಸಿದರು. ಅಂತಿಮ ಪಂದ್ಯದ ಪಂದ್ಯಶ್ರೇಷ್ಠನಾಗಿ ರೆಡ್‌ಹಿಲ್ ತಂಡದ ನಿತಿನ್ ಮುಲ್ಕಿ ಹಾಗೂ ಸರಣಿ ಶ್ರೇಷ್ಠರಾಗಿ ಶರತ್ ಆಯ್ಕೆಯಾದರು. ವೇದಿಕೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಧನಂಜಯ ಮಟ್ಟು,ಉದ್ಯಮಿ ಜೋಸೆಫ್ ಡಿಸೋಜಾ,ಮುಲ್ಕಿ ನ.ಪಂ. ಸದಸ್ಯ ಪುತ್ತು ಬಾವ,ನ.ಪಂ. ಮಾಜೀ ಅಧ್ಯಕ್ಷ ಶಶಿಕಾಂತ ಶೆಟ್ಟಿ,ಯುವ ಕಾಂಗ್ರೆಸ್ಸ್ ಅಧ್ಯಕ್ಷ ಹಕೀಂ ಮುಲ್ಕಿ.ಉದ್ಯಮಿ ಶಮೀರ್ ಉಪಸ್ಥಿತರಿದ್ದು ಬಹುಮಾನ ವಿತರಿಸಿದರು.ಇರ್ಷಾದ್ ಕಾರ್ಯಕ್ರಮ ನಿರಪಿಸಿದರು.ಪಂದ್ಯಾಟದಲ್ಲಿ ಒಟ್ಟು 30 ತಂಡಗಳು ಭಾಗವಹಿಸಿದ್ದವು.ಉಪಾಂತ್ಯ ಪಂದ್ಯಗಳಲ್ಲಿ ರೆಡ್‌ಹಿಲ್ ತಂಡವು ಸಿಟಿಕೋಲ್ನಾಡು ತಂಡವನ್ನು ಸೋಲಿಸಿದರೆ,ನವಭಾರತ್ ಕೋಲ್ನಾಡು ತಂಡವು ರೋಕರ್ಸ್‌ ಕಾರ್ನಾಡು ತಂಡವನ್ನು ಸೋಲಿಸಿ ಫೈನಲಿಗೇರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X