Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ....

ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ6 Feb 2017 7:32 PM IST
share
ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ

ಮಂಗಳೂರು, ಫೆ.6: ಸರಕಾರದ ಸೇವೆಗಳಲ್ಲಿ ವಿಳಂಬ ಸೇರಿದಂತೆ ನಾಗರಿಕರಿಗೆ ಪಾರದರ್ಶಕವಾಗಿ ಸೌಲಭ್ಯಗಳು ದೊರಕಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲು ಮತ್ತು ದೂರುಗಳನ್ನು ಆಲಿಸಲು ಲೋಕಾಯುಕ್ತ ಸಂಸ್ಥೆಯಿಂದ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ನೂತನ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯ್ಷತೆ ವಹಿಸಿ ಅವರು ಮಾತನಾಡಿದರು.

 ಆಡಳಿತದಲ್ಲಿ ಪಾರದರ್ಶಕತೆ ಅತೀ ಪ್ರಾಮುಖ್ಯವಾಗಿದೆ. ಸರಕಾರಿ ಯೋಜನೆಗಳು ನಾಗರಿಕರಿಗೆ ವೇಗವಾಗಿ ತಲುಪುವುದಿಲ್ಲ ಎಂಬ ದೂರು ಸಾರ್ವತ್ರಿಕವಾಗಿದೆ. ಜನರ ಒಳಿತಿಗಾಗಿ ನಾವು ಕೆಲಸ ನಿರ್ವಹಸುತ್ತಿದ್ದೇವೆ ಎಂಬ ಮನೋಭಾವನೆ ಅಧಿಕಾರಿಗಳಲ್ಲಿ ಬರಬೇಕಿದೆ. ಈ ನಿಟ್ಟಿನಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸರಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಪ್ರಯತ್ನ ಪಡುವುದಾಗಿ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೇಳಿದರು.

ಲೋಕಾಯುಕ್ತ ಸಂಸ್ಥೆಯನ್ನು ಹೆಚ್ಚು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ಸಾರ್ವಜನಿಕರ ದೂರು ಅಹವಾಲಿಸಲು ಮತ್ತು ಸರಕಾರಿ ಕಚೇರಿಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಹಾಗೂ ಲೋಕಾಯುಕ್ತ ಅಧಿಕಾರಿಗಳು ಸರಕಾರಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಸರಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಾಗ ಮಾತ್ರ ಎಸಿಬಿ ಅಥವಾ ಲೋಕಾಯುಕ್ತ ಸಂಸ್ಥೆಗಳ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದು ನ್ಯಾ. ವಿಶ್ವನಾಥ ಶೆಟ್ಟಿ ತಿಳಿಸಿದರು.

  ಸರಕಾರಿ ಆಸ್ಪತ್ರೆ, ಶಾಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗನವಾಡಿ, ವಿದ್ಯಾರ್ಥಿ ನಿಲಯ ಮತ್ತಿತರ ಸೌಲಭ್ಯಗಳು ಸಮಾಜದಲ್ಲಿ ಬಡವರ ಸೇವೆಗೆ ಇರುವಂತಹ ಸಂಸ್ಥೆಗಳಾಗಿವೆ. ಇಂತಹ ಸಂಸ್ಥೆಗಳ ನಿರ್ವಹಣೆ ಹಾಗೂ ನೀಡುವ ಸೇವೆಗಳಲ್ಲಿ ಲೋಪದೋಷ ಕಂಡುಬಂದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಸರಕಾರಿ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟದ ಮೇಲೆ ನಿಗಾ ಇಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ಆದ್ಯತೆಯಲ್ಲಿ ಭರ್ತಿಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಹಾಗೂ ವಸತಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಇರುವ ಬಗ್ಗೆ ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ನ್ಯಾ. ವಿಶ್ವನಾಥ ಶೆಟ್ಟಿ ಸೂಚಿಸಿದರು.

ಜಿಪಂ ಸಿಇಒ ಡಾ. ಎಂ.ಆರ್. ರವಿ ನರೇಗಾ ಉದ್ಯೋಗ ಖಾತ್ರಿ ಯೋಜನೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛ ಭಾರತ ಆಂದೋಲನ, ವಸತಿ ಮತ್ತಿತರ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಪೊಲೀಸ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್ಲಾಕ್ ಆಸ್ಪತ್ರೆ, ಸಮಾಜ ಕಲ್ಯಾಣ ಇಲಾಖೆ, ಮನಪಾ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳ ವಿವರ, ಅನುಷ್ಠಾನ ಮತ್ತು ಪ್ರಗತಿಯ ಮಾಹಿತಿಯನ್ನು ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ತಳಹಂತದವರೆಗೂ ಸಮಗ್ರ ನಿಗಾ ಇರಿಸಬೇಕು. ಸಾರ್ವಜನಿಕರಿಗೆ ಸರಕಾರಿ ಸೇವೆ ನೀಡುವಲ್ಲಿ ವಿಳಂಬ ಮಾಡುವುದೂ ಭ್ರಷ್ಟಾಚಾರಕ್ಕೆ ಸಮವಾಗಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಸೇವೆ ನೀಡಲು ಎಲ್ಲ ಇಲಾಖಾಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಎಸ್ಪಿ ಭೂಷಣ್ ಗುಲಾಬ್ ರಾವ್ ಭೊರಸೆ, ಡಿಸಿಪಿ ಶಾಂತರಾಜು, ಎಸಿಬಿ ಎಸ್ಪಿ ಚೆನ್ನಬಸವಣ್ಣ ಮತ್ತಿತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಕುಮಾರ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X