Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತ್ಯತೀತ ಮತ ವಿಂಗಡಣೆಯಾಗದಿರಲಿ: ಜಮಾಅತೆ...

ಜಾತ್ಯತೀತ ಮತ ವಿಂಗಡಣೆಯಾಗದಿರಲಿ: ಜಮಾಅತೆ ಇಸ್ಲಾಮೀ ಹಿಂದ್

ವಾರ್ತಾಭಾರತಿವಾರ್ತಾಭಾರತಿ6 Feb 2017 10:04 PM IST
share

ಹೊಸದಿಲ್ಲಿ, ಫೆ. 6: ಜಾತ್ಯತೀತ ಮತ ಚಲಾವಣೆಗೆ ಬೆಂಬಲ ಸೂಚಿಸಿರುವ ಜಮಾಅತೆ ಇಸ್ಲಾಮೀ ಹಿಂದ್‌ನ ಅಖಿಲ ಭಾರತ ಅಧ್ಯಕ ಮೌಲಾನ ಸಯ್ಯದ್ ಜಲಾಲುದ್ದೀನ್ ಉಮರಿ ಅವರು ಮುಂಬರುವ ಚುನಾವಣೆಗಳಲ್ಲಿ ದೇಶದ ಸಕಲ ಜನತೆಯು ಜಾತ್ಯತೀತ ಮತಚಲಾವಣೆಗೆ ಬೆಂಬಲ ನೀಡಬೇಕು ಮತ್ತು ಕೋಮು ಧ್ರುವೀಕರಣಾತ್ಮಕ ಧೋರಣೆಗಳಿಗೆ ಸರಿಯಾದ ಪಾಠ ಕಲಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಮರು ಮಾತ್ರವಲ್ಲ, ಸಕಲ ದೇಶ ಬಾಂಧವರೂ ಜಾತ್ಯತೀತ ಮತ ಹರಿಹಂಚಿ ಹೋಗುವುದನ್ನು ತಡೆಗಟ್ಟಬೇಕು ಮತ್ತು ಉತ್ತಮ ಹಿನ್ನೆಲೆಯುಳ್ಳ ಜನಪರ ಕಾಳಜಿಯನ್ನು ಹೊಂದಿದ ಜಾತ್ಯತೀತ ನಾಯಕರನ್ನು ಆಯ್ಕೆ ಮಾಡಲು ಮುಂದಡಿ ಇಡಬೇಕು ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಚುನಾವಣೆಗಳ ಕುರಿತು ಪ್ರಶ್ನಿಸಿದಾಗ ಮೌಲಾನಉಮರಿಯವರು, ನಾವೀೀಗ ಪರಿಸ್ಥಿತಿಗಳ ಅಧ್ಯಯನವನ್ನು ನಡೆಸುತ್ತಿದ್ದೇವೆ. ನಮ್ಮ ಬೆಂಬಲವನ್ನು ಶೀಘ್ರವೇ ತಿಳಿಸಲಿದ್ದೇವೆ. ನಾಯಕರನ್ನು ಆಯ್ದು ಕೊಳ್ಳುವ ಪ್ರಕ್ರಿಯೆಯು ಅವರ ಜಾತ್ಯತೀತ ಮನೋಭಾವ ಮತ್ತು ಕೋಮುವಾದಿ ನಾಯಕರನ್ನು ಸೋಲಿಸಲಿರುವ ಸಾಮರ್ಥ್ಯದ ಮೇಲೆ ನಿರ್ಧರಿಸಲಾಗುವುದು. ರಾಮ ಮಂದಿರ ಮತ್ತು ತಲಾಕ್‌ನಂತಹ ವಿಷಯಗಳನ್ನು ಮುಂದಿರಿಸಿಕೊಂಡು ಚುನಾವಣಾ ಪ್ರಚಾರ ನಡೆಸುತ್ತಿರುವುದು ಅಚ್ಚರಿಯ ವಿಷಯವಾಗಿದೆ. ಆದರೆ ಜನರು ಎದುರಿಸುತ್ತಿರುವ ಬಡತನ, ಭ್ರಷ್ಟಾಚಾರ, ಹಣದುಬ್ಬರ, ನಿರುದ್ಯೋಗಗಳ ಕುರಿತು ಕಾಳಜಿ ಇಲ್ಲದಿರುವುದು ಎದ್ದು ಕಾಣುತ್ತಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಲೀಮ್ ಎಂಜಿನಿಯರ್ ಮಾತನಾಡಿ, ಕೇಂದ್ರ ಬಜೆಟ್‌ನ ನೋಟು ಅಮಾನ್ಯದಿಂದಾಗಿರುವ ತೊಂದರೆಗಳ ನಿವಾರಣೆಗೆ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದನ್ನು ಗಮನಿಸಿದ್ದೇವೆ. ಈಗಾಗಲೇ ಜಾಗತಿಕವಾಗಿಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದೆ. ಶಿಕ್ಷಣರಂಗವನ್ನು ಶೇ.6 ಜಿಡಿಪಿಗೆ ಮತ್ತು ಆರೋಗ್ಯ ರಂಗವನ್ನು ಶೇ. 3 ಜಿಡಿಪಿಗೆ ಸರಕಾರವು ಏರಿಸಬೇಕಿತ್ತು. ಆದರೆ ಅದು ಆ ಹಂತಕ್ಕಿಂತ ಕೆಳಮಟ್ಟದಲ್ಲಿದೆ. ಜಮಾಅತ್ ಬಡ್ಡಿ ರಹಿತ ಸಾಲವನ್ನು ರೈತರಿಗೆ ಮಂಜೂರು ಮಾಡುವಂತೆ ಮನವಿ ಮಾಡಿತ್ತು ಎಂದರು.

ಅಮೇರಿಕದಲ್ಲಿ ಮುಸ್ಲಿಮರ ಮೇಲೆ ಹೇರಲಾದ ನಿರ್ಬಂಧದ ಕುರಿತು ಟ್ರಂಪ್ ಸರಕಾರದ ಧೋರಣೆಯನ್ನು ವಿರೋಧಿಸಿದ ಅವರು ಅಮೇರಿಕ ಧರ್ಮದ ಆಧಾರದಲ್ಲಿ ತಾರತಮ್ಯ ಧೋರಣೆಯನ್ನು ನಡೆಸುತ್ತಿದೆ. ಇದು ಜಾಗತಿಕ ಶಾಂತಿಗೆ ಧಕ್ಕೆಯುಂಟು ಮಾಡುವಂತಹದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಅಮೇರಿಕದ ಈ ನಡೆಯು ಆಶ್ಚರ್ಯಕರ. ಮಾತ್ರವಲ್ಲ, ಮುಸ್ಲಿಮರನ್ನು ವಿರೋಧಿಸುವ ಮೂಲಕ ಜಾಗತಿಕ ಶಾಂತಿಗೆ ಧಕ್ಕೆ ಬರಿಸುವಂತಹ ಹಾಗೂ ಸಾರ್ವತ್ರಿಕ ಸಮಾನತೆ ಮತ್ತು ನ್ಯಾಯಕ್ಕೆ ಕಳಂಕವನ್ನು ತಂದಿರಿಸಿದೆ ಎಂದು ಅವರು ಟ್ರಂಪ್ ಸರಕಾರದ ಧೋರಣೆಯನ್ನು ಖಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X