ರಿಕ್ಷಾ ಚಾಲಕರಿಗೆ ಪ್ರಥಮ ಚಿಕಿತ್ಸೆ ತರಬೇತಿ

ಕೊಣಾಜೆ,ಫೆ.6: ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆ, ದ.ಕ.ಜಿಲ್ಲಾಡಳಿತ, ಕುಡ್ಲ ಸೌಹಾರ್ದ ಸಹಕಾರಿ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಿಕ್ಷಾ ಚಾಲಕರ ಸಂಘದ ಸದಸ್ಯರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ನೀಡಲಾಯಿತು.
ನಿಟ್ಟೆ ಕ್ಷೇಮ ವೈದ್ಯಕೀಯ ವಿದ್ಯಾಲಯದ ಅರಿವಳಿಕೆ ಶಾಸ್ತ್ರದ ಅದ್ಯಾಪಕರಾದ ಡಾ.ಶ್ರೀಪಾದ ಮೆಹಂದಳೆ, ಡಾ.ಸುಮಲತಾ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು. ತರಬೇತಿಯಲ್ಲಿ ಸುಮಾರು 50ಕ್ಕೂ ಹೆಚ್ಚು ರಿಕ್ಷಾ ಚಾಲಕರು ಭಾಗವಹಿಸಿದ್ದರು.
Next Story





