ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿವಾದ ವಿಚಾರಣೆ ಆರಂಭ

ಹೊಸದಿಲ್ಲಿ, ಫೆ.7: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿ ನ್ಯಾಯಾಧೀಕರಣ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭಗೊಂಡಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಆರಂಭಗೊಂಡಿದೆ.
ರಾಜ್ಯ ಸರಕಾರದ ಪರ ಹಿರಿಯ ವಕೀಲ ಫಾಲಿ ಎಸ್. ನಾರೀಮನ್ ವಾದ ಮಂಡಿಸಿದರು.
ಕರ್ನಾಟಕದ ಹಿರಿಯ ವಕೀಲ ಅನಿಲ್ ದಿವಾನ್, ಅಡ್ವೋಕೇಟ್ ಜನರಲ್ ಮಧುಸೂಧನ್ ನಾಯ್ಕ್ , ತಮಿಳುನಾಡು ಪರ ವಕೀಲ ಶೇಖರ್ ನಫಾಡೆ ಭಾಗವಹಿಸಿದ್ದಾರೆ.
Next Story





