ಅಫ್ಘಾನ್ ಸುಪ್ರೀಂ ಕೋರ್ಟ್ ಮೇಲೆ ದಾಳಿ: 19 ಸಾವು

ಕಾಬೂಲ್, ಫೆ. 7: ಅಫ್ಘಾನಿಸ್ತಾನದ ಸುಪ್ರೀಂ ಕೋರ್ಟ್ ಮೇಲೆ ಮಂಗಳವಾರ ಆತ್ಮಹತ್ಯಾ ಬಾಂಬರ್ ಒಬ್ಬ ದಾಳಿ ನಡೆಸಿದ್ದು ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಹಾಗೂ 41 ಮಂದಿ ಗಾಯಗೊಂಡಿದ್ದಾರೆ.
ನ್ಯಾಯಾಲಯದ ಉದ್ಯೋಗಿಗಳು ಕೆಲಸ ಬಿಟ್ಟು ಮನೆಗೆ ಹೋಗಲು ಬಸ್ ಏರುತ್ತಿದ್ದಾಗ ನಡೆದುಕೊಂಡು ಬಂದ ಬಾಂಬರ್ ವಾಹನ ನಿಲುಗಡೆ ಸ್ಥಳದಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡನು ಎಂದು ಆಂತರಿಕ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು.
Next Story





