Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವನ್ಯ ಜೀವಿ ವಿಭಾಗ ಕಚೇರಿ ಮುಂದೆ ಧರಣಿ...

ವನ್ಯ ಜೀವಿ ವಿಭಾಗ ಕಚೇರಿ ಮುಂದೆ ಧರಣಿ ಕುಳಿತ ಪ.ಪಂ.ದ ಯುವಕ

ಪುನರ್ವಸತಿ ಯೋಜನೆಯಡಿಯಲ್ಲಿ ಸಿಗದ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ7 Feb 2017 9:13 PM IST
share
ವನ್ಯ ಜೀವಿ ವಿಭಾಗ ಕಚೇರಿ ಮುಂದೆ ಧರಣಿ ಕುಳಿತ ಪ.ಪಂ.ದ ಯುವಕ

ಕಾರ್ಕಳ, ಫೆ. 7 :ಕುದುರೆಮುಖ ಅಭಯಾರಣ್ಯದಲ್ಲಿ ಒಕ್ಕಲೆದ್ದರೂ, ಪರಿಹಾರ ಮೊತ್ತಕ್ಕಾಗಿ ಸತಾಯಿಸುತ್ತಿರುವ ವನ್ಯ ಜೀವಿ ವಿಭಾಗದ ಕಛೇರಿಯಲ್ಲಿ ಮಲೆಕುಡಿಯ(ಪ.ಪಂ.) ಸಮುದಾಯದ ಯುವಕನೊಬ್ಬ ಬೆಳ್ಳಗ್ಗೆಯಿಂದಲೇ ಧರಣಿ ಕುಳಿತ ಘಟನೆಯೊಂದು ಮಂಗಳವಾರ ನಡೆದಿದೆ. ಈದು ಕನ್ಯಾಲು ಮಹಾಬಲ ಗೌಡ ಎಂಬವರ ಪುತ್ರ ಪ್ರವೀಣ್ ಗೌಡ(23)ಕಚೇರಿ ಮುಂಬಾಗದಲ್ಲಿ ಧರಣಿ ನಡೆಸಿದ್ದಾನೆ. ಆತನ ತಂದೆ ಸರಕಾರಕ್ಕೆ ಭೂಮಿಯನ್ನು ಬಿಟ್ಟುಕೊಟ್ಟು ಒಕ್ಕಲೆದ್ದಿದ್ದಾರೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಪರಿಹಾರಧನವನ್ನು ಯಾಚಿಸಿದ್ದಾರೆ. ಆದರೆ ಕಳೆದ ಆರು ತಿಂಗಳಿನಿಂದ ಅಕಾರಿಗಳು ವಿವಿಧ ಕಾರಣವನ್ನು ಮುಂದಿಟ್ಟುಕೊಂಡು ಸತಾಯಿಸುತ್ತಿದ್ದಾರೆ ಎನ್ನುವುದು ಯುವಕನ ಆರೋಪ. ಪದೇ ಪದೇ ಆ ಕಡತ ಜಿಲ್ಲಾಕಾರಿಗಳಿಂದ ಅನುಮೋದನೆಗೊಳ್ಳಬೇಕಾಗಿದೆ ಎನ್ನುವ ಉತ್ತರ ಇಲಾಖೆಯಿಂದ ಕೇಳಿ ಬರುತ್ತಿದೆ. ಆದರೆ ಅದರ ಜತೆಯಲ್ಲೇ ಇದ್ದ ಆರು ಕಡತಗಳು ಈಗಾಗಲೇ ಮಂಜೂರಾತಿಗೊಂಡಿರುವುದು, ಅಕಾರಿಗಳ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಯುವಕ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಮಲೆಕುಡಿಯ ಬಿಜೆಪಿ ಮುಖಂಡರೊಬ್ಬರ ಮುಖಾಂತರ ನಮ್ಮ ಕಡತಗಳನ್ನು ನೀಡಿಲ್ಲ ಅವರ ಮೂಲಕ ನೀಡಿದ ಕಡತಗಳು ಈಗಾಗಲೇ ಇತ್ಯರ್ಥವಾಗಿ ಅವರಿಗೆ ಪರಿಹಾರ ದೊರಕಿದೆ. ಅವರೆಲ್ಲಾ ಕಮಿಷನ್ನ ನೀಡಿದ್ದಾರೆ. ನಾವು ಕಮಿಷನ್ ನೀಡುವುದಿಲ್ಲ ಎಂಬ ಕಾರಣಕ್ಕಾಗಿ ನನ್ನನ್ನು ಕಡೆಕಣಿಸುತ್ತಿದ್ದಾರೆ,ಎಂದು ಆತ ದೂರಿದ್ದಾನೆ.
  
ಕಾಂಗ್ರೆಸ್ ಪಕ್ಷದ ಪರವಾಗಿದ್ದೇವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಮಧ್ಯವರ್ತಿಗಳ ಕುಮ್ಮಕ್ಕಿಗೆ ಮಣಿದು ಅಕಾರಿಗಳು ನಮ್ಮ ಕುಟುಂಬವನ್ನು ಕಡೆಗಣಿಸುತ್ತಿದ್ದಾರೆ ಎಂದು ಯುವಕ ಧರಣಿ ಕುಳಿತಿದ್ದು, ಸೂಕ್ತ ನ್ಯಾಯ ಸಿಗದಿದ್ದಲ್ಲಿ ಅನಿರ್ದಿಷ್ಟಾವ ಉಪವಾಸ ಕೈಗೊಳ್ಳುವ ಸಿದ್ದತೆ ನಡೆಸಿದ್ದ. ಮಾಜಿ ಶಾಸಕ ಭೇಟಿ :

ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕನ್ಯಾಲಿನಂತಹ ತೀರಾ ಹಿಂದುಳಿದ ಪ್ರದೇಶದ ನಿವಾಸಿ ಮಲೆಕುಡಿಯ ಸಮುದಾಯದ ಪ್ರವೀಣ್ ಗೌಡ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಭೇಟಿ ನೀಡಿ, ನಂತರ ಧರಣಿಯನ್ನು ವಾಪಾಸ್ಸು ತೆಗೆದುಕೊಳ್ಳುವಂತೆ ವಿನಂತಿಸಿಕೊಂಡರು. ಅಲ್ಲದೆ ರಾಜ್ಯ ಅರಣ್ಯ ಸಚಿವರ ಬಳಿ ಮಾತಾಡಿ, ಶೀಘ್ರ ಪರಿಹಾರವನ್ನು ವಿತರಿಸುವ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಅಕಾರಿಗಳಿಗೆ ಸಮಸ್ಯೆಯನ್ನು ಗಂಬೀರವಾಗಿ ಪರಿಗಣಿಸಿ ಅತನಿಗೆ ಸೂಕ್ತ ನ್ಯಾಯವನ್ನು ಒದಗಿಸಿಕೊಡುವಂತೆ ಸೂಚಿಸಿದ್ದಾರೆ. ಅಕಾರಿಗಳ ನಿರ್ಲಕ್ಷತನದಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುವ ಮುನ್ನ ಎಚ್ಚೆತ್ತುಕೊಳ್ಳಿ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಮುಗ್ದ ಜನತೆಯಾಗಿರುವ ಮಲೆಕುಡಿಯ ಸಮುದಾಯದಕ್ಕೆ ನ್ಯಾಯ ಒದಗಿಸುವ ನೆಪದಲ್ಲಿ ಪುನರ್ವಸತಿ ಯೋಜನೆಯಡಿ ಮಂಜೂರಾದ ಪರಿಹಾರ ಮೊತ್ತದಲ್ಲಿ ಕಮಿಷನ್ ಪಡೆಯುತ್ತಿರುವ ಮಧ್ಯವರ್ತಿಗಳ ಬಗ್ಗೆಯೂ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ರಾಜ್ಯ ಅರಣ್ಯ ಸಚಿವರ ಗಮನಕ್ಕೆ ತರುವುದಾಗಿ ಎಚ್ಚರಿಸಿದರು. ಬಳಿಕ ಮಾಜಿ ಶಾಸಕರ ಭರವಸೆಯಂತೆ ಧರಣಿಯನ್ನು ಪ್ರವೀಣ್ ಗೌಡ ವಾಪಾಸ್ಸು ತೆಗೆದುಕೊಂಡರು.
ದೂರು ಕೊಡಿ :
ಮಧ್ಯವರ್ತಿಗಳು ಪುನರ್ವಸತಿ ಯೋಜನೆಯಡಿ ಮಂಜೂರಾದ ಪರಿಹಾರ ಮೊತ್ತದಲ್ಲಿ ಮಧ್ಯವರ್ತಿಗಳು ಫಲಾನುಭವಿಗಳಿಂದ ಕಮಿಷನ್ ಪಡೆದು, ವಂಚಿಸಿದ ಪ್ರಕರಣಗಳಿದ್ದಲ್ಲಿ ನೇರವಾಗಿ ನಮ್ಮ ಗಮನಕ್ಕೆ ತನ್ನಿ. ಇಲ್ಲಿ ಯಾರೂ ಹೆದರುವ ಅವಶ್ಯಕತೆಯಿಲ್ಲ ಎಂದು ವನ್ಯಜೀವಿ ವಿಭಾಗದ ವಲಯ ಅರಣ್ಯಾಕಾರಿ ಗೋಪಾಲ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X