Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆಯ...

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆಯ ಪ್ರತಿಬಿಂಬ

ಗಮನ ಸೆಳೆದ ಭಾರತ ಭಾಗ್ಯವಿಧಾತ ಧ್ವನಿ-ಬೆಳಕು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Feb 2017 10:56 PM IST
share
ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಾಧನೆಯ ಪ್ರತಿಬಿಂಬ

ಮಡಿಕೇರಿ ಫೆ.7: ಅಸಮಾನತೆಯ ನೋವುಂಡು ಬೆಳೆದು, ಜಗದ ಜ್ಞಾನವ ಗಳಿಸಿ ಬದುಕಿನುದ್ದಕ್ಕೂ ಹೋರಾಡಿ ಬುದ್ಧನ ವೈಚಾರಿಕತೆಯಲ್ಲಿ ಬೆಳೆದ ಭಾರತ ಭಾಗ್ಯವಿಧಾತ, ಜಗದ ಕಣ್ಣ ತೆರೆಸಿದಾತ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಯಶೋಗಾಥೆಯನ್ನು ನಾಡಿನ ಕಲೆ, ಸಂಸ್ಕೃತಿಯ ಮೂಲಕ ಕಲಾವಿದರು ಅನಾವರಣಗೊಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 125 ನೇ ವರ್ಷಾಚರಣೆ ಅಂಗವಾಗಿ ನಡೆದ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ ಭಾರತ ಭಾಗ್ಯ ವಿಧಾತಧ್ವನಿ-ಬೆಳಕು ದೃಶ್ಯ ವೈಭವಗಳ ರೂಪಕನಗರದ ಗಾಂಧಿ ಮೈದಾನದಲ್ಲಿ ಸೋಮವಾರ ವರ್ಣರಂಜಿತವಾಗಿ ನಡೆಯಿತು.

ಕಂಸಾಳೆ ಕಲಾವಿದರು ಭಾರತ ಭಾಗ್ಯವಿಧಾತರನ್ನು ಪರಿಚಯಿಸುವ ಪರಿ ವಿಭಿನ್ನವಾಗಿ ಮೂಡಿಬಂತು. ಯಾರು ಭಾರತ ಭಾಗ್ಯವಿಧಾತ ಎಂಬ ಪ್ರಶ್ನೆಗೆ ಕಾರ್ಮಿಕರ ಕಾನೂನು ರೂಪಿಸಿದಾತ, ಕುಡಿಯುವ ನೀರಿನ ಹಕ್ಕು ಕೊಡಿಸಿದ, ಪ್ರತಿ ಹೆಣ್ಣಿಗೂ ಗೌರವದ ಬದುಕು ಕೊಟ್ಟವ, ಆತನೇ ನಮ್ಮ ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಎಂದು ಪರಿಚಯಿಸಿದರು.

ಬಾಲಕನಾಗಿ ಭೀಮ್‌ರಾವ್ ಶಿಕ್ಷಕ ಮಹದೇವ ಅಂಬೇಡ್ಕರ್ ಪ್ರೀತಿಗೆ ಪಾತ್ರನಾಗುವುದು, ಶಾಲೆಯಲ್ಲಿನ ಅಸಮಾನತೆ, ಬಾಲಕ ಅಂಬೇಡ್ಕರ್‌ನನ್ನು ಗಾಡಿಯಿಂದ ತಳ್ಳಿದ ಹಿಂದಿನ ಘಟನೆಯನ್ನು ಕಣ್ಮುಂದೆ ತಂದರು. ನಂತರ ಶಾಹುಮಹಾರಾಜರ ಸಹಾಯದಿಂದ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಸಂವಿಧಾನ ಬರೆದಿದ್ದನ್ನು ಕಲಾವಿದರು ದೃಶ್ಯ ವೈಭವಗಳಲ್ಲಿ ಪ್ರಸ್ತುತಪಡಿಸಿದರು.
     
ಭಾರತ ಭಾಗ್ಯ ವಿಧಾತ ಧ್ವನಿ-ಬೆಳಕು ಕಾರ್ಯಕ್ರಮವು ದೃಶ್ಯ ವೈಭವಗಳ ರೂಪಕವಾಗಿತ್ತು. ಕಣ್ತುಂಬಿಸುವ ಬೆಳಕಿನ ಲೋಕ, ಕಿವಿದುಂಬಿಸುವ ವೈಚಾರಿಕತೆಯ ಹಿನ್ನೋಟವನ್ನು ಒಳಗೊಂಡಿದ್ದು ವಿಶೇಷವಾಗಿತ್ತು. ಸುಮಾರು 80 ಮಂದಿ ಕಲಾವಿದರು ಧ್ವನಿ ಬೆಳಕು ನೃತ್ಯ ರೂಪಕ ನಡೆಸಿ ಗಮನ ಸೆಳೆದರು.

ಧ್ವನಿ ಬೆಳಕು ಕಾರ್ಯಕ್ರಮದ ವೈಶಿಷ್ಟ್ಯ: ಭಾರತ ಭಾಗ್ಯ ವಿಧಾತ-ಇದು ಭಾರತದ ತಳ ಸಮುದಾಯಗಳ ಆತ್ಮಸ್ಥೈರ್ಯವನ್ನು ನೂರ್ಮುಡಿಗೊಳಿಸಿದ ಮಹಾ ಚೇತನದ ಜೀವನ ಚರಿತ್ರೆಯಾಗಿದ್ದು, ನೊಂದವರ ನೋವಿಗೆ ದನಿಯಾಗಿ ನಿಂತ ಧೀಮಂತ ನಾಯಕನ ಆತ್ಮಕತೆ. ತನ್ನ ಪ್ರತಿಭೆ, ಪರಿಶ್ರಮಗಳಿಂದ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪದವಿ ಪುರಸ್ಕಾರ ಗಳಿಸಿದ ಆರ್ಥಿಕ ತಜ್ಞನ ಯಶೋಗಾಥೆಯಾಗಿತ್ತು. ಭಾರತ ಸಂವಿಧಾನದ ಶಿಲ್ಪಿಯೆಂದೇ ಖ್ಯಾತರಾದ ಮಹಾ ಮಾನವತಾವಾದಿಯ ಜೀವಗಾಥೆಯ ಧ್ವನಿ ಬೆಳಕು ಕಾರ್ಯಕ್ರಮ ದೃಶ್ಯ ವೈಭವಗಳ ರೂಪಕವಾಗಿತ್ತು.
  
ದೇಶದ ಹಲವಾರು ಮಹನೀಯರುಗಳ ಕರ್ಮ ಭೂಮಿ. ಸತ್ಯ, ಶಾಂತಿ, ಅಹಿಂಸೆಯೆಂಬ ಮಹಾ ಮೌಲ್ಯಗಳ ಮೂಲಕ ನಮ್ಮ ನಾಡಿಗೆ ಸ್ವಾತಂತ್ರ್ಯ ದೊರಕಿಸಿ, ಭಾರತದ ರಾಷ್ಟ್ರಪಿತನೆಂಬ ಮಹಾಗೌರವಕ್ಕೆ ಪಾತ್ರರಾದವರು ಮಹಾತ್ಮ ಗಾಂಧೀಜಿ. ಹಾಗೆಯೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ತಳ ಸಮುದಾಯಗಳ ಆತ್ಮ ಸ್ಥೈರ್ಯಕ್ಕೆ ಅಡಿಗಲ್ಲಾಗಿ ನಿಂತು ಶತಮಾನಗಳ ಶೋಷಣೆಗೆ ಸಂವಿಧಾನ ರಚನೆಯ ಮೂಲಕ ವಿದಾಯ ಹೇಳಿದ ಮಹಾ ಮಾನವತಾವಾದಿ. ಸೋಮವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಭಾರತ ಭಾಗ್ಯವಿಧಾತ ಧ್ವನಿ ಬೆಳಕು ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಓ ಚಾರುಲತಾ ಸೋಮಲ್, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್, ಪೌರಾಯುಕ್ತರಾದ ಬಿ.ಶುಭ, ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X