Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೋಕ್‌ಗಳಿಗೆ ಹೇಗೆ ಸ್ಪಂದಿಸಬೇಕೆಂದು...

ಜೋಕ್‌ಗಳಿಗೆ ಹೇಗೆ ಸ್ಪಂದಿಸಬೇಕೆಂದು ಜನರಿಗೆ ಸಲಹೆ ನೀಡುವುದು ನಮ್ಮ ಕೆಲಸವಲ್ಲ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ7 Feb 2017 11:56 PM IST
share

ಹೊಸದಿಲ್ಲಿ, ಫೆ.7: ಜನರು ನಗೆಹನಿಗಳನ್ನು ಕೇಳಿದಾಗ ಹೇಗೆ ನಡೆದುಕೊಳ್ಳಬೇಕೆಂದು ತಾನೇಕೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕು?

ಇದು ನಿಜ ಜೀವನದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಿಖ್ ಸಮುದಾಯವು ಹಾಸ್ಯಕ್ಕೆ ವಸ್ತುವಾಗಿರುವ ಕುರಿತು ವಕೀಲ ಹರ್‌ವಿಂದರ್ ಚೌಧರಿ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭ ಇಂದು ಸರ್ವೋಚ್ಚ ನ್ಯಾಯಾಲಯವು ಕೇಳಿರುವ ಪ್ರಶ್ನೆ.
ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಯಾವುದೇ ಅವಮಾನದಿಂದ ರಕ್ಷಣೆ ನೀಡಲು ಕಠಿಣ ಕಾನೂನಿದೆ. ಆದರೆ ಸಿಖ್ ಸಮುದಾಯದ ಕುರಿತಂತೆ ಇಂತಹ ಯಾವುದೇ ಕಾನೂನಿಲ್ಲ ಎಂದು ಚೌಧರಿ ಬೆಟ್ಟು ಮಾಡಿದ್ದರು.
ಹೌದು, ಅದೊಂದು ಕಾನೂನು ಮತ್ತು ಅದನ್ನು ಮಾಡಿರುವುದು ಸಂಸತ್ತು. ಕಾನೂನು ರೂಪಿಸುವ ಅಧಿಕಾರ ಶಾಸಕಾಂಗದ್ದಾಗಿದೆ. ನಾವು ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸುವಂತಿಲ್ಲ, ಇಂತಹ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸುವುದಾದರೂ ಯಾರಿಗೆ ಎಂದು ನ್ಯಾ.ದೀಪಕ್ ಮಿಶ್ರಾ ಪ್ರಶ್ನಿಸಿದರು.
ಇದೇ ರೀತಿ ಇಂಟರ್‌ನೆಟ್‌ನಲ್ಲಿ ಗೂರ್ಖಾ ಸಮುದಾಯವನ್ನು ಟೊಪ್ಪಿಗೆ ಮತ್ತು ಖುಖ್ರಿ(ಬಾಕು)ಯೊಂದಿಗೆ ಸಮೀಕರಿಸಿರುವ ಕುರಿತ ವಿದ್ಯಾರ್ಥಿ ಯೋರ್ವನ ದೂರಿಗೆ ಸಂಬಂಧಿಸಿದಂತೆ ಪೀಠವು, ಈ ನ್ಯಾಯಾಲಯವು ಜನರಿಗೆ ನೈತಿಕ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಸಾಧ್ಯವಿಲ್ಲ. ಜನರು ಪರಸ್ಪರ ಸಂಯಮದಿಂದಿರಬೇಕು. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.
ತಮ್ಮ ಶೌರ್ಯ ಮತ್ತು ಭಾರತಕ್ಕೆ ತಮ್ಮ ಕೊಡುಗೆಗಳಿಂದಾಗಿ ಗೂರ್ಖಾ ಸಮುದಾಯವು ಈ ದೇಶದ ಗೌರವಕ್ಕೆ ಪಾತ್ರವಾಗಿದೆ. ವಾಸ್ತವದಲ್ಲಿ ನೀವು ಇಂತಹ ಅರ್ಜಿಗಳನ್ನು ದಾಖಲಿಸುವ ಮೂಲಕ ಆ ಸಮುದಾಯವನ್ನು ಕೆಳಮಟ್ಟಕ್ಕಿಳಿಸುತ್ತಿದ್ದೀರಿ ಎಂದು ಅರ್ಜಿದಾರರನ್ನು ಕುಟುಕಿದ ನ್ಯಾಯಾಲಯವು, ಯಾವುದೇ ವ್ಯಕ್ತಿ ತನ್ನ ದೂರು ಹೇಳಿಕೊಂಡು ಬಂದರೆ ನಾವು ಅದನ್ನು ಕೈಗೆತ್ತಿಕೊಳ್ಳುತ್ತೇವೆ. ಈ ದೇಶದಲ್ಲಿ ಹಲವಾರು ಧರ್ಮಗಳಿವೆ. ನಿರ್ದಿಷ್ಟ ಸಮುದಾಯ ಅಥವಾ ಧರ್ಮಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ನಾವು ನೀಡಲು ಹೇಗೆ ಸಾಧ್ಯ ಎಂದು ನ್ಯಾ.ಮಿಶ್ರಾ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X