Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬುರ್ಕಾ ಧರಿಸಿದ್ದ ವಿದ್ಯಾರ್ಥಿನಿಯರ ಮೇಲೆ...

ಬುರ್ಕಾ ಧರಿಸಿದ್ದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ : ಕಠಿಣ ಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Feb 2017 6:26 PM IST
share
ಬುರ್ಕಾ ಧರಿಸಿದ್ದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ : ಕಠಿಣ ಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ

ಶಿವಮೊಗ್ಗ, ಫೆ. 8: ನಗರದ ಸಹ್ಯಾದ್ರಿ ಕಾಲೇಜ್‌ನಲ್ಲಿ ಇತ್ತೀಚೆಗೆ ಬುರ್ಕಾ ಧರಿಸಿದ್ದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಎಬಿವಿಪಿ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರಗಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿ.ಎಫ್.ಐ.) ಸಂಘಟನೆಯ ಜಿಲ್ಲಾ ಉಸ್ತುವಾರಿ ಎ.ಎಂ.ಫಯಾಜ್‌ರವರು ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಲ್ಲೆ ನಡೆದಿರುವುದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇಲ್ಲಿಯವರೆಗೂ ಪೊಲೀಸರು ಕೇಸ್ ದಾಖಲಿಸಿಕೊಂಡು ಕ್ರಮ ಜರುಗಿಸಿಲ್ಲ. ತಕ್ಷಣವೇ ಕೇಸ್ ದಾಖಲಿಸಿ, ಆರೋಪಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಗೊಂದಲ ಸೃಷ್ಟಿ: ಸಹ್ಯಾದ್ರಿ ಕಾಲೇಜ್‌ನಲ್ಲಿ ಕೆಲ ದಿನಗಳಿಂದ ವಸ್ತ್ರ ಸಂಹಿತೆ ವಿವಾದ ಉಂಟಾಗಿದೆ. ಇದರ ನೆಪದಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಹಾಕಿಕೊಂಡು ಬುರ್ಕಾ ನಿಷೇಧ ಮಾಡುವಂತೆ ಫೆ.2ರಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ತರಗತಿಗಳಿಗೆ ನುಗ್ಗಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಕುವೆಂಪು ವಿಶ್ವ ವಿದ್ಯಾನಿಲಯವು ವಸ್ತ್ರ ನೀತಿ ಸಂಹಿತೆಯ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿತ್ತು. ಇದರ ಹೊರತಾಗಿಯೂ ಎಬಿವಿಪಿ ಸಂಘಟನೆಯವರೆಂದು ಹೇಳಿಕೊಂಡ ಕೆಲ ವಿದ್ಯಾರ್ಥಿಗಳು ಫೆ.3ರಂದು ಮತ್ತೆ ಕಾಲೇಜ್‌ನ ತರಗತಿಯೊಳಗೆ ಏಕಾಏಕಿ ನುಗ್ಗಿ ಬುರ್ಕಾ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಕೂಡ ಇದುವರೆಗೂ ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ತಕ್ಷಣವೇ ಎಫ್‌ಐಆರ್ ದಾಖಲು ಮಾಡಿಕೊಳ್ಳಬೇಕೆಂದು ಎ.ಎಂ.ಫಯಾಜ್‌ರವರು ಆಗ್ರಹಿಸಿದ್ದಾರೆ.

ಬೆದರಿಸಿದ್ದಾರೆ: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿನಿಯರಾದ ಉಮೇ ಸಲ್ಮಾ ಹಾಗೂ ಉಮೇಹಾನಿ ಮಾತನಾಡಿ, ಕೆಲವು ವಿದ್ಯಾರ್ಥಿಗಳು ಕಾಲೇಜ್‌ನ ತರಗತಿಗಳಿಗೆ ನುಗ್ಗಿ ನಮ್ಮನ್ನು ಬೆದರಿಸಿದ್ದಾರೆ. ಬುರ್ಕಾ ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆಯರ ಮೇಲೆ ಈ ರೀತಿಯ ದೌರ್ಜನ್ಯ ಆಗುತ್ತಿರುವುದು ಖಂಡನೀಯವಾಗಿದೆ. ಈ ಬಗ್ಗೆ ನಾವು ವೀಡಿಯೋ ಕೂಡ ಮಾಡಿ ದೂರು ಕೊಟ್ಟಿದ್ದೇವೆ. ನಮ್ಮನ್ನು ಬೆದರಿಸಲಾಗಿದೆ. ನಾವು ಮುಂದೆ ಕಾಲೇಜಿಗೆ ಹೋಗುವುದು ಹೇಗೆ? ನಮ್ಮ ಶಿಕ್ಷಣದ ಗತಿ ಏನು? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದೊಂದು ಗಂಭೀರ ವಿಷಯವಾಗಿದ್ದು ಪೊಲೀಸರು, ಶಿಕ್ಷಣ ಇಲಾಖೆ ಮಧ್ಯ ಪ್ರವೇಶಿಸಿ ಪರಿಹಾರ ಕಲ್ಪಿಸಬೇಕು. ನಮಗೆ ನ್ಯಾಯ ಒದಗಿಸಬೇಕು. ಕಾಲೇಜ್‌ನಲ್ಲಿ ಭಯಮುಕ್ತ ವಾತಾವರಣ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಗೋಷ್ಠಿಯಲ್ಲಿ ಅರೀಫ್‌ವುಲ್ಲಾ ಸೇರಿದಂತೆ ಇತರೆ ವಿದ್ಯಾರ್ಥಿನಿಯರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X