Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲೇರಿಯಾ ನಿಯಂತ್ರಣಕ್ಕೆ ವಿಶೇಷ...

ಮಲೇರಿಯಾ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Feb 2017 6:40 PM IST
share
ಮಲೇರಿಯಾ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ

ಮಂಗಳೂರು, ಫೆ.8: ಮಲೇರಿಯಾ ರೋಗವು ಸಮಾಜದ ಜನರನ್ನು ಕಾಡುತ್ತಿರುವ ಪ್ರಮುಖ ಸಾಂಕ್ರಾಮಿಕ ರೋಗವಾಗಿದೆ. ಇದು ‘ಪ್ಲಾಸ್ಮೋಡಿಯಂ’ ಎಂಬ ಪರಾವಲಂಬಿ ಸೂಕ್ಷ್ಮಾಣುವಿನಿಂದ ಉಂಟಾಗುತ್ತದೆ. ಸೋಂಕಿತ ಹೆಣ್ಣು ಅನಾಫೆಲೀಸ್ ಸೊಳ್ಳೆಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತವೆ. ಈ ರೋಗಾಣು ತನ್ನ ಜೀವಿತದ ಕೆಲಭಾಗವನ್ನು ಮನುಷ್ಯರಲ್ಲೂ ಕಳೆಯುತ್ತದೆ. ಚಳಿಜ್ವರ ಬಂದ ತಕ್ಷಣ ವೈದ್ಯರಲ್ಲಿ ಅಗತ್ಯವಾಗಿ ಪರೀಕ್ಷಿಸಬೇಕು ಎಂದು ಡಾ. ರೊನಾಲ್ಡ್ ಫೆರ್ನಾಂಡಿಸ್ ಹೇಳಿದರು.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೇರಿಯಾ ರೋಗಾಣುಗಳನ್ನು ಹೊಂದಿರುವ ವ್ಯಕ್ತಿಯನ್ನು ಹೆಣ್ಣು ಅನಾಫೆಲಿಸ್ ಸೊಳ್ಳೆ ಕಚ್ಚಿದಾಗ ರೋಗಾಣುಗಳು ಸೊಳ್ಳೆಯ ದೇಹವನ್ನು ಪ್ರವೇಶಿಸಿ 10 ರಿಂದ 14 ದಿನಗಳವರೆಗೆ ಅಭಿವೃದ್ಧಿ ಹೊಂದಿ ರೋಗವನ್ನು ಹರಡುವ ಸ್ಥಿತಿಗೆ ಬಂದು ಆರೋಗ್ಯವಂತ ಮನುಷ್ಯನನ್ನು ಈ ಸೊಳ್ಳೆ ಕಚ್ಚಿದಾಗ ಮನುಷ್ಯನಲ್ಲಿ ಮಲೇರಿಯಾ ರೋಗದ ಲಕ್ಷಣಗಳು ಕಾಣಿಸಲು ಪ್ರಾರಂಭಿಸುತ್ತದೆ ಎಂದು ಹೇಳಿದರು.

ರೋಗ ಲಕ್ಷಣಗಳು: ಚಳಿಯ ಹಂತದಲ್ಲಿ ಚಳಿಯ ಜೊತೆಯಲ್ಲಿ ನಡುಕ ಹಾಗೂ ತಲೆನೋವು ಇರುತ್ತದೆ. ಇದು ಸುಮಾರು 15 ನಿಮಿಷದಿಂದ 1 ಗಂಟೆಯ ಸಮಯ ಇರಬಹುದು. ಬಿಸಿಯ ಹಂತದಲ್ಲಿ ಜ್ವರ ತೀವ್ರವಾಗಿ ಹರಡುತ್ತದೆ. ವಿಪರೀತ ತಲೆನೋವು, ವಾಕರಿಕೆ, ವಾಂತಿಯಾಗುವಂತೆ ಅನಿಸುತ್ತದೆ. ವಿಪರೀತ ವಾಯಾರಿಕೆ ಅನಿಸುತ್ತದೆ. ಈ ಹಂತದಲ್ಲಿ 2 ರಿಂದ 6 ಗಂಟೆಗಳ ಕಾಲ ಇರುತ್ತದೆ. ಬೆವರುವಿಕೆಯ ಹಂತದಲ್ಲಿ ಜ್ವರ ಕಡಿಮೆಯಾಗುತ್ತದೆ. ದೇಹವಿಡೀ ವಿಪರೀತ ಬೆವರುತ್ತದೆ. ಸಾಮಾನ್ಯವಾಗಿ ರೋಗಿಗೆ ಗಾಢ ನಿದ್ರೆ ಬರುತ್ತದೆ. ಎಚ್ಚರವಾದಾಗ ಬಳಲಿ ಸುಸ್ತಾದ ಅನುಭವ ಆಗುತ್ತದೆ. ಈ ಹಂತವು 2ರಿಂದ 4 ಗಂಟೆಗಳ ಕಾಲ ಇರುತ್ತದೆ. ಇಂತಹ ಲಕ್ಷಣಗಳನ್ನು ಕಾಣಬಹುದಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಪ್ಲಾಸ್ಮೋಡಿಯಂ ವೈವ್ಯಾಕ್ಸ್(ಪಿವಿ), ಪ್ಲಾಸ್ಮೋಡಿಯಂ ಫಾಲ್ಸಿಫಾರಂ(ಪಿಎಫ್) ಮಲೇರಿಯಾ ಪ್ರಬೇಧಗಳು ಸದ್ಯಕ್ಕೆ ಕಂಡು ಬರುತ್ತಿವೆ. ಫಾಲಿಫಾರಂ ಮಲೇರಿಯಾ ಅತ್ಯಂತ ಅಪಾಯಕಾರಿ. ಸರಿಯಾದ ಕಾಲದಲ್ಲಿ ಅಗತ್ಯ ಚಿಕಿತ್ಸೆ ನೀಡದಿದ್ದರೆ ರೋಗಿ ಸಾಯಲೂಬಹುದು ಎಂದು ತಿಳಿಸಿದರು.

ಯಾವುದೇ ಜ್ವರ ಮಲೇರಿಯಾ ಇರಬಹುದು. ಎಲ್ಲ ಜ್ವರವಿರುವ ವ್ಯಕ್ತಿಗಳಿಂದ ರಕ್ತ ಲೇಪನವನ್ನು ಸಂಗ್ರಹಿಸಬೇಕು. ರಕ್ತ ಲೇಪನ ಪರೀಕ್ಷೆಯಿಂದ ದೃಢಪಟ್ಟ ಮಲೇರಿಯಾ ಪ್ರಕರಣಗಳಿಗೆ ತೀವ್ರ ಚಿಕಿತ್ಸೆಯನ್ನು ಕೊಡಬೇಕು. ಸಂಗ್ರಹಿಸಿದ 24 ಗಂಟೆಗಳ ಒಳಗೆ ಪರೀಕ್ಷಾ ಫಲಿತಾಂಶ ಸಿಗುವ ಸಂಭವ ಇಲ್ಲದ ಕಡೆಗಳಲ್ಲಿ ತ್ವರಿತ ರೋಗ ಪತ್ತೆ ವಿಧಾನದ ಕಿಟ್ಟುಗಳನ್ನು ಆ ಗ್ರಾಮದಲ್ಲಿರುವ ಆಶಾ ಕಾರ್ಯಕರ್ತೆಯರು ಬಳಸಬಹುದಾಗಿದೆ ಎಂದು ತಿಳಿಸಿದರು.

ಮಲೇರಿಯಾ ಪ್ರಕರಣಗಳಲ್ಲಿ ಸಂಶಯಾಸ್ಪದ ಮಲೇರಿಯಾ ಪ್ರಕರಣ, ಖಚಿತ ಮಲೇರಿಯಾ ಪ್ರಕರಣ, ತೀವ್ರತರವಾದ ಮಲೇರಿಯಾ ಪ್ರಕರಣಗಳೆಂದು ವಿಂಗಡಿಸಬಹುದಾಗಿದೆ. ಅದರಲ್ಲೂ ತೀವ್ರತರ ಮಲೇರಿಯಾದ ಲಕ್ಷಣಗಳನ್ನು ಹೊಂದಿರುವ ಹಾಗೂ ರಕ್ತಲೇಪನ (ಆರ್‌ಡಿಟಿ) ಪರೀಕ್ಷೆಯಿಂದ ಪಿಎಫ್ ಮಲೇರಿಯಾ ಎಂದು ದೃಢಪಟ್ಟ ರೋಗಿ ಮರಣ ಹೊಂದಿದರೆ ಮಾತ್ರ ಅದನ್ನು ಮಲೇರಿಯಾ ಮರಣವೆಂದು ಪರಿಗಣಿಸಬೇಕು ಎಂದು ತಿಳಿಸಿದರು.

ನಿಯಂತ್ರಣ ಕ್ರಮಗಳು: ಸೊಳ್ಳೆ ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸಿ ನಿಯಂತ್ರಿಸಬೇಕು. ಘನ ತ್ಯಾಜ್ಯ ಸಮರ್ಪಕ ವಿಲೇವಾರಿ ಮಾಡಬೇಕು. ನೀರು ಸಂಗ್ರಹಣ ಟ್ಯಾಂಕ್‌ಗಳಿಗೆ ಭದ್ರವಾದ ಮುಚ್ಚಳ ಅಳವಡಿಸಬೇಕು. ರಾತ್ರಿ ಸೊಳ್ಳೆ ಪರದೆ ಉಪಯೋಗಿಸಬೇಕು. ಕಿಟಕಿಗಳಿಗೆ ಜಾಲಸರಿ ಅಳವಡಿಸಬೇಕು. ಮನೆಯ ಪರಿಸರದಲ್ಲಿ ತುಳಸಿ, ಕಹಿಬೇವಿನ ಸಸಿಗಳನ್ನು ಬೆಳಸಬೇಕು. ಬಾವಿ, ಟ್ಯಾಂಕರ್‌ಗಳಲ್ಲಿ ಗಪ್ಪಿ, ಗಂಬ್ಯೂಷಿಯಾ ಮೀನುಗಳನ್ನು ಸಾಕುವಂತಹ ಕ್ರಮಗಳನ್ನು ಕೈಗೊಳ್ಳಬೇಕು. ಇದರಿಂದ ಮಲೇರಿಯಾ ಹರಡದಂತೆ ತಡೆಗಟ್ಟಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅರುಣ್‌ಕುಮಾರ್, ಡಾ. ರಾಜೇಶ್, ಮಂಜುಳಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X