ಹೊಸ ಪಡಿತರ ಚೀಟಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕರೆ
ಉಡುಪಿ, ಫೆ.8: ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ಬೇರ್ಪಡೆ/ತಿದ್ದುಪಡಿ ಕೆಲಸಗಳನ್ನು ಮಾಡಿಸಿಕೊಳ್ಳುವರೇ ಪ್ರಸ್ತುತ ಆನ್‌ಲೈನ್‌ನಲ್ಲಿ ಅವಕಾಶ ಸ್ಥಗಿತಗೊಂಡಿದ್ದು, ಈ ಅವಕಾಶ ಕಲ್ಪಿಸಿದ ಕೂಡಲೇ ಪಡಿತರ ಚೀಟಿಯ ತಿದ್ದುಪಡಿ ಕೆಲಸಗಳನ್ನು ಮಾಡಿಕೊಡಲಾ ಗುವುದು ಎಂದು ಪ್ರಕಟಣೆ ತಿಳಿಸಿದೆ.
ಆದರೆ ಹೊಸ ಪಡಿತರ ಚೀಟಿಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ. ನಗರ ಪ್ರದೇಶದಲ್ಲಿ ಫೋಟೋ ಬಯೋಸೆಂಟರ್‌ಗಳಲ್ಲಿ, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಪಂ ಕಚೇರಿಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬಿಪಿಎಲ್ ಪಡಿತರ ಚೀಟಿ ಹೊಂದಲು ಪ್ರತಿ ತಿಂಗಳು 150 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವ ಕುಟುಂಬ ಅರ್ಜಿ ಸಲ್ಲಿಸುವಂತಿಲ್ಲ. ನಗರದಲ್ಲಿ 860 ರೂ ಹಾಗೂ ಗ್ರಾಮೀಣ ಪ್ರದೇಶದಲ್ಲಿ 836ರೂ.ಗಿಂತ ಕಡಿಮೆ ವಿದ್ಯುತ್ ಬಿಲ್ಲು ಕಟ್ಟುವವರು ಮಾತ್ರ ಬಿಪಿಎಲ್ ಪಡಿತರಕ್ಕೆ ಅರ್ಜಿ ಸಲ್ಲಿಸಲು ಅರ್ಹರು.
ನಾಲ್ಕು ಚಕ್ರದ ವಾಹನ ಹೊಂದಿದ ಕುಟುಂಬಗಳು (ಜೀವನೋಪಾಯಕ್ಕೆ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ, ಟ್ರಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಹೊಂದಿದ ಕುಟುಂಬ ಹೊರತುಪಡಿಸಿ) ಬಿಪಿಎಲ್‌ಗೆ ಅರ್ಜಿ ಸಲ್ಲಿಸುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿದ ಕುಟುಂಬಗಳು ಬಿಪಿಎಲ್‌ಗೆ ಅರ್ಜಿ ಸಲ್ಲಿಸುವಂತಿಲ್ಲ. ಸರಕಾರಿ ನೌಕರರು, ಅರೆ ಸರಕಾರಿ ನೌಕರರು, ನಿಗಮ ಮಂಡಳಿಗಳ ಸಹಿತ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್ ಪಾವತಿಸುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಂತಿಲ್ಲ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಥಳ ಪರಿಶೀಲನೆ ಬಳಿಕವಷ್ಟೇ ಅರ್ಹತೆಗೆ ಅನುಗುಣವಾಗಿ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು ಎಂದು ಉಡುಪಿ ತಹಶೀಲ್ದಾರ್ ಮಹೆೀಶ್ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







