Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳಿಗರ ಪ್ರಯತ್ನಕ್ಕೆ ಜಯ; 9 ತಿಂಗಳಿಂದ...

ಭಟ್ಕಳಿಗರ ಪ್ರಯತ್ನಕ್ಕೆ ಜಯ; 9 ತಿಂಗಳಿಂದ ಕೋಮಾಸ್ಥಿತಿಯಲ್ಲಿದ್ದ ವ್ಯಕ್ತಿ ಭಾರತಕ್ಕೆ

ಎಂ.ಆರ್.ಮಾನ್ವಿಎಂ.ಆರ್.ಮಾನ್ವಿ8 Feb 2017 10:10 PM IST
share
ಭಟ್ಕಳಿಗರ ಪ್ರಯತ್ನಕ್ಕೆ ಜಯ; 9 ತಿಂಗಳಿಂದ ಕೋಮಾಸ್ಥಿತಿಯಲ್ಲಿದ್ದ ವ್ಯಕ್ತಿ ಭಾರತಕ್ಕೆ

ಭಟ್ಕಳ,ಫೆ.8: ಒಂದು ಕೋಟಿಗೂ ಮಿಕ್ಕಿದ ಆಸ್ಪತ್ರೆಯ ಬಿಲ್ ಭರಿಸದೆ ಕಳೆದ 9ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಭಟ್ಕಳ ಮೂಲದ ಅಬೂಬಕರ್ ಮಾಕಡೆ ಭಟ್ಕಳಿಗರ ನಿರಂತರ ಪ್ರಯತ್ನದಿಂದಾಗಿ ಕೊನೆಗೂ ಭಾರತಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದಾರೆ ಶುಕ್ರವಾರ ಬೆಂಗಳೂರಿಗೆ ಕರೆ ತರುವುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಇಲ್ಲಿನ ಹೆಬಳೆ ಗ್ರಾ.ಪಂ. ಉಪಾಧ್ಯಕ್ಷ ಇಬ್ಬು ಅಲಿ ಎಂಬವರ ಅಳಿಯ(ಪುತ್ರಿಯ ಪತಿ) ಶಿರೂರು ನಿವಾಸಿ ಅಬೂಬಕರ್ ಮಾಕಡೆ ಎಂಬವರು ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿದ್ದು ಅಪಘಾತವೊಂದರಲ್ಲಿ ಕೋಮಾ ಅವಸ್ಥೆಗೆ ತಲುಪಿದ್ದು ಅಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸರ್ಕಾರಿ ಆಸ್ಪತ್ರೆಯೆಂದರೆ ಉಚಿತ ಚಿಕಿತ್ಸೆ ಎಂದು ಭಾವಿಸಿದ ಅವರ ಸಂಬಂಧಿಕರು ಚಿಕಿತ್ಸೆಯನ್ನು ಪ್ರಾರಂಭಿಸಿದರು. ಕಳೆದ ಒಂಬತ್ತು ತಿಂಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣದೆ ಇರುವಾಗ ಅವರನ್ನು ಭಾರತಕ್ಕೆ ತರುವ ಪ್ರಯತ್ನಕ್ಕೆ ಕುಟುಂಬದವರು ಪ್ರಯತ್ನಿಸಿದರಾದರೂ ಆಸ್ಪತ್ರೆಯ ಒಂದು ಕೋಟಿ ರೂ. ಬಿಲ್ ನೋಡಿ ದಂಗಾದರು. ಜೀವನಮಾನವಿಡಿ ದುಡಿದರೂ ಒಂದು ಕೋಟಿ ರೂ. ಒದಗಿಸಲು ಸಾಧ್ಯವಗುವುದಿಲ್ಲ ಎಂದು ತಿಳಿದು ತಮ್ಮ ಅಳಿಯ ಸ್ವದೇಶಕ್ಕೆ ಮರಳುವ ಆಸೆಯನ್ನು ಕೈಬಿಟ್ಟಿದ್ದರು.

ಆದರೆ ಇತ್ತೀಚೆಗೆ ಇಲ್ಲಿನ ಸಾಹಿಲ್ ಆನ್ ಲೈನ್ ಅಂತರ್ಜಾಲ ತಾಣವು ಈ ಕುರಿತಂತೆ ವಿಸ್ತೃತ ವರದಿಯನ್ನು ಪ್ರಕಟಿಸಿದ್ದು ಇದರ ಪರಿಣಾಮವಾಗಿ ಸೌದಿಯಲ್ಲಿರುವ ಭಟ್ಕಳ ಹಾಗೂ ಮುರುಡೇಶ್ವರದ ನವಾಯತ್ ಸಮುದಾಯ ಇದಕ್ಕಾಗಿ ಹಗಲಿರುಳು ಪ್ರಯತ್ನಿಸಿತ್ತು. ಇವರ ಪ್ರಯತ್ನಕ್ಕೀಗ ಯಶಸ್ಸು ದೊರೆಕಿದ್ದು ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಸೌದಿ ಆಸ್ಪತ್ರೆಯ ಅಧಿಕಾರಿಗಳು ಒಂದು ಕೋಟಿ ರೂ ಬಿಲ್ಲನ್ನು ಮನ್ನಾ ಮಾಡಿದ್ದಲ್ಲದೆ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಮಾಡಿ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಅನಿವಾಸಿ ಭಾರತೀಯರಾದ ಭಟ್ಕಳದ ಡಾ. ಝಹೀರ್ ಕೋಲಾ ಹಾಗೂ ಡಾ.ವಸೀಮ್ ಮಾಣಿಯವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದು ಅಬೂಬಕರ್ ಮಾಕಡೆಯವರ ಕುಟುಂಬ ಈಗ ನಿಟ್ಟುಸಿರು ಬಿಡುವಂತೆ ಮಾಡಿದೆ.

ಈ ನಡುವೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಡಾ.ಝಹೀರ್ ಹಾಗೂ ಡಾ.ವಸೀಮ್ ಸಭೆಯೊಂದನ್ನು ಆಯೋಜಿಸಿದ್ದು ಅಲ್ಲಿ ಅಬೂಬಕರ್ ಮಾಕಡೆಯ ಚಕಿತ್ಸೆಗಾಗಿ ಸಹಾಯಹಸ್ತ ಚಾಚುವಂತೆ ವಿನಂತಿಸಿಕೊಂಡಿದ್ದು ಇದಕ್ಕೆ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ದಾನಿಗಳು ನೀಡುವ ವಾಗ್ದಾನ ಮಾಡಿದ್ದರಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವ ಭಟ್ಕಳದಲ್ಲಿರುವ ಅಬೂಬಕರ್ ಕುಟುಂಬ ಈಗ ಸ್ವಲ್ಪಮಟ್ಟಿಗೆ ಉಸಿರಾಡುವಂತಾಗಿದೆ.

ರಿಯಾದ್ ನ ಸಭೆಯನ್ನುದ್ದೇಶಿಸಿ ಮಾತನಾಡಿದ ಮುರಡೇಶ್ವರ ಮುಸ್ಲಿಮ್ ಜಮಾಅತ್ ರಿಯಾದ್ ಇದರ ಅಧ್ಯಕ್ಷ ಅಶ್ಫಾಖ್ ಕೋಟೇಶ್ವರ, ಡಾ.ಝಹೀರ್ ಹಾಗೂ ಡಾ.ವಸೀಮ್ ರ ಕಾರ್ಯ ಶ್ಲಾಘನೀಯವಾಗಿದ್ದು ಮುಂಬರುವ ದಿನಗಳಲ್ಲಿ ನಾವು ಒಟ್ಟಾಗಿ ಇಂತಹ ಸಮಸ್ಯೆಗಳಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಭಟ್ಕಳದ ಎಲ್ಲ ಸಮುದಾಯದವರು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತಮ್ಮಿಂದಾದ ಸಹಾಯ ಸಹಕಾರ ಮಾಡಬೇಕಾಗಿದೆ ಎಂದು ತಿಳಿಸಿದರು.

 ಮಾಧ್ಯಮ ಪ್ರತಿನಿಧಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಡಾ.ವಸೀಮ್ ಮಾಣಿ, ಅಬೂಬಕರ್ ಮಾಕಡೆಯವರನ್ನು ಶುಕ್ರವಾರ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದ್ದು ಅಲ್ಲಿ ತಜ್ಞ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗುವುದು, ಅವರು ಸಂಪೂರ್ಣ ಚಿಕಿತ್ಸೆ ಆಗುವವರೆಗೂ ನಾವು ಪ್ರಯತ್ನ ಮಾಡುತ್ತೇವೆ. ಗಲ್ಫ್ ನಲ್ಲಿರುವ ಭಟ್ಕಳದ ಎಲ್ಲ ಜಮಾಅತ್ ಮುಖಂಡರಿಗೆ ಧನಸಹಾಯಕ್ಕೆ ಮನವಿ ಮಾಡಿಕೊಳ್ಳಲಾಗುವುದು. ಚಿಕಿತ್ಸೆಯಲ್ಲಿ ಯಾವುದಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಭಟ್ಕಳದ ನವಾಯತ್ ಸಮುದಾಯದ ಮಾನವೀಯ ಮುಖ, ಕಳಕಳಿ, ಅವರ ಅಂತಃಕರಣ ಈ ಒಂದು ಘಟನೆಯಿಂದಾಗಿ ಜಗತ್ತಿಗೆ ಪರಿಚಯವಾದಂತಾಗದೆ. ಸದಾ ಭಟ್ಕಳದ ನವಾಯತ್ ಸಮುದಾಯದ ಕುರಿತು ಇಲ್ಲಸಲ್ಲದ ಆರೋಪ ಮಾಡುತ್ತಿರುವವರಿಗೆ ಈ ಘಟನೆ ಪಾಠ ಕಲಿಸಿದಂತಾಗಿದೆ.

share
ಎಂ.ಆರ್.ಮಾನ್ವಿ
ಎಂ.ಆರ್.ಮಾನ್ವಿ
Next Story
X