Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವಿಪಕ್ಷೀಯ ರಾಜತಾಂತ್ರಿಕ ಮಾರ್ಗಗಳ ಮೂಲಕ...

ದ್ವಿಪಕ್ಷೀಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕ್ ಜೊತೆ ಸಂಪರ್ಕ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ8 Feb 2017 11:34 PM IST
share

ಹೊಸದಿಲ್ಲಿ,ಫೆ.8: ಪಾಕಿಸ್ತಾನದೊಂದಿಗೆ ಉತ್ತಮ ನೆರೆಹೊರೆ ಬಾಂಧವ್ಯವನ್ನು ಹೊಂದಿರಲು ತಾನು ಬಯಸಿರುವುದಾಗಿ ಬುಧವಾರ ಪುನರುಚ್ಚರಿಸಿದ ಸರಕಾರವು ದ್ವಿಪಕ್ಷೀಯ ರಾಜತಾಂತ್ರಿಕ ಮಾರ್ಗಗಳ ಮೂಲಕ ತಾನು ಆ ರಾಷ್ಟ್ರದೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿತು.

ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯವನ್ನು ತಿಳಿಸಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು, ಪಾಕ್ ಮೂಲದ ಭಯೋತ್ಪಾದಕ ಸಂಘಟನೆಗಳು ಭಾರತದಲ್ಲಿ ನಡೆಸಿದ್ದ ಭಯೋತ್ಪಾದಕ ದಾಳಿಗಳಿಂದಾಗಿ 2015ರಲ್ಲಿ ತನ್ನ ಇಸ್ಲಾಮಾಬಾದ್ ಭೇಟಿ ಸಂದರ್ಭ ಒಪ್ಪಿಕೊಂಡಂತೆ ಸಂಕೀರ್ಣ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ ಎಂದರು.

ಪಠಾಣ್‌ಕೋಟ್ ಮತ್ತು ಉರಿ ದಾಳಿಗಳ ಹಿನ್ನೆಲೆಯಲ್ಲಿ ಸರಕಾರದ ರಾಜತಾಂತ್ರಿಕ ಪ್ರಯತ್ನಗಳಿಂದಾಗಿ ಭಯೋತ್ಪಾದಕರನ್ನು ಪ್ರಾಯೋಜಿಸುವ ಮತ್ತು ಬೆಂಬಲಿಸುವ ಪಾಕಿಸ್ತಾನದ ನೀತಿಯು ಭಾರತ ಉಪಖಂಡ ಮತ್ತು ಅದರಾಚೆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಸವಾಲಾಗಿದೆ ಎನ್ನುವುದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನದಟ್ಟಾಗಿದೆ ಎಂದು ಅವರು ತಿಳಿಸಿದರು. ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ವೇದಿಕೆ ಗೊಯ್ಯುವ ಪಾಕಿಸ್ತಾನದ ಪ್ರಯತ್ನವನ್ನು ತಟಸ್ಥಗೊಳಿಸಲೂ ಭಾರತಕ್ಕೆ ಸಾಧ್ಯವಾಗಿದ್ದು, ಹಿಂಸೆ ಮತ್ತು ಭೀತಿವಾದ ಮುಕ್ತ ಪೂರಕ ವಾತಾವರಣವಿದ್ದರೆ ಮಾತ್ರ ಶಾಂತಿಯುತ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಹಜ ಸ್ಥಿತಿಗೆ ಮರಳಲು ಸಾಧ್ಯ ಎಂಬ ಸಂದೇಶವನ್ನೂ ಭಾರತದ ಸಂವಾದಕರಿಗೆ ರವಾನಿಸಲಾಗಿದೆ ಎಂದರು.
ಆದರೂ ಈ ಅವಧಿಯಲ್ಲಿ ದ್ವಿಪಕ್ಷೀಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳು ಪರಸ್ಪರ ಸಂಪರ್ಕದಲ್ಲಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X