Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧ್ಯಾದೇಶ: ಸೋನಿಯಾ, ಸಿಂಗ್ ಜೊತೆ...

ಅಧ್ಯಾದೇಶ: ಸೋನಿಯಾ, ಸಿಂಗ್ ಜೊತೆ ಮಾತುಕತೆಗೆ ಸಿದ್ಧವೆಂದಿದ್ದ ಅಡ್ವಾಣಿ

ವಾರ್ತಾಭಾರತಿವಾರ್ತಾಭಾರತಿ8 Feb 2017 11:40 PM IST
share

ಹೊಸದಿಲ್ಲಿ, ಫೆ.8: ಮಂಗಳವಾರ ಬೆಳಗ್ಗೆ ಪಕ್ಷದ ಸಂಸದರ ಸಭೆಯ ಬಳಿಕ ಹಿರಿಯ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರು ಸರಕಾರವನ್ನು ಕಾಡುತ್ತಿರುವ ಸಮಸ್ಯೆಯೊಂದನ್ನು ಬಗೆಹರಿಸಲು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಲು ತಾನು ಸಿದ್ಧನಿದ್ದೇನೆ ಎಂದು ಮೂವರು ಹಿರಿಯ ಸಚಿವರನ್ನು ತಡೆದು ನಿಲ್ಲಿಸಿ ತಿಳಿಸಿದ್ದರು.

 ಸಂಸತ್ ಭವನದಲ್ಲಿ ಸಭೆಯ ಬಳಿಕ ಹೊರಗೆ ಬರುತ್ತಿದ್ದ ವಿತ್ತಸಚಿವ ಅರುಣ್ ಜೇಟ್ಲಿ, ಕಾನೂನು ಸಚಿವ ರವಿಶಂಕರ ಪ್ರಸಾದ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಅವರೆದುರು ಅಡ್ವಾಣಿಯವರು ಈ ಕೊಡುಗೆಯನ್ನಿಟ್ಟಿದ್ದರು ಎನ್ನಲಾಗಿದೆ.
ಶತ್ರು ಆಸ್ತಿ ಕಾಯ್ದೆ ಕುರಿತು ಪದೇಪದೇ ಅಧ್ಯಾದೇಶ ಅಥವಾ ವಿಶೇಷ ಕಾರ್ಯಕಾರಿ ಆದೇಶವನ್ನು ಹೊರಡಿಸುವುದು ಸರಕಾರಕ್ಕೆ ಏಕೆ ಅನಿವಾರ್ಯವಾಗಿದೆ ಎನ್ನುವುದನ್ನು ಜೇಟ್ಲಿ ಅವರು ಸಾಪ್ತಾಹಿಕ ಸಭೆಯಲ್ಲಿ ಪಕ್ಷದ ಸಂಸದರಿಗೆ ವಿವರಿಸಿದ್ದರು. ಈ ಕಾಯ್ದೆಯು ಯುದ್ಧಗಳ ಬಳಿಕ ಪಾಕಿಸ್ತಾನ ಅಥವಾ ಚೀನಾಗಳಿಗೆ ವಲಸೆ ಹೋದವರ ಆಸ್ತಿಗಳ ವಾರಸುದಾರಿಕೆ ಅಥವಾ ವರ್ಗಾವಣೆ ಹಕ್ಕುಕೋರಿಕೆಗಳ ವಿರುದ್ಧ ರಕ್ಷಣೆಯನ್ನು ನೀಡುತ್ತದೆ.
ರಾಜಾ ಮಹಮೂದಾಬಾದ್‌ಗೆ ಸಂಬಂಧಿಸಿದ ಪ್ರಕರಣದಲ್ಲಿರುವ ಅಸಂಗತತೆಯೊಂದನ್ನು ನಿವಾರಿಸಲು ಈ ಅಧ್ಯಾದೇಶವು ಬಯಸಿದೆ. ಉತ್ತರ ಪ್ರದೇಶದಲ್ಲಿ ಭಾರೀ ಆಸ್ತಿಯನ್ನು ಹೊಂದಿದ್ದ, ರಾಜಮನೆತನಕ್ಕೆ ಸೇರಿದ ಅವರು ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ವಾಸವಾಗಿದ್ದರು. ಅವರ ಪತ್ನಿ ಮತ್ತು ಪುತ್ರ ಇಲ್ಲಿಯೇ ಉಳಿದುಕೊಂಡು ಆಸ್ತಿಯನ್ನು ವಶಪಡಿಸಿಕೊಳ್ಳುವ ಸರಕಾರದ ಹಕ್ಕನ್ನು ಪ್ರಶ್ನಿಸಿದ್ದರು.
ಸರ್ವೋಚ್ಚ ನ್ಯಾಯಾಲಯವು ರಾಜಾ ಕುಟುಂಬದ ಪರವಾಗಿ ನೀಡಿದ್ದ ತೀರ್ಪನ್ನು ನಿರರ್ಥಕಗೊಳಿಸಲು 2010ರಲ್ಲಿ ಯುಪಿಎ ಸರಕಾರವು ಮೊದಲ ಬಾರಿಗೆ ಅಧ್ಯಾದೇಶವನ್ನು ಹೊರಡಿಸಿತ್ತು.
ರಾಜ್ಯಸಭೆಯಲ್ಲಿ ಸರಕಾರಕ್ಕೆ ಬಹುಮತವಿಲ್ಲದ್ದರಿಂದ ಅಧ್ಯಾದೇಶವು ಲೋಕಸಭೆಯಲ್ಲಿ ಅಂಗೀಕಾರಗೊಂಡರೂ ರಾಜ್ಯಸಭೆಯಲ್ಲಿ ಅದಕ್ಕೆ ಅವಕಾಶ ದೊರೆಯುತ್ತಿಲ್ಲ. ಹೀಗಾಗಿ ಅದನ್ನು ಜೀವಂತವಿರಿಸಲು ಅಧ್ಯಾದೇಶಗಳ ಮೇಲೆ ಅಧ್ಯಾದೇಶಗಳನ್ನು ಹೊರಡಿಸುವುದು ಸರಕಾರಕ್ಕೆ ಅನಿವಾರ್ಯವಾಗಿದೆ.
 ಬಿಜೆಪಿ ಸಭೆ ಅಂತ್ಯಗೊಂಡಾಗ ಇದೊಂದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವೆಂದು ಬಣ್ಣಿಸಿದ್ದ ಅಡ್ವಾಣಿ, ತಾನೇ ಮಂಡಿಸಿದ್ದ ಶಾಸನವನ್ನು ಕಾಂಗ್ರೆಸ್ ಏಕೆ ತಡೆಯುತ್ತಿದೆ ಎಂದು ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X