Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ಮೇಯರ್-ಉಪಮೇಯರ್ ಸ್ಥಾನಕ್ಕೆ...

ಮನಪಾ ಮೇಯರ್-ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನೊಳಗೆ ಪೈಪೋಟಿ

ವಾರ್ತಾಭಾರತಿವಾರ್ತಾಭಾರತಿ9 Feb 2017 5:40 PM IST
share
ಮನಪಾ ಮೇಯರ್-ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನೊಳಗೆ ಪೈಪೋಟಿ

ಮಂಗಳೂರು, ಫೆ.9: ಮಂಗಳೂರು ಮಹಾನಗರ ಪಾಲಿಕೆಯ ನಾಲ್ಕನೆ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಮಾರ್ಚ್‌ನಲ್ಲಿ ನಡೆಯುವ ಚುನಾವಣೆಗೆ ಕಾಂಗ್ರೆಸ್‌ನೊಳಗೆ ತೀವ್ರ ಪೈಪೋಟಿ ಶುರುವಾಗಿದೆ.

ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲಾತಿಯನ್ನು ನಾಲ್ಕು ತಿಂಗಳ ಹಿಂದೆಯೇ ಸರಕಾರ ಪ್ರಕಟಿಸಿತ್ತು ಇದರ ವಿರುದ್ಧ ಜೆಡಿಎಸ್ ಕಾರ್ಪೊರೇಟರ್ ಅಬ್ದುಲ್ ಅಝೀಝ್ ಕುದ್ರೋಳಿ ಹೈಕೋರ್ಟ್ ವೆುಟ್ಟಲೇರಿದ್ದರು. ವಾದ-ವಿವಾದ ನಡೆದು ಕೊನೆಗೂ ನ್ಯಾಯಮೂರ್ತಿ ರಾಘವೇಂದ್ರ ಚವ್ಹಾಣ್ ನೇತೃತ್ವದ ಏಕಸದಸ್ಯ ಪೀಠವು ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

ಹಾಲಿ ಮೇಯರ್-ಉಪಮೇಯರ್ ಅವಧಿಯು ಮಾ.11ಕ್ಕೆ ಕೊನೆಗೊಳ್ಳಲಿದೆ. ಹಾಗಾಗಿ ಈ ಸ್ಥಾನಕ್ಕೆ ಮಾ.12ರಂದು ಚುನಾವಣೆ ನಡೆಯುವ ಸಾಧ್ಯತೆ ಇದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನ 14 ಮಹಿಳಾ ಕಾರ್ಪೊರೇಟರ್‌ಗಳಿಗೆ ಸ್ಪರ್ಧಿಸಲು ಅವಕಾಶವಿದ್ದು, ಆ ಪೈಕಿ ಕವಿತಾ ಸನಿಲ್, ಅಪ್ಪಿ, ನಾಗವೇಣಿಯ ಮಧ್ಯೆ ಪೈಪೋಟಿ ಇದೆ. ಉಪಮೇಯರ್ ಸ್ಥಾನವು ಪರಿಶಿಷ್ಟ ಜಾತಿಗೆ ಮೀಸಲಾದ ಕಾರಣ ಜೆಪ್ಪು ವಾರ್ಡ್‌ನ ಅಪ್ಪಿಗೆ ಮೇಯರ್ ಸ್ಥಾನ ಮರೀಚಿಕೆಯಾಗಬಹುದು. ಮೇಯರ್ ಸ್ಥಾನದ ಮುಂಚೂಣಿಯಲ್ಲಿರುವ ಕವಿತಾ ಸನಿಲ್‌ಗೆ ಬಹುತೇಕ ಕಾರ್ಪೊರೇಟರ್‌ಗಳ ವಿರೋಧವಿದೆ. ಆದರೆ ರಾಜ್ಯ ಹೈಕಮಾಂಡ್‌ನ ಬೆಂಬಲ ಪಡೆದು ಕವಿತಾ ಸನಿಲ್ ಮೇಯರ್ ಆದರೆ ಅಚ್ಚರಿ ಇಲ್ಲ.

ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಅಪ್ಪಿ, ನಾಗವೇಣಿ, ರಜನೀಶ್‌ಗೆ ಅವಕಾಶವಿದೆ. ಮೇಯರ್ ಸ್ಥಾನ ಮಹಿಳೆಗೆ ಮೀಸಲಾದ ಕಾರಣ ಉಪಮೇಯರ್ ಸ್ಥಾನ ಮತ್ತೆ ಮಹಿಳೆಗೆ ಸಿಗುವ ಸಾಧ್ಯತೆ ಇಲ್ಲ. ಹಾಗಾಗಿ ರಜನೀಶ್ ಈ ಸ್ಥಾನಕ್ಕೆ ಆಯ್ಕೆಯಾಗುವುದು ನಿಚ್ಛಳವಾಗಿದೆ.
ಮನಪಾ 60 ಸ್ಥಾನಗಳ ಪೈಕಿ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್ 2, ಸಿಪಿಎಂ 1, ಎಸ್‌ಡಿಪಿಐ 1 ಹಾಗು ಬಿಜೆಪಿ ಬಂಡಾಯ 1 ಸ್ಥಾನ ಹೊಂದಿದೆ. ಬಿಜೆಪಿಗೆ ಬಹುಮತವಿಲ್ಲದಿದ್ದರೂ ಕೂಡ ಅವಿರೋಧ ಆಯ್ಕೆಯನ್ನು ತಡೆಯುವ ನಿಟ್ಟಿನಲ್ಲಿ ಸ್ಪರ್ಧಿಸಲಿದೆ. 60 ಕಾರ್ಪೊರೇಟರ್‌ಗಳ ಪೈಕಿ ಕಾಂಗ್ರೆಸ್ 14, ಬಿಜೆಪಿ 6, ಜನತಾ ದಳ 1, ಬಿಜೆಪಿ ಬಂಡಾಯ 1 ಹೀಗೆ 22 ಮಂದಿ ಮಹಿಳೆಯರಿದ್ದಾರೆ. ಮೇಯರ್ ಸ್ಥಾನಕ್ಕೆ ಇವರೆಲ್ಲರಿಗೂ ಸ್ಪರ್ಧಿಸುವ ಅವಕಾಶವಿದೆ.

ಪ್ರಸಕ್ತ ಸಾಲಿನ ಮೊದಲ ಅವಧಿಯ ಮೀಸಲಾತಿಯನ್ನು ಅಬ್ದುಲ್ ಅಝೀಝ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ಕಾರಣ 1 ವರ್ಷ ವಿಳಂಬವಾಗಿತ್ತು. ಕಾರ್ಪೊರೇಟರ್‌ಗಳಾಗಿ ಚುನಾಯಿತರಾಗಿದ್ದರೂ ಕೂಡ ಕೌನ್ಸಿಲ್ ಸಭೆ ನಡೆಸುವಂತಿರಲಿಲ್ಲ. ಬಳಿಕ ಮಹಾಬಲ ಮಾರ್ಲ, ಜೆಸಿಂತಾ ವಿಜಯ ಆಲ್ಫ್ರೆಡ್, ಹರಿನಾಥ್ ಮೇಯರ್ ಆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X