Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಫೆ.11, 12ರಂದು ಜೇನುಮೇಳ,...

ಮಂಗಳೂರು: ಫೆ.11, 12ರಂದು ಜೇನುಮೇಳ, ಸಾವಯವ ಮೇಳ

ವಾರ್ತಾಭಾರತಿವಾರ್ತಾಭಾರತಿ9 Feb 2017 7:39 PM IST
share

ಮಂಗಳೂರು, ಫೆ.9: ತೋಟಗಾರಿಕೆ ಬೆಳೆಗಳಲ್ಲಿ ಪರಾಗಸ್ಪರ್ಶ ಮೂಲಕ ಇಳುವರಿ ಹೆಚ್ಚು ಮಾಡಲು, ಜೇನು ಸಾಕಣೆ ಮೂಲಕ ರೈತರು ತಮ್ಮ ಆದಾಯ ಹೆಚ್ಚಿಸಲು ಜೇನು ಸಾಕಣೆ, ಜೇನು ಆಧಾರಿತ ಚಟುವಟಿಕೆಗಳಿಗೆ ಉತ್ತೇಜನ ನೀಡಲು, ಜೇನಿನ ಬಳಕೆ ಹೆಚ್ಚಿಸಲು ಹಾಗೂ ಜೇನಿನ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಲು ಜೇನುಮೇಳ ಮತ್ತು ಸಾವಯವ ಮೇಳವನ್ನು ಜಿಪಂ, ತೋಟಗಾರಿಕೆ ಇಲಾಖೆ ವತಿಯಿಂದ ಕದ್ರಿ ಉದ್ಯಾನವನದಲ್ಲಿ ಫೆ.11,12ರಂದು ಏರ್ಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಯೋಗೀಶ್ ತಿಳಿಸಿದರು.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಂಸದ ನಳಿನ್‌ಕುಮಾರ್ ಕಟೀಲ್ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದು, ಶಾಸಕ ಜೆ.ಆರ್. ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಳಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಇದರ ಉಪಯೋಗವನ್ನು ಸಾರ್ವಜನಿಕರು ಹಾಗೂ ರೈತರು ಪಡೆಯಲು ಮನವಿ ಮಾಡಿದರು.

ಜೇನು ಸಾಕಣೆಗೆ ಸಂಬಂಧಿಸಿದ ವಿವಿಧ ಪರಿಕರಗಳ ಪ್ರದರ್ಶನ, ಜೀವಂತ ಜೇನು ಕುಟುಂಬ ಪ್ರದರ್ಶನ, ಜೇನಿನ ವಿವಿಧ ಪ್ರಭೇದಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ. ಆಯುಷ್ ಇಲಾಖೆಯಿಂದ ಜೇನಿನ ಉಪಯೋಗಗಳು ಹಾಗೂ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಲಿದ್ದಾರೆ. ಎಸ್‌ಡಿಎಂ ನಾಚ್ಯುರೋಪತಿ ಕಾಲೇಜು ವಿದ್ಯಾರ್ಥಿಗಳಿಂದ ಜೇನಿನ ವಿವಿಧ ಪೇಯಗಳ ತಯಾರಿ ಹಾಗೂ ಮಾರಾಟ ನಡೆಯಲಿದೆ ಎಂದರು.

ಸಾವಯವ ಕೃಷಿಕ ಗ್ರಾಹಕರ ಬಳಗ ಮಂಗಳೂರು ಇವರಿಂದ ಸಾವಯವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ವಿವಿಧ ತರಕಾರಿ ಬೆಳೆಗಳ ಬೀಜಗಳ ಮಾರಾಟವಿದೆ. ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಫೆ.11ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ತಿಳಿಸಿದರು.

ಸುಮಾರು 500 ರೈತರು ಸಾವಯವ ಕೃಷಿಯ ಉಪಯೋಗದ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಜೇನು ಮೇಳದಲ್ಲಿ 40 ಮಳಿಗೆಗಳು ತೆರೆಯಲಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕಿ ಸೀಮಾ, ಜೇನು ಅಭಿವೃದ್ಧಿ ತಜ್ಞ ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X