Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಸೂದ್ ನಿಷೇಧಕ್ಕೆ ತಡೆ : ಚೀನಾ ಸಮರ್ಥನೆ

ಮಸೂದ್ ನಿಷೇಧಕ್ಕೆ ತಡೆ : ಚೀನಾ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ9 Feb 2017 8:31 PM IST
share
ಮಸೂದ್ ನಿಷೇಧಕ್ಕೆ ತಡೆ : ಚೀನಾ ಸಮರ್ಥನೆ

ಬೀಜಿಂಗ್, ಫೆ.9: ಪಠಾಣ್‌ಕೋಟ್ ದಾಳಿಯ ರೂವಾರಿ ಹಾಗೂ ಜೆಇಎಂ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯಲ್ಲಿ ಘೋಷಿಸುವ ಅಮೆರಿಕದ ಪ್ರಸ್ತಾವನೆಯನ್ನು ತಡೆಹಿಡಿದಿರುವ ತನ್ನ ನಿಧಾರರ್ವನ್ನು ಚೀನಾ ಸಮರ್ಥಿಸಿಕೊಂಡಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್, ಈ ಕುರಿತಂತೆ ಒ ್ಮುತ ಮೂಡಿಲ್ಲ ಎಂದು ತಿಳಿಸಿದರು.

ಪ್ರಸ್ತಾವನೆಯನ್ನು ಬೆಂಬಲಿಸಲು ಚೀನಾದ ಷರತ್ತನ್ನು ಪೂರೈಸಿಲ್ಲ ಎಂವರು ಹೇಳಿದರು. ಕಳೆದ ಬಾರಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1,267 ಸಮಿತಿಗಳು ಈ ವಿಷಯದ ಕುರಿತು ಚರ್ಚೆ ನಡೆಸಿದ್ದು ಚರ್ಚೆಯಲ್ಲಿ ಯಾವುದೇ ಒಮ್ಮತಾಭಿಪ್ರಾಯ ಮೂಡಿಬಂದಿಲ್ಲ ಎಂದವರು ತಿಳಿಸಿದರು.

ತಾಂತ್ರಿಕ ಕಾರಣದಿಂದ ನಾವು ಈ ಪ್ರಸ್ತಾವನೆಯನ್ನು ತಡೆದಿದ್ದೇವೆ. ಸಂಬಂಧಿತ ಪಕ್ಷಗಳು ಪರಸ್ಪರ ಚರ್ಚಿಸಲು ಹೆಚ್ಚಿನ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ ಎಂದವರು ಹೇಳಿದರು. ಪಾಕ್ ಮೂಲದ ಮಸೂದ್ ಅಜರ್‌ನನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಈ ಬಾರಿ ಅಮೆರಿಕಾ ಮುಂದಿರಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಪ್ರಸ್ತಾವನೆ ಮುಂದಿರಿಸಲಿ , ಸಮಿತಿಗೆ ಅದರದ್ದೇ ಆದ ನಿಯಮಗಳಿವೆ .

ಭದ್ರತಾ ಮಂಡಳಿಯ ನೀತಿ ನಿಯಮಗಳಿಗೆ ಅನುಸಾರವಾಗಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದರು. ಇದರಿಂದ ಭಾರತ-ಚೀನಾ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲವೇ ಎಂಬ ಪ್ರಶ್ನೆಗೆ, ಯಾವುದೇ ಋಣಾತ್ಮಕ ಪರಿಣಾಮ ಬೀರದು ಎಂದು ನಾವು ಆಶಿಸುತ್ತಿದ್ದೇವೆ ಎಂದು ಉತ್ತರಿಸಿದರು.

ಪಾಕಿಸ್ತಾನದ ಕೋರಿಕೆಯಂತೆ ಚೀನಾ ಈ ರೀತಿ ಮಾಡುತ್ತಿದೆ ಎಂಬ ಟೀಕೆಗೆ ಉತ್ತರಿಸಿದ ಲು ಕಾಂಗ್, ಭದ್ರತಾ ಮಂಡಳಿಯ ಕಾರ್ಯವಿಧಾನ ಮತ್ತು ನಿಯಮದ ಅನುಸಾರ ಚೀನಾ ಕಾರ್ಯ ನಿರ್ವಹಿಸುತ್ತಿದೆ ಎಂದರು. ಭಾರದತೊಂದಿಗೆ ಈ ವಿಷಯದ ಕುರಿತು ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ತಾಂತ್ರಿಕ ಕಾರಣದಿಂದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ.

ಸಂಬಂಧಿತ ಪಕ್ಷಗಳು ಪರಸ್ಪರ ಚರ್ಚಿಸಲು ಹೆಚ್ಚಿನ ಕಾಲಾವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ ಎಂದ ಅವರು, ಈ ವರ್ಷವಾದರೂ ಈ ವಿಷಯದ ಕುರಿತ ಗೊಂದಲ ಬಗೆಹರಿದೀತೇ ಎಂಬ ಪ್ರಶ್ನೆಗೆ, ಇದರಲ್ಲಿ ಸಮಯದ ಪ್ರಶ್ನೆ ಬರುವುದಿಲ್ಲ. ಎಷ್ಟು ಬೇಗ ಒಮ್ಮತ ಮೂಡುತ್ತದೆ ಎಂಬುದು ಪ್ರಮುಖವಾಗಿದೆ ಎಂದರು.

ಅಜರ್ ಮೇಲೆ ನಿಷೇಧದ ಕುರಿತ ಪ್ರಸ್ತಾವನೆಯನ್ನು ಮೂರನೇ ಬಾರಿ ಚೀನಾ ತಿರಸ್ಕರಿಸಿದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X