Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನ ಸೌಧ, ಲೋಕಸಭೆಯ ಎದುರು ಬಸವೇಶ್ವರ ...

ವಿಧಾನ ಸೌಧ, ಲೋಕಸಭೆಯ ಎದುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕಿತ್ತು: ಸಾಹಿತಿ ರಂಜಾನ್ ದರ್ಗಾ

ವಾರ್ತಾಭಾರತಿವಾರ್ತಾಭಾರತಿ9 Feb 2017 8:42 PM IST
share
ವಿಧಾನ ಸೌಧ, ಲೋಕಸಭೆಯ ಎದುರು ಬಸವೇಶ್ವರ  ಮೂರ್ತಿ ಪ್ರತಿಷ್ಠಾಪಿಸಬೇಕಿತ್ತು: ಸಾಹಿತಿ ರಂಜಾನ್ ದರ್ಗಾ

ಹರಪನಹಳ್ಳಿ, ಫೆ.9: ನಾನು ಮೂರ್ತಿ ಪ್ರಿಯನಲ್ಲ. ಆದರೂ, ಜಗತ್ತಿಗೆ ಒಳಿತನ್ನು ತಿಳಿಸಿದ ಜಗಜ್ಯೋತಿ ಬಸವೇಶ್ವರರ ಮೂರ್ತಿಯನ್ನು ವಿಧಾನ ಸೌಧ, ಲೋಕಸಭೆಯ ಎದುರು ಪ್ರತಿಷ್ಠಾಪಿಸಬೇಕಿತ್ತು ಎಂದು ಬೀದರನ ಬಸವ ಅಧ್ಯಯನ ಪೀಠದ ಆಡಳಿತಾಧಿಕಾರಿ, ಸಾಹಿತಿ ರಂಜಾನ್ ದರ್ಗಾ ಅಭಿಪ್ರಾಯಪಟ್ಟರು.

ಅವರು ತಾಲೂಕಿನ ನೀಲಗುಂದ ಗ್ರಾಮದಲ್ಲಿ ನಡೆಯುತ್ತಿರುವ ತಾಲೂಕು ಮಟ್ಟದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.

ಜಗಜ್ಯೋತಿ ಬಸವಣ್ಣನ ಅವರ ಮೂರ್ತಿ ಎಲ್ಲೆಲ್ಲೊ ಇರುವುದಕ್ಕಿಂತ ಪಾರ್ಲಿಮೆಂಟ್ ಮುಂದೆ ಇರಬೇಕು. ವಚನಗಳನ್ನು ಬಸವಾದಿ ಶರಣರು ಎಲ್ಲೆಡೆ ವಿಜೃಂಭಿಸಿದ್ದು, ಬಸವಾದಿ ಪ್ರಮುಖರಿಂದಾಗಿ ಕನ್ನಡ ಧರ್ಮದ ಭಾಷೆಯಾಗಿ ಮಾರ್ಪಟ್ಟಿತು. ಜಗತ್ತಿನ ಕೇವಲ 15 ಧರ್ಮದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಅವರು ನುಡಿದರು.

ಧರ್ಮ ದೇವರಿಗಿಂತ ದೊಡ್ಡದಾದಾಗ ಸಮಾಜದಲ್ಲಿ ಕೋಮು ಗಲಭೆಗಳು ಆಗುತ್ತವೆ. ಆದ್ದರಿಂದ ದೇವರಿಗಿಂತ ಧರ್ಮ ದೊಡ್ಡದಲ್ಲ ಎಂದು ಎಲ್ಲರೂ ಅರಿಯಬೇಕಿದೆ ಎಂದು ಹೇಳಿದರು.

ತೆಗ್ಗಿನಮಠದ ವರಸದ್ಯೋಜಾತ ಶ್ರೀ ಸಾನ್ನಿದ್ಯ ವಹಿಸಿ ಮಾತನಾಡಿ, ಕನ್ನಡ ಭಾಷೆ ಅತ್ಯಂತ ಪ್ರಾಚೀನ ಹಾಗೂ ಸುಂದರ ಭಾಷೆಯಾಗಿದ್ದು, ಇಂತಹ ಅನೇಕ ಕಾರ್ಯಕ್ರಮ ಮಾಡುವ ಹಾಗೂ ದಿನನಿತ್ಯ ಜೀವನದಲ್ಲಿ ತಪ್ಪದೆ ಅಳವಡಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯ ಉಳುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಅವರು ನುಡಿದರು.

 ಕಸಾಪ ತಾಲೂಕು ಅಧ್ಯಕ್ಷ ಡಿ. ರಾಮನಮಲಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಕೆ.ಆರ್. ಜಯಶೀಲ, ರಶ್ಮಿ ರಾಜಪ್ಪ, ತಾಪಂ ಉಪಾಧ್ಯಕ್ಷ ಮಂಜನಾಯ್ಕ, ಪಿಕಾಡ್‌ರ್ ಬ್ಯಾಂಕ್ ಅಧ್ಯಕ್ಷ ಬೇಲೂರು ಸಿದ್ದೇಶ, ಎಂ. ವಾಗೀಶ, ತೆಗ್ಗಿನಮಠ ಸಂಸ್ಥೆಯ ವ್ಯವಸ್ಥಾಪಕ ಟಿ.ಎಂ. ಚಂದ್ರಶೇಕರಯ್ಯ, ಎಸ್. ಮಡಿವಾಳಪ್ಪ, ಐ.ಜಿ. ಹಾಲನಗೌಡ, ಎ. ವಿಜಯಪ್ಪ, ಪುಣಭಗಟ್ಟಿ ನಿಂಗಪ್ಪ, ಕಸಾಪ ಕಾರ್ಯದರ್ಶಿಗಳಾದ ಸಿ. ಗಂಗಾಧರ, ಹೇಮಣ್ಣ ಮೋರಗೇರಿ, ಖಜಾಂಚಿ ಕೆ. ಉಚ್ಚೆಂಗೆಪ್ಪ, ಮಾಲತೇಶ ಮರಿಗೌಡರು, ಇಸ್ಮಾಯಿಲ್ ಎಲಿಗಾರ ಉಪಸ್ಥಿತರಿದ್ದರು.

ಸಾಹಿತಿ ಇಸ್ಮಾಯಿಲ್ ಎಲಿಗಾರ ಆಶಯ ನುಡಿಗಳನ್ನಾಡಿದರು. ಉಪನ್ಯಾಸಕ ಎಚ್. ಮಲ್ಲಿಕಾರ್ಜುನ ಅವರು ಮಾತನಾಡಿದರು. 20ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡಿದರು.

ಕಾವ್ಯ ಸಂಕಷ್ಟದಲ್ಲಿದೆ...
ಇಂದಿನ ಕಾವ್ಯ ಸಂಪೂರ್ಣ ಸಂಕಷ್ಟದಲ್ಲಿದೆ. ಕಾವ್ಯ ಬರೆಯುವವರಿದ್ದರೂ ಕೇಳಿಸಿಕೊಳ್ಳುವಂತವರು ಯಾರೂ ಇಲ್ಲ ಎಂದು ಸಾಹಿತಿ ಬಿ.ಎನ್. ಮಲ್ಲೇಶ ವಿಷಾಧಿಸಿದರು.

ಕವಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕವಿತೆಗಳ ಪುಸ್ತಕಗಳು ಖರೀದಿ ಯಾಗಲ್ಲ, ಒಂದೆರಡು ಮುದ್ರಣ ಮಾದ್ಯಮಗಳು ಹೊರತು ಪಡಿಸಿದರೆ ಉಳಿದ ಪತ್ರಿಕೆಗಳು ಕವನಗಳನ್ನು ಪ್ರಕಟ ಮಾಡುವುದಿಲ್ಲ ಎಂದ ಅವರು, ಕವನ ರಚನೆ ಆತ್ಮ ವೇದನೆಯಾಗಿ ಪರಿಣಮಿಸುತ್ತದೆ. ಪ್ರತಿಯೊಬ್ಬರೂ ಓದುವಂತಹ ಕವಿತೆ ಬರೆಯಬೇಕು ಎಂದು ಅವರು ಕವಿಗಳಿಗೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X